Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಆಲೂ ದೋಸೆ : ಕಾಸು ಕಮ್ಮಿ, ರುಚಿ ಜಾಸ್ತಿ!
ಹೋಟೆಲ್ಗಳಲ್ಲಿ ಸಾಲು ನಿಂತು ಮಸಾಲೆ ದೋಸೆ ತಿನ್ನುವುದಕ್ಕಿಂತಲೂ ಮನೆಯಲ್ಲಿ ಆಲೂ ದೋಸೆ ತಯಾರಿಸಿಕೊಳ್ಳುವುದು ಬಲು ಸುಲಭ. ಅಡುಗೆಮನೆಯಲ್ಲಿ ಆಲೂ ದೋಸೆ ತಯಾರಿಸುತ್ತಿದ್ದರೆ, ಮನೆಮಂದಿಯೆಲ್ಲಾ ಸಾಲು ನಿಂತು ತಮ್ಮ ಸರದಿಗಾಗಿ ಕಾಯಬೇಕು ಹಾಗೆ ಮಾಡುತ್ತದೆ ಅದರ ಘಮಲು! ಒಮ್ಮೆ ಪ್ರಯತ್ನಿಸಿ ನೋಡಿ.
ಬೇಕಾಗುವ ಸಾಮಗ್ರಿ :
ಅಲೂಗಡ್ಡೆ : 4
ಮೈದಾ : 1 ಕಪ್
ಹಸಿ ಮೆಣಸಿನ ಕಾಯಿ : 4
ಕೊತ್ತಂಬರಿ ಸೊಪ್ಪು : 1 ಹಿಡಿ
ಉಪ್ಪು : ರುಚಿಗೆ ತಕ್ಕಷ್ಟು
ಹುರಿಯಲು ಎಣ್ಣೆ

ಮಾಡುವ ವಿಧಾನ :
ಅಲೂಗಡ್ಡೆಯ ಸಿಪ್ಪೆ ತೆಗೆದು ತುರಿದುಕೊಳ್ಳಿ. ಉಪ್ಪನ್ನು ಬೆರಸಿ ಪಕ್ಕಕ್ಕಿಡಿ. ಈಗ ಮೈದಾವನ್ನು ಆಲೂಗಡ್ಡೆಗೆ ಬೆರಸಿ ಸ್ವಲ್ಪ ನೀರಿನೊಂದಿಗೆ ದೋಸೆ ಹಿಟ್ಟಿನ ತರಹ ಮಾಡಿಕೊಳ್ಳಿ. ಈ ಹಿಟ್ಟಿಗೆ ಹೆಚ್ಚಿಕೊಂಡ ಹಸಿಮೆಣಸಿನ ಕಾಯಿ ಕೊತ್ತಂಬರಿ ಸೊಪ್ಪನ್ನು ಸೇರಿಸಿ ಚೆನ್ನಾಗಿ ಕಲಸಿ.
ಹೆಂಚನ್ನು ಬಿಸಿಮಾಡಿ ಅದಕ್ಕೆ ಎಣ್ಣೆಯನ್ನು ಸವರಿ. ಕಾದ ಹೆಂಚಿನ ಮೇಲೆ ಹಿಟ್ಟನ್ನು ಹಾಕಿ ದೋಸೆಯ ರೀತಿ ಹರಡಿ. ಒಂದು ಚಮಚ ಎಣ್ಣೆಯನ್ನು ಹಾಕಿ ಎರಡು ಕಡೆ ಕಂದು ಬಣ್ಣ ಬರುವವರೆಗೆ ಹುರಿಯಿರಿ. ಅಷ್ಟೆ ನಿಮ್ಮ ನೆಚ್ಚಿನ ಆಲೂ ದೋಸೆ ತಯಾರಾದಂತೆ.
(ದಟ್ಸ್ ಕನ್ನಡ ಪಾಕಶಾಲೆ)



Click it and Unblock the Notifications
