Latest Updates
-
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಸೇವಿಗೆ ಉಪ್ಪಿಟ್ಟು ರುಚಿಕರವಾಗಿಸುವ ಕಲೆ

ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಸೇವಿಗೆ
* ಒಂದು ಚಮಚ ಕಡಲೆ ಬೇಳೆ
* ಒಂದು ಚಮಚ ಉದ್ದಿನ ಬೇಳೆ
* ಕಾಲು ಚಮಚ ಸಾಸಿವೆ
* 2 ಚಮಚ ಗೋಡಂಬಿ
* 2 ಚಮಚ ಹುರಿಗಡಲೆ
* ಒಂದು ಈರುಳ್ಳಿ (ಕತ್ತರಿಸಿದ್ದು)
* 2 ಹಸಿ ಮೆಣಸಿನ ಕಾಯಿ
* 1 ಆಲೂಗೆಡ್ಡೆ
* ಬಟಾಣಿ 1/4 ಕಪ್
* 1 ಕ್ಯಾರೆಟ್
* 1 ಟೊಮೆಟೊ
* 4 1/2 ಕಪ್ ನೀರು
* 3 ಚಮಚ ಎಣ್ಣೆ
* 2 ಚಮಚ ತುಪ್ಪ
* ಸ್ವಲ್ಪ ಕರಿಬೇವಿನ ಎಲೆ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಈರುಳ್ಳಿ, ಟೊಮೆಟೊ, ಆಲೂಗೆಡ್ಡೆ, ಕ್ಯಾರೆಟ್ ಇವುಗಳನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಬೇಕು. ಹಸಿ ಮೆಣಸಿನ ಕಾಯಿಯನ್ನು ಉದ್ದುದ್ದವಾಗಿ ಕತ್ತರಿಸಬೇಕು.
2. ಬಾಣಲೆಯಲ್ಲಿ ಸೇವಿಗೆಯನ್ನು ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ನಂತರ ಎಣ್ಣೆ ಬಿಸಿ ಮಾಡಿ ಸಾಸಿವೆ ಹಾಕಿ ಸಾಸಿವೆ ಚಟಾಪಟಾ ಶಬ್ದ ಬರುವಾಗ ಹುರಿಗಡಲೆ, ಉದ್ದಿನ ಬೇಳೆ ಮತ್ತು ಕರಿಬೇವಿನ ಎಲೆ ಸೇರಿಸಬೇಕು. ನಂತರ ಬಟಾಣಿ ಮತ್ತು ಗೋಡಂಬಿ ಹಾಕಿ ಚೆನ್ನಾಗಿ ಹುರಿಯಬೇಕು.
4. ನಂತರ ಕತ್ತರಿಸಿದ ಆಲೂಗೆಡ್ಡೆ ಮತ್ತು ಕ್ಯಾರೆಟ್, ಟೊಮೆಟೊ ಸೇರಿಸಿ ಟೊಮೆಟೊ ಮೆತ್ತಗಾಗುವವರೆಗೆ ಹುರಿದು ನಂತರ 4 1/2 ಕಪ್ ನೀರು ಸೇರಿಸಿ ರುಚಿಗೆ ತಕ್ಕ ಉಪ್ಪು ಹಾಕಿ ಬೇಯಿಸಬೇಕು.
5. ನೀರು ಕುದಿಯುತ್ತಿರುವಾಗ ಹುರಿದ ಸೇವಿಗೆ ಹಾಕಿ 5-6 ನಿಮಿಷ ಬೇಯಿಸಬೇಕು. ನಂತರ 2 ಚಮಚ ತುಪ್ಪ ಹಾಕಿ ಚೆನ್ನಾಗಿ ತಿರುಗಿಸಬೇಕು. ನಂತರ ಸೇವಿಗೆ ಬೆಂದಾಗ ಉರಿಯಿಂದ ಇಳಿಸಬೇಕು.
ಇದನ್ನು ಬಿಸಿಬಿಸಿಯಾಗಿ ತೆಂಗಿನ ಕಾಯಿ ಚಟ್ನಿ ಜೊತೆ ತಿನ್ನಲು ತುಂಬಾ ರುಚಿಯಾಗಿರುತ್ತದೆ.



Click it and Unblock the Notifications
