Latest Updates
-
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ!
TATA: ಅಖಾಡಕ್ಕೆ ಟಾಟಾದ ಹೊಸ ಹುಲಿ.. ಸೇಫ್ಟಿ ಬಗ್ಗೆ ತಲೆಕೆಡಿಸಿಕೊಳ್ಳುವಂತಿಲ್ಲ, ಬೆಲೆ ಎಷ್ಟು?
ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯವಾಗಿ 1991 ರಲ್ಲಿ ಮೊದಲ ಬಾರಿಗೆ 'ಸಿಯೆರಾ' ಕಾರನ್ನು ಪರಿಚಯಿಸಲಾಗಿತ್ತು. ಅಂದಿಗೆ ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿತ್ತು. ಸರಿ ಸುಮಾರು 1 ದಶಕಗಳ ಕಾಲ ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿತ್ತು. ಆದರೆ, 2003 ರಲ್ಲಿ ನಾನಾ ಕಾರಣಗಳಿಗೆ ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಲಾಯಿತ್ತು. ಸದ್ಯ, ಇದೇ 'ಸಿಯೆರಾ' ಹೊಸ ರೂಪದಲ್ಲಿ ಬಿಡುಗಡೆಗೊಳ್ಳಲು ಹಣಿಯಾಗಿದೆ.
ನವೆಂಬರ್ 25 ರಂದು ಟಾಟಾ ಸಿಯೆರಾ (Tata Sierra) ಎಸ್‌ಯುವಿಯು ಅದ್ದೂರಿಯಾಗಿ ಮಾರಾಟಕ್ಕೆ ಬರಲಿದೆ. ಈ ಬಗ್ಗೆ ಸ್ವತಃ ಕಂಪನಿಯೇ ಘೋಷಣೆ ಮಾಡಿದೆ. ಪಾದಾರ್ಪಣೆಗೂ ಮುನ್ನ ನವೆಂಬರ್ 15 ರಂದು ನೂತನ 'ಸಿಯೆರಾ'ವನ್ನು ಅನಾವರಣಗೊಳಿಸಲಾಗುತ್ತದೆ ಎಂಬ ವಿವರಗಳು ಲಭ್ಯವಾಗಿವೆ.

ಹೊಸ 'ಟಾಟಾ ಸಿಯೆರಾ' ಐಸಿಇ (ಪೆಟ್ರೋಲ್/ ಡೀಸೆಲ್) ಮತ್ತು ಎಲೆಕ್ಟ್ರಿಕ್ ಚಾಲಿತ ರೂಪದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಆರಂಭದಲ್ಲಿ ಮೊದಲಿಗೆ 'ಎಲೆಕ್ಟ್ರಿಕ್' ಮಾಡೆಲ್ ಬಿಡುಗಡೆಯಾಗಲಿದೆ ಎನ್ನಲಾಗಿತ್ತು. ಆದರೀಗ ಪ್ರಪ್ರಥಮವಾಗಿ 'ಐಸಿಇ' ಮಾಡೆಲ್‌ನ್ನೇ ಪರಿಚಯಿಸುವ ಎಲ್ಲ ಸಾಧ್ಯತೆಯಿದೆ.
ನೂತನ 'ಸಿಯೆರಾ' ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಈ ವರ್ಷಾರಂಭದ ಜನವರಿಯಲ್ಲಿ ಮುಕ್ತಾಯಗೊಂಡ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ'ದಲ್ಲೂ ಇದೇ 'ಸಿಯೆರಾ'ವನ್ನು ಪ್ರದರ್ಶಿಸಲಾಗಿತ್ತು. ಅಲ್ಲಿ ತೋರಿಸಲಾದ ಮಾಡೆಲ್ ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, ಅಲಾಯ್ ವೀಲ್‌ಗಳನ್ನು ಒಳಗೊಂಡಿತ್ತು.
ಈ ಕಾರು 5 ಆಸನಗಳನ್ನು ಹೊಂದಿರಲಿದ್ದು, ಪ್ರಯಾಣಿಕರು ಸುಲಭವಾಗಿಯೂ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 450 ಲೀ.ನಷ್ಟು ಬೂಟ್ ಸ್ಪೇಸ್ ಒಳಗೊಂಡಿರುವ ನಿರೀಕ್ಷೆಯಿದೆ. ಜೊತೆಗೆ 200 ಮಿ.ಮೀ ಗ್ರೌಂಡ್ ಕ್ಲಿಯರೆನ್ ಮತ್ತು 2,650 ಮಿ.ಮೀ ವೀಲ್‌ಬೇಸ್‌ನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ.
ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿರಲಿದೆ. 'ಐಸಿಇ' ಮಾಡೆಲ್, 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊಚಾರ್ಜ್ಡ್ ಪೆಟ್ರೋಲ್ ಮತ್ತು 1.5-ಲೀ. ಟರ್ಬೊ ಡೀಸೆಲ್ ಎಂಜಿನ್‌ನ್ನು ಒಳಗೊಂಡಿರುವ ಸಾಧ್ಯತೆಯಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದುಕೊಂಡಿರಬಹದು ಎನ್ನಲಾಗಿದೆ. ಸರಿ ಸುಮಾರು 20 ಕಿ.ಮೀವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ.
ಹೊಸ 'ಸಿಯೆರಾ'ದ ಎಲೆಕ್ಟ್ರಿಕ್ ಮಾಡೆಲ್, 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ದೂರದ ಊರುಗಳಿಗೆ ಆರಾಮಾಯಕವಾಗಿ ತೆರಳಲು ಸಾಧ್ಯವಾಗುವಂತೆ ಭರ್ತಿ ಚಾರ್ಜ್‌ನಲ್ಲಿ 627 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುವ ನಿರೀಕ್ಷೆಯಿದೆ.
ಈ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (14.5 ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಪಡೆದಿರಲಿದೆ ಎನ್ನಲಾಗಿದೆ. ಅದೇ ರೀತಿಯಲ್ಲಿ ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದುಕೊಂಡಿರುವ ಸಾಧ್ಯತೆಯೂ ಹೆಚ್ಚಿದೆ.
ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.11 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ನೂತನ 'ಸಿಯೆರಾ'ಗೆ ಮಾರುತಿ ಸುಜುಕಿ ವಿಕ್ಟೋರಿಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಹಾಗೂ ಹೋಂಡಾ ಎಲಿವೇಟ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.
Credit: Drivespark



Click it and Unblock the Notifications