Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಅಲೂ ಪೋಹಾ (ಉಹಾಪೋಹ ಅಲ್ಲಾ)
ಇದು ಮಹಾರಾಷ್ಟ್ರದ ರುಚಿಕರವಾದ ತಿಂಡಿ. ಮಳೆಗಾಲದಲ್ಲಿ ಬಿಸಿ ಮೆಣಸಿನಕಾಯಿ ಬೋಂಡಾದ ಸಾತ್ ಇದ್ದರೆ ರುಚಿ ಇನ್ನಷ್ಟು ಹೆಚ್ಚು.
- ಎಮ್.ಎಸ್., ಬೆಂಗಳೂರು
ಬೇಕಾಗುವ ಪದಾರ್ಥಗಳು:
ದಪ್ಪ ಅವಲಕ್ಕಿ2 1/2 ಕಪ್
ನೀರುಳ್ಳಿ ದೊಡ್ಡದು, ಸಣ್ಣಗೆ ಕತ್ತರಿಸಿ
ಆಲೂಗಡ್ಡೆ- ಬೇಯಿಸಿದ್ದು, ಹದಗಾತ್ರದ್ದು, ಸಣ್ಣಗೆ ಕತ್ತರಿಸಿ
ಒಗ್ಗರಣೆಎಣ್ಣೆ, ಉದ್ದಿನ ಬೇಳೆ, ಸಾಸಿವೆ, ಕರಿಬೇವು, ಹಸಿಮೆಣಸು, ಅರಿಸಿನ ಪುಡಿ
ರುಚಿಗೆಉಪ್ಪು, ಸಕ್ಕರೆ, ನಿಂಬೆ ರಸ, ಕೊತ್ತಂಬರಿ ಸೊಪ್ಪು
ಮಾಡುವ ವಿಧಾನ:
ಅವಲಕ್ಕಿಯನ್ನು ಮೆತ್ತಗಾಗುವ ತನಕ ಅಂದರೆ ಸಾಧಾರಣ 10 ನಿಮಿಷ ನೀರಲ್ಲಿ ನೆನೆಸಿಡಿ. ಆಮೇಲೆ ನೀರು ಬಸಿದಿಡಿ. ಬೆಂದ ಆಲೂಗೆಡ್ಡೆಯನ್ನು ಸಣ್ಣಸಣ್ಣ ತುಂಡುಗಳನ್ನಾಗಿ ಕತ್ತರಿಸಿ ಸ್ವಲ್ಪ ಉಪ್ಪು ಚಿಮುಕಿಸಿಡಿ. ಬಾಣಲೆಯಲ್ಲಿ ಎಣ್ಣೆ ಬಿಸಿಯಾದ ಮೇಲೆ ಉದ್ದಿನ ಬೇಳೆ, ಸಾಸಿವೆ, ಕರಿಬೇವಿನ ಒಗ್ಗರಣೆಗಿಡಿ. ಹಸಿಮೆಣಸಿನಕಾಯಿಯನ್ನು ಹಾಕಿ ಕೈಯಾಡಿಸಿ. ನಂತರ ನೀರುಳ್ಳಿ ಹಾಕಿ ಕೆಂಪಾಗುವ ತನಕ ಫ್ರೈ ಮಾಡಿ. ಇದಕ್ಕೆ ಅರಿಸಿನ ಪುಡಿ, ಬೇಯಿಸಿದ ಆಲೂಗೆಡ್ಡೆಯತುಂಡುಗಳನ್ನು ಹಾಕಿ, ಸ್ವಲ್ಪ ಹೊತ್ತು ಮುಚ್ಚಿಡಿ.
ಆ ಬಳಿಕ ಬಸಿದಿಟ್ಟ ಅವಲಕ್ಕಿ ಯನ್ನು ಸೇರಿಸಿ ಮೃದುವಾಗಿ ಕೈಯಾಡಿಸಿ, ಉಪ್ಪು ಸ್ವಲ್ಪ ಸಕ್ಕರೆ ಹಾಕಿ ಮುಚ್ಚಿಡಿ. ಬಡಿಸುವ ಮುನ್ನ ಕೊತ್ತಂಬರಿ ಸೊಪ್ಪು ಮತ್ತು ಅರ್ಧ ನಿಂಬೆಯ ರಸ ಬೆರೆಸಿ. ಆಲೂ-ಪೋಹಾ ತೈಯಾರ್. ಇದು ಮಹಾರಾಷ್ಟ್ರದ ರುಚಿಕರವಾದ ತಿಂಡಿ. ಮಳೆಗಾಲದಲ್ಲಿ ಬಿಸಿ ಮೆಣಸಿನಕಾಯಿ ಬೋಂಡಾದ ಸಾತ್ ಇದ್ದರೆ ರುಚಿ ಇನ್ನಷ್ಟು ಹೆಚ್ಚು.



Click it and Unblock the Notifications
