Latest Updates
-
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್!
"ನಿಮ್ಮ ಡಿ ಬಾಸ್ ಪರ್ವಾಗಿಲ್ಲ..ಇಷ್ಟು ಕಷ್ಟದಲ್ಲೂ ಮಾನಸಿಕವಾಗಿ ಸ್ಟ್ರಾಂಗ್ ಇದ್ದಾರೆ"; ಅಪ್‌ಡೇಟ್ ಕೊಟ್ಟ ವಿಜಯಲಕ್ಷ್ಮಿ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಷ್ಟದ ದಿನಗಳು ಇನ್ನೂ ಮುಗಿದಿಲ್ಲ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಆರೋಪಿಯಾಗಿದ್ದು, ಜೈಲಿನಲ್ಲಿ ಇದ್ದಾರೆ. ಇವರ ಟ್ರಯಲ್‌ನಲ್ಲಿ ಇದ್ದು, ವಿಚಾರಣೆ ನಡೆಯುತ್ತಿದೆ. ಈ ಕೇಸ್ ಮುಗಿಯುವವರೆಗೂ ಅವರು ಜೈಲಿನಲ್ಲಿಯೇ ಇರಬೇಕಾದ ಪರಿಸ್ಥಿತಿಯಿದೆ. ಇತ್ತ ಅವರ ಅಭಿಮಾನಿಗಳು ದರ್ಶನ್ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಜೈಲಿನಲ್ಲಿ ಇದ್ದಾಗ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಈ ಕಾರಣದ ಮೇಲೆ ಜಾಮೀನು ಪಡೆದು ಹೊರ ಬಂದಿದ್ದರು. ಆದರೆ, ಸುಪ್ರೀಂ ಕೋರ್ಟ್ ಜಾಮೀನನ್ನು ರದ್ದು ಮಾಡಿದ್ದರಿಂದ ದರ್ಶನ್ ಮತ್ತೆ ಜೈಲಿಗೆ ವಾಪಾಸ್ ಹಿಂತಿರುಗಬೇಕಾಯ್ತು. ಹೀಗಾಗಿ ದರ್ಶನ್ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೈಲಿನಲ್ಲಿ ಇದ್ದು ಹಲವು ತಿಂಗಳಾಗಿದ್ದರಿಂದ ದರ್ಶನ್ ಮಾನಸಿಕ ಸ್ಥಿತಿ ಬಗ್ಗೆ ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾಗಳಲ್ಲಿ ಆತಂಕ ಹೊರ ಹಾಕುತ್ತಿದ್ದರು.

ದರ್ಶನ್ ಅಭಿಮಾನಿಗಳ ಈ ಆತಂಕಕ್ಕೆ ವಿಜಯಲಕ್ಷ್ಮಿ ದರ್ಶನ್ ರಿಲೀಫ್ ಕೊಟ್ಟಿದ್ದಾರೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಧನ್ವೀರ್ ನಟಿಸಿದ 'ಹಯಗ್ರೀವ' ಸಿನಿಮಾ ಇವೆಂಟ್‌ನಲ್ಲಿ ಭಾಗಿಯಾಗಿದ್ದರು. ಈ ವೇಳೆ ದರ್ಶನ್ ಅವರ ಮಾನಸಿಕ ಸ್ಥಿತಿಯ ಬಗ್ಗೆ ವಿಜಯಲಕ್ಷ್ಮಿ ದರ್ಶನ್ ಅವರು ಅಪ್‌ಡೇಟ್ ಕೊಟ್ಟಿದ್ದಾರೆ. ಇದನ್ನು ಕೇಳಿ ದರ್ಶನ್ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಅಷ್ಟಕ್ಕೂ ಅವರು ಏನು ಹೇಳಿದ್ದಾರೆಂದು ನೋಡುವುದಾರೇ,
ನಟ ಧನ್ವೀರ್ ನಟನೆಯ 'ಹಯಗ್ರೀವ' ಸಿನಿಮಾ ಇದೇ ಫೆಬ್ರವರಿ 27ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿತ್ತು. ಈ ಕಾರ್ಯಕ್ರಮಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಅತಿಥಿಗಳಾಗಿ ಶುಭಕೋರುವುದಕ್ಕೆ ಬಂದಿದ್ದರು. ಹಾಗೇ 'ಹಯಗ್ರೀವ' ಸಿನಿಮಾದ ಟ್ರೈಲರ್ ಅನ್ನು ಲಾಂಚ್ ಮಾಡಿದ್ದರು. ಈ ವೇಳೆ ಧನ್ವೀರ್ ತಮ್ಮ ಕುಟುಂಬದ ಸದಸ್ಯ ಎಂದು ಪರಿಗಣಿಸಿದ್ದೇವೆ ಎಂದು ದರ್ಶನ್ ಫ್ಯಾನ್ಸ್‌ಗೆ ಹೇಳಿದ್ದಾರೆ.
ತಮ್ಮ ಪ್ರೀತಿಯ ಸೆಲೆಬ್ರೆಟಿಗಳಿಗೆ ಕೈಮುಗಿದು ಧನ್ಯವಾದ ತಿಳಿಸಿದ ನಟ ದರ್ಶನ್ ತೂಗುದೀಪ
"ಧನ್ವೀರ್ ಅವರ ಟ್ರೈಲರ್ ನೋಡಿದೆ. ಆಕ್ಷನ್ ಫ್ಯಾಕ್ಡ್ ಮೂವಿ ಅನಿಸುತ್ತೆ. ಇಡೀ ಚಿತ್ರರಂಗಕ್ಕೆ ಧನ್ವೀರ್ ಅವರಿಗೆ, ಸಂಜನಾ ಅವರಿಗೆ ಒಳ್ಳೆಯದಾಗಲಿ. ಈ ಚಿತ್ರ ಅವರಿಗೆ ಒಳ್ಳೆಯ ಹೆಸರು ಹಾಗೂ ಯಶಸ್ಸು ತಂದುಕೊಡಲಿ ಅಂತ ಕೇಳಿಕೊಳ್ಳುತ್ತೇನೆ. ಧನ್ವೀರ್ ಅವರು ಹೊರಗಿನವರು ಅಂತ ನಮಗೆ ಅನಿಸೋದೇ ಇಲ್ಲ. ನನಗಾಗಲಿ, ದರ್ಶನ್ ಅವರಿಗಾಗಲಿ ಅವರು ಕುಟುಂಬದವರು ಇದ್ದಂತೆ. ಅವರು ನಮ್ಮ ಕುಟುಂಬದಲ್ಲಿ ಒಬ್ಬ ಸದಸ್ಯ ಅಂತ ಪರಿಗಣಿಸಿದ್ದೇವೆ. ನಮಗೆ ಎಷ್ಟು ಪ್ರೀತಿ ಹಾಗೂ ಬೆಂಬಲ ನೀಡುತ್ತಿರೋ ಅವರಿಗೆ ಪ್ರೀತಿ ಹಾಗೂ ಬೆಂಬಲ ತೋರಿಸಿ. ಇದೇ 27ಕ್ಕೆ ಅವರ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ." ಎಂದು ವಿಜಯಲಕ್ಷ್ಮಿ ದರ್ಶನ್ ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ದರ್ಶನ್ ಅಭಿಮಾನಿಗಳು ಡಿ ಬಾಸ್ ಎಂದು ಕೂಗು ಹಾಕುತ್ತಿದ್ದರು. ದರ್ಶನ್ ಬಗ್ಗೆ ಜೈಕಾರ ಹಾಕುತ್ತಿದ್ದರು. ಈ ಸಂದರ್ಭದಲ್ಲಿ ವೇದಿಕೆ ಮೇಲೆ ದರ್ಶನ್ ಬಗ್ಗೆ ವಿಜಯಲಕ್ಷ್ಮಿ ಅಪ್‌ಡೇಟ್ ಕೊಟ್ಟಿದ್ದಾರೆ. ಇತ್ತೀಚೆಗೆ ಫೆಬ್ರವರಿ 16) ದರ್ಶನ್ ಬರ್ತ್‌ಡೇ ಆಚರಿಸಿಕೊಂಡಿದ್ದರು. ಈ ವೇಳೆ ಜೈಲಿಗೆ ಹೋಗಿ ದರ್ಶನ್ ಅವರನ್ನು ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಭೇಟಿ ಮಾಡಿದ್ದರು. ಜೈಲಿನಲ್ಲಿ ದರ್ಶನ್ ಮಾನಸಿಕವಾಗಿ ಕುಗ್ಗಿದ್ದಾರೆಂದು ಸುದ್ದಿ ಹರಿದಾಡಿದ ಹಿನ್ನೆಲೆಯಲ್ಲಿ ಫ್ಯಾನ್ಸ್‌ಗೆ ಅವರ ಮೆಂಟಲ್ ಹೆಲ್ತ್ ಬಗ್ಗೆ ಅಪ್‌ಡೇಟ್ ಮಾಡಿದ್ದಾರೆ.
"ನಿಮ್ಮ ಡಿ ಬಾಸ್ ಪರ್ವಾಗಿಲ್ಲ ಚೆನ್ನಾಗಿದ್ದಾರೆ. ಇಷ್ಟು ಕಷ್ಟದಲ್ಲೂ ನೋವಿನಲ್ಲೂ ಅವರು ಮಾನಸಿಕವಾಗಿ ತುಂಬಾನೇ ಸ್ಟ್ರಾಂಗ್ ಆಗಿ ಇದ್ದಾರೆ. ಅದಕ್ಕೆ ಕಾರಣ ನೀವುಗಳು. ನೀವೆಲ್ಲ ಅವರೊಂದಿಗೆ ಇದೀರಾ ಎಂದು ಅವರು ತುಂಬಾನೇ ಧೈರ್ಯದಿಂದ ಇದ್ದಾರೆ. ಇದೇ ರೀತಿ ನಮ್ಮ ಮೇಲೆ ಸದಾ ಪ್ರೀತಿ ಇರಲಿ." ಎಂದು ವಿಜಯಲಕ್ಷ್ಮಿ ದರ್ಶನ್ ವೇದಿಕೆ ಮೇಲೆ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.
Credit: Filmibeat



Click it and Unblock the Notifications
