Latest Updates
-
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ!
ಆತ್ಮವಿಶ್ವಾಸ ಮಕ್ಕಳ ಯಶಸ್ಸಿಗೆ ಕೀಲಿಕೈ

ಮಕ್ಕಳು ಸಣ್ಣ-ಪುಟ್ಟ ತಪ್ಪು ಮಾಡಿದಾಗ ಅದನ್ನೇ ಎತ್ತಿ ಹಿಡಿದು ಹೇಳುತ್ತಿದ್ದರೆ ಅವರ ಆತ್ಮವಿಶ್ವಾಸವನ್ನು ಕುಗ್ಗುವಂತೆ ಮಾಡುತ್ತದೆ. ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಲು ಈ ಕೆಳಗಿನ ಅಂಶಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು.
1. ಸ್ವಂತಿಕೆ: ಮಕ್ಕಳು ತಮ್ಮ ಕೆಲಸವನ್ನು ತಾವೆ ಮಾಡುವಂತೆ ಕಲಿಸಿದಾಗ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಪೋಷಕರ ಪ್ರೀತಿ ಮತ್ತು ಅವರ ಹೊಗಳಿಕೆ, ತಪ್ಪು ಕಂಡಾಗ ಸರಿಯಾದ ರೀತಿಯಲ್ಲಿ ತಿಳಿವಳಿಕೆ ಹೇಳುವುದು ಇವೆಲ್ಲವೂ ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.
2. ಹುರಿದುಂಬಿಸು: ಮಕ್ಕಳ ಉತ್ತಮಕ್ಕೆ ಅಷ್ಟೇ ಅಲ್ಲ, ಸಣ್ಣ ಪುಟ್ಟ ಒಳ್ಳೆಯ ಕೆಲಸವನ್ನು ಮಾಡಿದಾಗ ಹುರಿದುಂಬಿಸಬೇಕು. ಇದರಿಂದ ಮಕ್ಕಳು ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಉದಾಹರಣೆಗೆ ಒಳ್ಳೆಯ ಅಂಕ ತೆಗೆದರೆ ಹುರಿದುಂಬಿಸಬೇಕು ಹಾಗೆ ಮಾಡಿದರೆ ಅವರು ಮತ್ತಷ್ಟು ಅಂಕ ತೆಗೆಯಲು ಹೆಚ್ಚಿನ ಶ್ರಮ ಪಡುತ್ತಾರೆ. ಹಾಗಂತ ಒತ್ತಡ ಹಾಕಬಾರದು, ಒತ್ತಡ ಖಿನ್ನತೆಯನ್ನು ತರುತ್ತದೆ.
3. ಅವಕಾಶ: ಮಕ್ಕಳಿಗೆ ತಮ್ಮ ಪ್ರತಿಭೆಗೆ ತಕ್ಕ ಸೂಕ್ತ ವೇದಿಕೆಯನ್ನು ಕಲ್ಪಿಸಬೇಕು, ಅವರ ಆಸಕ್ತಿ ಕನಸುಗಳ ಬಗ್ಗೆ ತಿಳಿದು ಅದರ ಸಾಕಾರಕ್ಕೆ ಪ್ರಯತ್ನಿಸಬೇಕು. ಯಾವುದಾದರೂ ಸಮಸ್ಯೆ ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸುವಂತೆ ಸಲಹೆಗಳನ್ನು ನೀಡಬೇಕು. ಇದರಿಂದ ಮಕ್ಕಳ ಆತ್ಮವಿಶ್ವಾಸ ಹೆಚ್ಚಾಗುತ್ತದೆ.
4. ನಾಯಕತ್ವ: ಮಕ್ಕಳಿಗೆ ನಾಯಕತ್ವ ಗುಣವನ್ನು ಬೆಳೆಸಬೇಕು, ಶಾಲೆಯಲ್ಲಿ ಮಕ್ಕಳನ್ನು ಎನ್.ಸಿ.ಸಿ, ಗೈಡ್ಸ್, ಸ್ಕೌಟ್ಸ್, ರೋಟರಿ ಮುಂತಾದವುಗಳಲ್ಲಿ ಸೇರಿಸುವುದರಿಂದ ನಾಯಕತ್ವ ಮತ್ತು ಆತ್ಮವಿಶ್ವಾಸ ಹೆಚ್ಚುತ್ತದೆ.



Click it and Unblock the Notifications
