Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಬಾಯಿಯಲ್ಲಿ ನೀರೂರಿಸುವ ಪಾಲಕ್ ರೈಸ್!
ಪೌಷ್ಟಿಕಾಂಶಯುಕ್ತ ಪಾಲಾಕ್ ಅಂದ್ರೆ ಎಲ್ಲರಿಗೂ ಚಿರಪರಿಚಿತ. ಪಾಲಾಕ್ ಸೇವನೆ ಆರೋಗ್ಯಕ್ಕೆ ಮಾತ್ರವಲ್ಲ, ರುಚಿಯಲ್ಲೂ ಎತ್ತಿದ ಕೈ. ಈ ಪಾಲಾಕನ್ನ ಉಪಯೋಗಿಸಿಕೊಂಡು ಅನೇಕ ಖಾದ್ಯಗಳನ್ನ ಮಾಡಬಹುದು. ವಿಟಮಿನ್ ಮತ್ತು ಕಬ್ಬಿಣಾಂಶ ಹೇರಳವಾಗಿರುವ ಪಾಲಾಕ್ ಸೊಪ್ಪು ಮಕ್ಕಳಿಗೆ ತುಂಬಾ ಅವಶ್ಯಕ.
ಪಾಲಾಕ್ ಸೊಪ್ಪನ್ನು ಬಳಸಿ ಮಕ್ಕಳಿಗೆ ಇಷ್ಟವಾಗುವಂತೆ ಅಡುಗೆ ಮಾಡುವುದು ಹೇಗೆ ಎಂದು ಯೋಚಿಸುತ್ತಿರುವಿರಾ, ಹಾಗಾದರೆ ಬೋಲ್ಡ್ ಸ್ಕೈ ನಿಮಗಾಗಿ ರುಚಿಕರವಾಗಿರುವ ಈ ಪಾಲಾಕ್ ರೈಸ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತಿದೆ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಬೆಳಗ್ಗಿನ ಉಪಹಾರಕ್ಕಾಗಿ ಟೇಸ್ಟೀ ಈರುಳ್ಳಿ ದೋಸೆ
ಹಾಗಾದರೆ ಇನ್ನೇಕೆ ತಡ ? ಬನ್ನಿ ಪಾಲಕ್ ರೈಸ್ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳುವ

ಬೇಕಾಗುವ ಪದಾರ್ಥಗಳು:
* 2 ಕಪ್ ಅನ್ನ
* 1 ಕಪ್ ತೊಳೆದು ಕತ್ತರಿಸಿದ ಪಾಲಾಕ್ ಸೊಪ್ಪು
* 1 ದೊಡ್ಡ ಈರುಳ್ಳಿ
* 3-4 ಹಸಿರು ಮೆಣಸಿನಕಾಯಿ
* 1/2 ಚಕ್ಕೆ, 3 ಕರಿಮೆಣಸು
* 1 ಚಮಚ ಸಾಸಿವೆ, 1 ಚಮಚ ಜೀರಿಗೆ, ಲವಂಗ
* 1/2 ಕಪ್ ಗೋಡಂಬಿ
* ಉಪ್ಪು, ಎಣ್ಣೆ, ಒಂದು ನಿಂಬೆಹಣ್ಣು
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ರುಚಿ ರುಚಿಯಾದ ಎಗ್ ರೋಲ್ ರೆಸಿಪಿ
ಪಾಲಾಕ್ ರೈಸ್ ಮಾಡುವ ವಿಧಾನ:
1. ಬಾಣಲೆಯಲ್ಲಿ ಎಣ್ಣೆ ಹಾಕಿ ಕಾಯಿಸಿ ಅದಕ್ಕೆ ಸಾಸಿವೆ, ಜೀರಿಗೆ, ಮೆಣಸಿನ ಕಾಯಿ, ಕತ್ತರಿಸಿದ ಈರುಳ್ಳಿ ಹಾಕಿ ಕೆಲವು ನಿಮಿಷ ಹುರಿಯಬೇಕು. ನಂತರ ಕತ್ತರಿಸಿಕೊಂಡ ಪಾಲಾಕ್ ಸೊಪ್ಪನ್ನು ಹಾಕಿ ಹುರಿಯಬೇಕು.
2. ಇದಕ್ಕೆ 1/2 ಕಪ್ ನೀರು ಹಾಕಿ ಕುದಿಯುವವರೆಗೂ ಸಣ್ಣ ಉರಿಯಲ್ಲಿಡಬೇಕು.
3. ನಂತರ ಲವಂಗ, ಚಕ್ಕೆ, ಕರಿಮೆಣಸು ಮತ್ತು ಗೋಡಂಬಿಯನ್ನು ನುಣ್ಣಗೆ ರುಬ್ಬಿಕೊಂಡು ಪ್ರತ್ಯೇಕ ಬಾಣಲೆಯಲ್ಲಿ ಎಣ್ಣೆಗೆ ಹಾಕಿ ಹುರಿಯಬೇಕು.
4. ಪಾಲಾಕ್ ಮಿಶ್ರಣದೊಂದಿಗೆ ರುಬ್ಬಿದ ಮಿಶ್ರಣವನ್ನು ಬೆರೆಸಿ ಅಗತ್ಯವಿದ್ದರೆ ಉಪ್ಪು ಬೆರೆಸಿ ಚೆನ್ನಾಗಿ ತಿರುಗಿಸಿ ತಣ್ಣಗಾಗಲು ಬಿಡಬೇಕು. (ಅನ್ನಕ್ಕೂ ಉಪ್ಪು ಹಾಕಿದ್ದರೆ ಎಚ್ಚರಿಕೆಯಿಂದ ಉಪ್ಪನ್ನು ಬೆರೆಸಿಕೊಳ್ಳಬೇಕು)
5. ಈ ಪಾಲಾಕ್ ಮಸಾಲೆಯೊಂದಿಗೆ ಅನ್ನ ಬೆರೆಸಿ ನಿಂಬೆ ರಸವನ್ನು ಇದರ ಮೇಲೆ ಹಿಂಡಿ ಚೆನ್ನಾಗಿ ಕಲೆಸಬೇಕು. ಈಗ ಟೇಸ್ಟಿ ಪಾಲಾಕ್ ರೈಸ್ ತಿನ್ನಲು ರೆಡಿಯಾಗಿರುತ್ತೆ.



Click it and Unblock the Notifications
