Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಕಣ್ಣಲ್ಲಿ ಅಲ್ಲ, ಬಾಯಲ್ಲಿ ನೀರೂರಿಸುವ ಈರುಳ್ಳಿ ಉಪ್ಪಿನಕಾಯಿ

ಬೇಕಾಗುವ ಸಾಮಾಗ್ರಿಗಳು:
* 1/2 ಕೆಜಿ ಈರುಳ್ಳಿ
* ಬೆಳ್ಳುಳ್ಳಿ 100 ಗ್ರಾಂ
* ಹಸಿಮೆಣಸಿನ ಕಾಯಿ 4-5
* ಮೆಣಸಿನ ಪುಡಿ 2 ಚಮಚ
* ಒಳ್ಳೆಣ್ಣೆ 75ml
* ಹುಣಸೆಹಣ್ಣಿನ ಗಟ್ಟಿ ರಸ 2 ಚಮಚ
* ಬೆಲ್ಲ (ಒಂದು ಚಿಕ್ಕ ತುಂಡು)
* ಸ್ವಲ್ಪ ಕರಿ ಬೇವಿನ ಎಲೆ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಈರುಳ್ಳಿ ಮತ್ತು ಹಸಿಮೆಣಸಿ ಕಾಯಿಯನ್ನು ಕತ್ತರಿಸಬೇಕು. ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಇಡಿ.
2. 50ml ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ಮೇಲಿನ ಮಿಶ್ರಣವನ್ನು ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ಈಗ ಕಡಿಮೆ ಉರಿ ಮಾಡಿ ಅದಕ್ಕೆ ಮೆಣಸಿನ ಪುಡಿ, ಉಪ್ಪು ಹಾಕಿ ಸ್ವಲ್ಪ ಹೊತ್ತು ಸೌಟ್ ನಿಂದ ತಿರುಗಿಸುತ್ತಾ ಇರಬೇಕು.
4. ಈಗ ಗ್ಯಾಸ್ ಉರಿ ಸ್ವಲ್ಪ ಜಾಸ್ತಿ ಮಾಡಿ ಬಾಣಲೆ ಇರುವ ಮಿಶ್ರಣಕ್ಕೆ ಹುಣಸೆ ಹಣ್ಣಿನ ರಸ ಹಾಕಿ 3 ನಿಮಿಷ ಕುದಿಸಬೇಕು.
5. ಬೆಲ್ಲವನ್ನು ಪುಡಿ ಮಾಡಿ ಈ ಮಿಶ್ರಣಕ್ಕೆ ಸೇರಿಸಿ ನಂತರ ಚೆನ್ನಾಗಿ ಮಿಶ್ರ ಮಾಡಿ ಸ್ವಲ್ಪ ಹೊತ್ತು ಕಾಯಿಸಿ.
6. ಉಳಿದ ಎಣ್ಣೆಯನ್ನು ಬಿಸಿ ಮಾಡಿ ಈ ಮಿಶ್ರಣದ ಮೇಲೆ ಸುರಿಯಿರಿ.
7. ಉರಿಯಿಂದ ತೆಗೆದು ಒಂದು ಗಂಟೆ ತಣ್ಣಗಾಗಲು ಇಟ್ಟು ನಂತರ ಡಬ್ಬದಲ್ಲಿ ಮುಚ್ಚಿಡಿ.



Click it and Unblock the Notifications
