Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಮುದ್ದು ಕಂದನಿಗೆ ಮೊಬೈಲ್ ಮಾರಕವಾದೀತು!

ಹಾಗೆಯೇ ಅತಿ ಚಿಕ್ಕವಯಸ್ಸಿನಲ್ಲಿಯೇ ಮೊಬೈಲ್ ಮತ್ತು ಇನ್ನಿತರ ಸಾಧನಗಳನ್ನು ಹೆಚ್ಚು ಬಳಸುವ ಮಕ್ಕಳ ನಡವಳಿಕೆಯಲ್ಲೂ ಕ್ರಮೇಣ ವ್ಯತಿರಿಕ್ತ ಬದಲಾವಣೆ ಕಾಣಿಸಿಕೊಳ್ಳುವ ಸಾಧ್ಯತೆ ಶೇಕಡಾ 50 ರಷ್ಟಿದೆ ಎಂದೂ ತಿಳಿಸಿದೆ.
ಗರ್ಭದಲ್ಲಿರುವ ಮಗುವಿನ ಮೇಲೆ ಮೊಬೈಲ್ ಬಳಕೆ ಶೇಕಡಾ 30 ರಷ್ಟು ಪರಿಣಾಮ ಬೀರಿ, ಮಗು ಏಳನೇ ವಯಸ್ಸಿಗೆ ಬಂದಾಗ ಪರಿಣಾಮ ಗೋಚರಿಸುತ್ತದೆ ಎಂದಿದೆ ಅಧ್ಯಯನ.
ಈ ಅಧ್ಯಯನ ಕೈಗೊಂಡಿದ್ದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಲೀಕ್ ಖೀಫೆಟ್ ಅವರ ಪ್ರಕಾರ, ಗರ್ಭಿಣಿಯಾಗಿದ್ದಾಕೆ ಹೆಚ್ಚು ಸೆಲ್ ಫೋನ್ ಬಳಸುತ್ತಿದ್ದರೆ ಅದು ಗರ್ಭದಲ್ಲಿರುವ ಮಗುವಿನ ಮೇಲೆ ಪರಿಣಾಮ ಬೀರಿ, ಮಗು ಏಳನೇ ವಯಸ್ಸಿಗೆ ಕಾಲಿಟ್ಟ ನಂತರ ಅದು ಕೆಟ್ಟ ನಡವಳಿಕೆಯನ್ನು ತೋರ್ಪಡಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಭ್ರೂಣದಲ್ಲಿದ್ದಾಗ ಅಥವಾ ಚಿಕ್ಕವಯಸ್ಸಿನಲ್ಲಿ ಎಲೆಕ್ಟ್ರಾನಿಕ್ ಸಾಧನಗಳ ಬಳಕೆಗೆ ಒಳಗಾಗುವ ಮಗುವಿನ ನಡವಳಿಕೆಯಲ್ಲಿ ಕ್ರಮೇಣ ಬದಲಾವಣೆ ಉಂಟಾಗುತ್ತದೆ ಎಂದು ಡೈಲಿ ಮೇಲ್ ವರದಿ ಮಾಡಿದೆ.
ಆದರೆ ಮಗುವಿನ ನಡವಳಿಕೆ, ತಾಯಿ ಮತ್ತು ಮಗುವಿನ ಜೀವನ ಶೈಲಿಯ ಮೇಲೆ ಅವಲಂಬಿತವಾಗಿದೆ, ಮೊಬೈಲ್ ಬಳಕೆಯಲ್ಲಲ್ಲ ಎಂದು ಬ್ರಿಟನ್ ವಿಜ್ಞಾನಿಗಳು ವಾದಿಸಿದ್ದಾರೆ.



Click it and Unblock the Notifications
