Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಉತ್ತರ ಕನ್ನಡದ ಅಲಸಂದೆ ರೊಟ್ಟಿ ಸವಿಯೋಣ ಬನ್ನಿ
Breakfast
oi-Staff
By Staff

ನಿರುಪಮಾ, ಹುಬ್ಬಳ್ಳಿ
ಬೇಕಾಗುವ ಪಡಿಪದಾರ್ಥ :
ಅಲಸಂದೆ ಕಾಳು: 3 ಕಪ್ಪು
ಎಳ್ಳು: ಸ್ವಲ್ಪ
ಕಡಲೆಹಿಟ್ಟು: 1 ಕಪ್ಪು
ಗೋದಿಹಿಟ್ಟು: 1 ಕಪ್ಪು
ಹಸಿ ಮೆಣಸಿನ ಕಾಯಿ: 4 ರಿಂದ 6
ಜೀರಿಗೆ: ಅರ್ಧ ಚಮಚ
ಉಪ್ಪು : ರುಚಿಗೆ ತಕ್ಕಷ್ಟು
ಕೊತ್ತಂಬರಿಸೊಪ್ಪು.: ಒಂದೆರಡು ಎಸಳು
ತಯಾರಿಸುವ ವಿಧಾನ :
ಮೊದಲು ಅಲಸಂದೆ ಕಾಳನ್ನು ಕುಕ್ಕರ್ನಲ್ಲಿ ಬೇಯಿಸಿಕೊಂಡು ಅದು ತಣ್ಣಗಾದ ಬಳಿಕ ನುಣ್ಣಗೆ ರುಬ್ಬಿಟ್ಟುಕೊಳ್ಳಿ. ಹಿಟ್ಟಿಗೆ ಸಣ್ಣಗೆ ಹೆಚ್ಚಿದ ಹಸಿ ಮೆಣಸಿನ ಕಾಯಿ, ಕೊತ್ತಂಬರಿಸೊಪ್ಪು, ಹುರಿದ ಎಳ್ಳು, ಜೀರಿಗೆ, ಕಡಲೆಹಿಟ್ಟು, ಗೋದಿಹಿಟ್ಟು ಹಾಗೂ ಉಪ್ಪು ಸೇರಿಸಿ ಚಪಾತಿ ಹಿಟ್ಟಿನ ರೀತಿ ಕಲೆಸಿ.
ಆನಂತರ ಸಣ್ಣ ಸಣ್ಣ ಉಂಡೆಗಳನ್ನು ಮಾಡಿಟ್ಟುಕೊಂಡು ಮಣೆಯ ಮೇಲೆ ಎಣ್ಣೆ ಹಾಕಿ, ಚಪಾತಿಯಂತೆ ಲಟ್ಟಿಸಿ (ಲಟ್ಟಿಸುವಾಗಲೂ ಹಿಟ್ಟಿನ ಮೇಲೆ ಎಣ್ಣೆ ಹಾಕಬೇಕು). ಆನಂತರ ಕಾದ ಕಾವಲಿಯ ಮೇಲೆ ಎರಡೂ ಬದಿ ಚೆನ್ನಾಗಿ ಬೇಯಿಸಿ. ಉಪ್ಪಿನಕಾಯಿ, ಬದನೆಕಾಯಿ ಎಣ್ಣೆಗಾಯಿ, ಚಟ್ನಿಪುಡಿ, ಗುರೆಳ್ಳು, ಕಾಯಿ ಚಟ್ನಿಯ ಜತೆ ಅಲಸಂದೆ ರೊಟ್ಟಿ ತಿನ್ನಲು ಬಲು ಸೊಗಸಾಗಿರುತ್ತದೆ.
Comments
Read more about: ಅಲಸಂದೆ ರೊಟ್ಟಿ ಕರ್ನಾಟಕದ ವಿಶೇಷ ಅಡುಗೆ ಉತ್ತರ ಕರ್ನಾಟಕ ಊಟ ಉಪಚಾರ ಹೊಸರುಚಿ north karnataka special
Story first published: Monday, January 28, 2008, 18:52 [IST]
Other articles published on Jan 28, 2008



Click it and Unblock the Notifications
