Latest Updates
-
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್!
ಕ್ಯಾಲ್ಸಿಯಂ ಕೊರತೆ ಉಂಟಾದರೆ ನಿರ್ಲಕ್ಷ್ಯ ಬೇಡ

ಕ್ಯಾಲ್ಸಿಯಂ ದೇಹದಲ್ಲಿ ಕಡಿಮೆಯಾದರೆ ಉಗುರುಗಳಲ್ಲಿ ಹೊಳಪು ಕಡಿಮೆಯಾಗಿ ಬಿಳಿಯಾದ ಚುಕ್ಕಿಗಳು ಉಂಟಾಗುವುದು, ಕೂದಲು ಸೊಂಪಾಗಿ ಬೆಳೆಯದಿರುವುದು, ಕೈಕಾಲುಗಳಲ್ಲಿ ನೋವು ಈ ಎಲ್ಲಾ ಲಕ್ಷಣಗಳು ಕಂಡು ಬರುತ್ತವೆ.
ಕ್ಯಾಲ್ಸಿಯಂ ಕೊರತೆ ಉಂಟಾದರೆ ನಿರ್ಲಕ್ಷ್ಯ ಮಾಡಬಾರದು ಏಕೆಂದರೆ ಅದು ಮುಂದೆ ಏರೊತ್ತಡ (ಅಧಿಕ ರಕ್ತದೊತ್ತಡ)ದಂತಹ ಸಮಸ್ಯೆಗಳನ್ನು ತರುತ್ತದೆ. ಆದ್ದರಿಂದ ಕ್ಯಾಲ್ಸಿಯಂ ಕೊರತೆ ಕಾಣಿಸಿಕೊಂಡರೆ ಈ ಕೆಳಗಿನ ಸಲಹೆಗಳನ್ನು ಪಾಲಿಸಿ.
1. ಮಕ್ಕಳನ್ನು ವೈದ್ಯರಿಗೆ ತೋರಿಸಿ ಕ್ಯಾಲ್ಸಿಯಂ ಇರುವ ಮಾತ್ರೆಗಳನ್ನು ಸೇವಿಸಿದರೆ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ನೀಗುವುದು. ಆದರೆ ಕೆಲವೊಮ್ಮೆ ಮಾತ್ರೆಗಳು ಅಡ್ಡ ಪರಿಣಾಮ ಬೀರುವುದು ಉಂಟು.
2. ಕ್ಯಾಲ್ಸಿಯಂ ಇರುವ ಆಹಾರಗಳ ಅಂದರೆ ಹಾಲಿನ ಉತ್ಪನ್ನಗಳು, ಸೊಪ್ಪು ತರಕಾರಿ, ಹಣ್ಣುಗಳು, ಬಾದಾಮಿ, ಸಮುದ್ರ ಆಹಾರಗಳನ್ನು ಸೇವಿಸಲು ಕೊಡುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಅಂಶವನ್ನು ಹೆಚ್ಚಿಸಿಕೊಳ್ಳಬಹುದು.
3. ಬೆಳಗ್ಗೆ ಸೂರ್ಯನ ಕಿರಣಗಳು ಮೈಗೆ ತಾಗಿದರೆ ದೇಹಕ್ಕೆ ಕ್ಯಾಲ್ಸಿಯಂ ಹೀರಿಕೊಳ್ಳುವ ಸಾಮಾರ್ಥ್ಯ ಹೆಚ್ಚುತ್ತದೆ. ಪುರುಷ ಮತ್ತು ಮಹಿಳೆಯರಲ್ಲಿ ವಯಸ್ಸಾದಂತೆ ಖನಿಜಾಂಶಗಳು ಕಡಿಮೆಯಾಗತೊಡಗುತ್ತದೆ. ಆದ್ದರಿಂದ ಪ್ರತಿ ನಿತ್ಯ ಒಂದು ಲೋಟ ಹಾಲು ಕುಡಿಯುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆಯಾಗದಂತೆ ನೋಡಿಕೊಳ್ಳಬಹುದು.
4.ಮೃದ್ವಂಗಿ, ಬ್ರೆಡ್, ಕಿತ್ತಳೆ ಜ್ಯೂಸ್, ದವಸ ಧಾನ್ಯಗಳಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿ ಇರುತ್ತದೆ.
5. ಐಸ್ ಕ್ರೀಮ್, ಬಾಳೆಹಣ್ಣು, ಚೀಸ್ ಇವುಗಳನ್ನು ಸೇವಿಸುವುದರಿಂದ ಕ್ಯಾಲ್ಸಿಯಂ ಕೊರತೆ ನೀಗಿಸಬಹುದು.
ಬುದ್ಧಿಶಕ್ತಿಯನ್ನು ಚುರುಕುಗೊಳಿಸಲು ಮತ್ತು ದೇಹದ ಆರೋಗ್ಯ ಕಾಪಾಡಲು ಕನಿಷ್ಠವೆಂದರೆ ಒಂದು ಲೋಟ ಹಾಲು ಕುಡಿಯುವುದು ಒಳ್ಳೆಯದು.



Click it and Unblock the Notifications
