Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಬಿಸಿ ಬಿಸಿ ಮಸಾಲ ರವೆ ಇಡ್ಲಿ
ದಕ್ಷಿಣ ಭಾರತದ ಪ್ರಸಿದ್ಧ ಬೆಳಗಿನ ಉಪಹಾರಗಳಲ್ಲಿ ಒಂದು ರವೆ ಇಡ್ಲಿ. ಇದು ಆರೋಗ್ಯಕ್ಕೆ ಉತ್ತಮವಾದ ಉಪಹಾರ. ಮಸಾಲ ರವೆ ಇಡ್ಲಿಯ ಜೊತೆ ಕೊಬ್ಬರಿ ಅಥವ ಕಡಲೆಕಾಯಿ ಚಟ್ನಿಯೊಂದಿಗೆ ತಿನ್ನಲು ರುಚಿಯಾಗಿರುತ್ತದೆ.
ರವೆ ಇಡ್ಲಿ ಪೌಷ್ಟಿಕಾಂಶಭರಿತವಾಗಿದ್ದು ಹೆಚ್ಚಿನ ಶಕ್ತಿಯನ್ನು ನೀಡುತ್ತದೆ. ರವೆ ಮಧುಮೇಹಿಗಳಿಗೆ ಒಳ್ಳೆಯದು. ಆದ್ದರಿಂದ ಅಕ್ಕಿ ಇಡ್ಲಿಗಿಂತ ಮಧುಮೇಹಿಗಳು ಇದನ್ನು ತಿನ್ನುವುದು ಒಳ್ಳೆಯದು.
ಬನ್ನಿ ಇದನ್ನು ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಬೇಕಾಗುವ ಸಾಮಗ್ರಿಗಳು
1. ರವೆ- 3 ಕಪ್
2. ಎಣ್ಣೆ- 3 ಟೀಚಮಚ
3. ಕೆಂಪು ಮೆಣಸಿನಕಾಯಿ- 2
3. ಕರಿಬೇವು ಎಲೆಗಳು- 7
4. ಸಾಸಿವೆ- 1 ಟೀಚಮಚ
5. ಮೊಸರು- 1 ಕಪ್
6. ಉಪ್ಪು ರುಚಿಗೆ ತಕ್ಕಷ್ಟು
ಮಾಡುವ ವಿಧಾನ
1. ಬಾಣಲಿಯಲ್ಲಿ ಎಣ್ಣೆ ಹಾಕಿ ಕಾಯಿಸಿಕೊಳ್ಳಿ. ಎಣ್ಣೆ ಕಾದ ನಂತರ ಅದಕ್ಕೆ ಮೆಣಸಿನಕಾಯಿ, ಕರಿಬೇವಿನ ಎಲೆಗಳು, ಸಾಸಿವೆ ಹಾಕಿ.
2. ರವೆಯನ್ನು ಇದರೊಂದಿಗೆ ಹಾಕಿ ಸಣ್ಣ ಉರಿಯಲ್ಲಿ ಹುರಿಯಿರಿ.
3. ಹುರಿದ ನಂತರ ಒಲೆಯನ್ನು ಆರಿಸಿ ಅದನ್ನು ತಣ್ಣಗಾಗಲು ಬಿಡಿ.
4. ರವೆ ತಣ್ಣಗಾದ ನಂತರ ಅದಕ್ಕೆ ಒಂದು ಕಪ್ ಮೊಸರು ಸೇರಿಸಿ ಮೃದುವಾಗಿ ಕಲಸಿಕೊಳ್ಳಿ.
5. ಇದಕ್ಕೆ ಉಪ್ಪನ್ನು ಹಾಕಿ ಚೆನ್ನಾಗಿ ಕಲಸಿ.
6. ಕಲಸಿದ ಹಿಟ್ಟನ್ನು ಬೆಚ್ಚಗಿನ ಸ್ಥಳದಲ್ಲಿ 10 ನಿಮಿಷ ಇಡಿ.
7. 10 ನಿಮಿಷದ ನಂತರ ಇಡ್ಲಿ ತಟ್ಟೆಗಳಲ್ಲಿ ಹಿಟ್ಟನ್ನು ಹಾಕಿ ಬೇಯಿಸಿ.
ಮಸಾಲ ರವೆ ಇಡ್ಲಿಯನ್ನು ಕೊಬ್ಬರಿ ಚಟ್ನಿ ಅಥವ ಆಲೂಗಡ್ಡೆ ಸಾಗುವಿನೊಂದಿಗೆ ರುಚಿಯಲು ಸವಿಯಾಗಿರುತ್ತದೆ.



Click it and Unblock the Notifications
