Latest Updates
-
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ!
ನಟಿಯರು ನಿಮ್ಮಿಷ್ಟಕ್ಕೆ ಬಳಸುವ ವಸ್ತುಗಳಲ್ಲ; ಯುವ ರಾಜ್ಕುಮಾರ್ ಕೆಂಡಾಮಂಡಲ
ಕನ್ನಡ ನಟ ಯುವ ರಾಜ್ಕುಮಾರ್ ಒಂದು ಗಂಭೀರ ವಿಚಾರದ ಬಗ್ಗೆ ದನಿ ಎತ್ತಿದ್ದಾರೆ. ಕಲಾವಿದರನ್ನು ವಸ್ತುಗಳ ರೀತಿ ತಮ್ಮಿಷ್ಟಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಬಿಂಬಿಸುವ ಕಿಡಿಗೇಡಿಗಳಿಗೆ ಚಾಟಿ ಬೀಸಿದ್ದಾರೆ. ಅದರಲ್ಲೂ ನಟಿಯರ ಫೋಟೊ, ವೀಡಿಯೋಗಳನ್ನು ಮನಬಂದಂತೆ ಎಡಿಟ್ ಮಾಡಿ ಪೋಸ್ಟ್ ಮಾಡುವ ಪ್ರವೃತ್ತಿ ಹೆಚ್ಚುತ್ತಿದೆ. ವಿಭಿನ್ನ ಕೋನಗಳಲ್ಲಿ ವೀಡಿಯೋ ಮಾಡಿ ಅದನ್ನು ಜೂಮ್ ಮಾಡಿ ತೋರಿಸುವುದು ಅತಿಯಾಗಿದೆ. ಈ ಬಗ್ಗೆ ನಟ ಯುವ ರಾಜ್ಕುಮಾರ್ ಮಾತನಾಡಿದ್ದಾರೆ.
"ಚಿತ್ರರಂಗದಲ್ಲಿರುವ ಮಹಿಳೆಯರಿಗಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ" ಎಂದು ಇನ್ಸ್ಟಾಗ್ರಾಮ್ನಲ್ಲಿ ಯುವರಾಜ್ಕುಮಾರ್ ಪೋಸ್ಟ್ ಹಂಚಿಕೊಂಡಿದ್ದಾರೆ. ಸಪ್ತಮಿ ಗೌಡ, ರಮ್ಯಾ ಸೇರಿ ಹಲವರು ಈ ಪೋಸ್ಟ್ ಅನ್ನು ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಲ್ಲಿ ಹಾಕಿದ್ದಾರೆ. "ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತ್ತು ಫೋಟೋಗಳನ್ನು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ, ನಮ್ಮ ಕಲೆಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ. ಇಂತಹ ವರ್ತನೆ, ಕೆಲವರಿಂದ ನಡೆಯುತ್ತಿರುವುದಾದರೂ, ಅದು ಅಸಭ್ಯ, ಅವಮಾನಕಾರಿ ಮತ್ತು ಸಂಪೂರ್ಣವಾಗಿ ಸ್ವೀರಕಾರವಲ್ಲ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸೋಶಿಯಲ್ ಮೀಡಿಯಾ ಬೆಳೆದಂತೆ ಲೈಕ್ಸ್, ವೀವ್ಸ್ಗಾಗಿ ಕೆಲವರು ಹುಚ್ಚಾಟ ಮೆರೆಯುತ್ತಿದ್ದಾರೆ. ಯಾವುದೇ ಕಾರ್ಯಕ್ರಮಕ್ಕೆ ನಟಿಯರು ಬಂದರೆ ವೀಡಿಯೋ ಮಾಡುವುದು, ಅದನ್ನು ಎಡಿಟ್ ಮಾಡಿ ಮತ್ತಷ್ಟು ಅಸಭ್ಯವಾಗಿ ತೋರಿಸುವುದು ಕಂಡು ಬರುತ್ತಿದೆ. ಎಐ ತಂತ್ರಜ್ಞಾನ ಬಳಸಿ ಡೀಪ್ ಫೇಕ್ ಫೋಟೊ, ವೀಡಿಯೋ ಮಾಡಿ ವೈರಲ್ ಮಾಡುತ್ತಿದ್ದಾರೆ. ಎಐ ಫೇಕ್ ಫೋಟೊ, ವಿಡಿಯೋ ಬಗ್ಗೆ ಕೆಲ ನಟ, ನಟಿಯರು ಈಗಾಗಲೇ ದನಿ ಎತ್ತಿದ್ದಾರೆ. ಮತ್ತೊಂದು ಕಡೆ ಹೀಗೆ ನಟಿಯರು ಸಾರ್ವಜನಿಕರ ಸ್ಥಳಗಳಿಗೆ ಬಂದಾಗ ವೀಡಿಯೋ ಮಾಡಿ ಹಂಚಿಕೊಳ್ಳುವುದು ಹೆಚ್ಚಾಗುತ್ತಿದೆ. ಪ್ರತಿಯೊಬ್ಬರ ಕೈಲಿ ಈಗ ಕ್ಯಾಮರಾ ಫೋನ್ಗಳಿವೆ. ಸೆಲೆಬ್ರೆಟಿಗಳು ಕಂಡ ಕೂಡಲೇ ಮುತ್ತಿಕೊಂಡು ಫೋಟೊ ಕ್ಲಿಕ್ಕಿಸಲು, ವಿಡಿಯೋ ಸೆರೆ ಹಿಡಿಯಲು ಮುಗಿಬೀಳುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಅದನ್ನು ಶೇರ್ ಮಾಡುತ್ತಾರೆ. ಕೆಲವೊಮ್ಮೆ ಇದು ಅತಿರೇಕಕ್ಕೆ ಹೋಗುತ್ತದೆ. ಈ ಬಗ್ಗೆ ಈಗ ಕನ್ನಡ ಸಿನಿಮಾ ತಾರೆಯರು ದನಿ ಎತ್ತಿದ್ದಾರೆ.
"ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ. ನಾವು ಇಲ್ಲಿ ನಮ್ಮ ಸಿನಿಮಾಗಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡುವುದು ಮತ್ತು ಅಸಭ ಕೋನಗಳಿಂದ ಬಳಸುವುದು ನಮ್ಮ ಗೌರವಕ್ಕೆ ಸ್ಪಷ್ಟ ಧಕ್ಕೆ ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ. ಸಹಿಸುವುದಿಲ್ಲ. ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ, ಮೂಲಭೂತ ಗೌರವ ಮತ್ತು ಶಿಸ್ತನ್ನು ಕಾಪಾಡಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ಈ ಗಡಿ ರೇಖೆಯನ್ನು ಸ್ಪಷ್ಟವಾಗಿ ಎಳೆದು, ನಾವು ಒಟ್ಟಾಗಿ ನಿಂತಿದ್ದೇವೆ. ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವ ನಮ್ಮಧ್ವನಿ ಮುಂದುವರೆಯುತ್ತದೆ" ಎಂದು ಬರೆದುಕೊಂಡಿದ್ದಾರೆ.
ಅಂದಹಾಗೆ ನಟಿ ಸಪ್ತಮಿ ಗೌಡ ಈ ಅಭಿಯಾನ, ಹೋರಾಟ ಆರಂಭಿಸಿದ್ದಾರೆ. ಇದಕ್ಕೆ ಕನ್ನಡ ಸಿನಿಮಾ ತಾರೆಯರೆಲ್ಲಾ ಕೈ ಜೋಡಿಸಿದ್ದಾರೆ. ನಿಜಕ್ಕೂ ಚಿತ್ರರಂಗದಲ್ಲಿ ಇಂತಾದೊಂದು ದನಿ ಬೇಕಿತ್ತು. ಸೋಶಿಯಲ್ ಮೀಡಿಯಾದಲ್ಲಿ ನಟಿಯರನ್ನು ಬಹಳ ಕೆಟ್ಟದಾಗಿ ತೋರಿಸುವ ವಿಕೃತ ಮನಸ್ಥಿತಿ ಹೆಚ್ಚುತ್ತಿದೆ. ಅದಕ್ಕೆಲ್ಲಾ ಕಡಿವಾಣ ಹಾಕಬೇಕಿದೆ. ಕಲಾವಿದರನ್ನ ಕಲಾವಿದರಾಗಿ ನೋಡದೇ ಅವ್ರ ದೇಹವನ್ನ ಅಸಭ್ಯ ಕೋನಗಳಿಂದ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ತೇಲಿ ಬಿಡುವವರ ವಿರುದ್ಧ ಚಿತ್ರರಂಗದ ಕಲಾವಿದರು ಪ್ರತಿಭಟಿಸುವ ನಿರ್ಧಾರಕ್ಕೆ ಬಂದಿದ್ದಾರೆ.
Credit: Filmibeat



Click it and Unblock the Notifications