Latest Updates
-
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು!
ಆಲೂಜೀರಾ ರೈಸ್-ಬ್ರೇಕ್ ಫಾಸ್ಟ್ ರೆಸಿಪಿ

ಬೇಕಾಗುವ ಸಾಮಾಗ್ರಿಗಳು:
* 1 ಕಪ್ ಅಕ್ಕಿ
* ಆಲೂಗೆಡ್ಡೆ 2
* ಈರುಳ್ಳಿ 1-2 (ಕತ್ತರಿಸಿದ್ದು)
* ಹಸಿಮೆಣಸಿನ ಕಾಯಿ1
* ಜೀರಿಗೆ 2 ಚಮಚ
* ರುಚಿಗೆ ತಕ್ಕ ಉಪ್ಪು
* ಅರಿಶಿಣ ಪುಡಿ 1/4 ಚಮಚ
* ಮೆಣಸಿನ ಪುಡಿ 1 ಚಮಚ
* ಸ್ವಲ್ಪ ಕೊತ್ತಂಬರಿ ಸೊಪ್ಪು
* ಎಣ್ಣೆ
ತಯಾರಿಸುವ ವಿಧಾನ:
1. ಅಕ್ಕಿಯನ್ನು ಚೆನ್ನಾಗಿ ತೊಳೆದು ಬೇಯಿಸಿ ಅನ್ನ ಮಾಡಿಡಬೇಕು.
2. ನಂತರ ನಾನ್ ಸ್ಟಿಕ್ ಬಾಣಲೆಗೆ 2-3 ಚಮಚ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಅದರಲ್ಲಿ ಜೀರಿಗೆ ಹಾಕಿ ಈರುಳ್ಳಿ ಮತ್ತು ಹಸಿಮೆಣಸಿನಕಾಯಿ ಹಾಕಿ ಈರುಳ್ಳಿ ಕಂದು ಬಣ್ಣಕ್ಕೆ ಬಂದ ಮೇಲೆ ಆಲೂಗೆಡ್ಡೆ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಬೇಯಿಸಬೇಕು, ಆಲೂಗೆಡ್ಡೆ ಬೆಂದ ಮೇಲೆ ಅರಿಶಿಣ ಪುಡಿ ಮತ್ತು ಮೆಣಸಿನ ಪುಡಿ ಹಾಕಿ ಹುರಿಯಬೇಕು.
3. ಈಗ ಬೇಯಿಸಿದ ಆಲೂಗೆಡ್ಡೆ ಮಿಶ್ರಣವನ್ನು ಅನ್ನದ ಜೊತೆ ಹಾಕಿ ಸ್ವಲ್ಪ ನೀರು ಚಿಮುಕಿಸಿ ಮಿಶ್ರಣ ಮಾಡಬೇಕು. ನಂತರ 2-3 ನಿಮಿಷ ಬಿಸಿ ಮಾಡಬೇಕು. ನಂತರ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಆಲೂ ಜೀರಾ ರೈಸ್ ರೆಡಿ. ಇದನ್ನು ಮೊಸರು ಜೊತೆ ತಿನ್ನಲು ರುಚಿಕರವಾಗಿರುತ್ತದೆ.
ಸಲಹೆ: ಆಲೂಗೆಡ್ಡೆ ಬೇಯಿಸುವಾಗ ಮೆಣಸಿನ ಪುಡಿ, ಕೊತ್ತಂಬರಿ ಪುಡಿ, ಗರಂ ಮಸಾಲ ಪುಡಿ ಹಾಕಿದರೆ ಆಲೂ ಜೀರಾ ರೈಸ್ ಮತ್ತಷ್ಟು ರುಚಿಕರವಾಗಿರುತ್ತದೆ.



Click it and Unblock the Notifications
