Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧದ ಗೌಪ್ಯತೆ ಕಾಪಾಡಿಕೊಳ್ಳಿ: ದಂಪತಿಗಳಿಗಾಗಿ 7 ಪ್ರಮುಖ ನಿಯಮಗಳು -
ಬೆಂಗಳೂರು ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ 20 ನಿಮಿಷದ ಕೆಲಸ ಮಾಡಿ -
ವಿಶ್ವ ಮೊಟ್ಟೆ ದಿನ: ಕೇವಲ ₹20ರಲ್ಲಿ ಪ್ರೋಟೀನ್ ಪಡೆಯುವ ಅದ್ಭುತ ಹ್ಯಾಕ್ಸ್! -
ಮೈಸೂರು ದಸರಾ 2026: ಅಂಬಾರಿ ಹೊರುವ ಆನೆ ಯಾರು? ಟಿಕೆಟ್, ರೂಟ್ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ -
ನವರಾತ್ರಿ ಗರ್ಬಾ: ಕಾಲು ನೋವು, ಸುಸ್ತು ಇಲ್ಲದೆ ಗಂಟೆಗಟ್ಟಲೆ ಡ್ಯಾನ್ಸ್ ಮಾಡಲು ಈ 12 ನಿಮಿಷದ ಟ್ರಿಕ್ ಫಾಲೋ ಮಾಡಿ! -
ದೆಹಲಿ ಮಾಲಿನ್ಯದ ಆತಂಕ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ದಂಪತಿಗಳಿಗೆ ಇಲ್ಲಿದೆ ಸರಳ ಟಿಪ್ಸ್ -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: ₹1,999ರೊಳಗೆ ಸಿಗುವ 12 ಬೆಸ್ಟ್ ಹೋಮ್ ಆಕ್ಸೆಸರೀಸ್ ಇವೇ ನೋಡಿ! -
ಬೇಳೆಕಾಳು ಬೆಲೆ ಏರಿಕೆ: ₹20ಕ್ಕಿಂತ ಕಡಿಮೆ ವೆಚ್ಚದಲ್ಲಿ ಪ್ರೋಟೀನ್ ಪಡೆಯುವುದು ಹೇಗೆ? -
ಆರ್ಬಿಐ ರೆಪೋ ದರ ನಿರ್ಧಾರ: ನಿಮ್ಮ ಇಎಂಐ ಮೇಲೆ ಬರೆ ಬೀಳುತ್ತಾ? ಇಲ್ಲಿದೆ ಲೆಕ್ಕಾಚಾರ -
ದೆಹಲಿ-ಎನ್ಸಿಆರ್ ಭೂಕಂಪನ: ಆತಂಕ ಬೇಡ, ಸುರಕ್ಷಿತವಾಗಿರಲು ಈ ತಕ್ಷಣದ ಕ್ರಮಗಳನ್ನು ಪಾಲಿಸಿ
ಗರ್ಭನಿರೋಧಕ ಮಾತ್ರೆಯ ಬಗ್ಗೆ ಕೆಲ ಮಾಹಿತಿ
ಗರ್ಭ ನಿರೋಧಕ ಮಾತ್ರೆಗಳನ್ನು ತೆಗೆದುಕೊಳ್ಳುವುದು ಸುರಕ್ಷಿತವೇ? ಎಂಬ ಸಂದೇಹ ಅನೇಕರಲ್ಲಿದೆ. ಗರ್ಭಧಾರಣೆಯಾಗುವುದನ್ನು ತಡೆಯುವಲ್ಲಿ ಇದು ಮಹತ್ವದ ಪಾತ್ರವಹಿಸಿದರೂ, ಕೆಲವೊಂದು ಅಡ್ಡ ಪರಿಣಾಮಗಳನ್ನು ಕೂಡ ಹೊಂದಿದೆ ಎಂಬ ಮಾತನ್ನು ತಳ್ಳಿ ಹಾಕುವಂತಿಲ್ಲ.
ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಳ್ಳುವವರು ಅದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಂಡರೆ ಒಳ್ಳೆಯದು. ಇಲ್ಲಿ ನಾವು ಗರ್ಭನಿರೋಧಕ ಮಾತ್ರೆ ತೆಗೆದುಕೊಂಡರೆ ಆಗುವ ಪರಿಣಾಮ ಮತ್ತು ಅಡ್ಡ ಪರಿಣಾಮಗಳ ಬಗ್ಗೆ ಕೆಲವೊಂದು ಮಾಹಿತಿ ನೀಡಿದ್ದೇವೆ ನೋಡಿ:

ಅಡ್ಡ ಪರಿಣಾಮ:
ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಂಡರೆ ತಲೆಸುತ್ತು, ವಾಂತಿ ಬಂದ ಅನುಭವ, ತಲೆ ನೋವು, ಮುಟ್ಟಿನ ಸಮಯದಲ್ಲಿ ಅಧಿಕ ರಕ್ತಸ್ರಾವ ಮುಂತಾದ ತೊಂದರೆ ಉಂಟಾಗುವುದು.
ಮಾತ್ರೆ ನಿಲ್ಲಿಸಿದರೆ
ಈ ಮಾತ್ರೆಯನ್ನು ನಿರಂತರವಾಗಿ ತೆಗೆದುಕೊಳ್ಳುತ್ತಿದ್ದು, ತಕ್ಷಣ ನಿಲ್ಲಿಸಿದರೆ ಗರ್ಭಧಾರಣೆಯಾಗುವ ಸಾಧ್ಯತೆ ಅಧಿಕ.
ಮೈ ತೂಕ
ಗರ್ಭನಿರೋಧಕ ಮಾತ್ರೆ ತೆಗೆದುಕೊಂಡರೆ ಮೈತೂಕ ಹೆಚ್ಚಾಗುತ್ತದೆಯೆಂದು ಹೇಳುತ್ತಾರೆ. ಆದರೆ ಮೈತೂಕಕ್ಕೂ, ಗರ್ಭನಿರೋಧಕ ಮಾತ್ರೆಗೂ ಯಾವುದೇ ಸಂಬಂಧವಿಲ್ಲ.
ಇತರ ಮಾತ್ರೆಗಳನ್ನು ತೆಗೆದುಕೊಳ್ಳಬಹುದಾ?
ಗರ್ಭನಿರೋಧಕ ಮಾತ್ರೆ ತೆಗೆದುಕೊಂಡಾಗ ಯಾವುದೇ ಆಂಟಿ ಬಯೋಟಿಕ್ ಅಥವಾ ಖಿನ್ನತೆ ಹೋಗಲಾಡಿಸುವ ಮಾತ್ರೆಗಳನ್ನು ತೆಗೆದುಕೊಳ್ಳಬಾರದು ಅನ್ನುವುದು ತಜ್ಞರ ಸಲಹೆ.
ಯಾವ ಗರ್ಭನಿರೋಧಕ ಮಾತ್ರೆ ತೆಗೆದುಕೊಳ್ಳಬೇಕು, ಮತ್ತು ಇದನ್ನು ತೆಗೆದುಕೊಳ್ಖುವ ಸಮಯದಲ್ಲಿ ಪಾಲಿಸಬೇಕಾದ ಎಚ್ಚರಿಕೆಯ ಕ್ರಮಗಳ ಬಗ್ಗೆ ವೈದ್ಯರ ಬಳಿ ಚರ್ಚಿಸಿ ನಂತರ ಕ್ರಮ ಕೈಗೊಳ್ಳಿ.



Click it and Unblock the Notifications
