Latest Updates
-
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್! -
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್ -
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ! -
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್! -
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ?
ಆರೋಗ್ಯ ಹೆಚ್ಚಿಸುತ್ತೆ ಟೊಮೆಟೊ ಬೆಳ್ಳುಳ್ಳಿ ಚಟ್ನಿ

ಅಲ್ಲದೆ ಬೆಳ್ಳುಳ್ಳಿಯನ್ನು ಸಾರಿಗೆ ಅಥವಾ ಚಟ್ನಿಗೆ ಹಾಕಿ ಸೇವಿಸುವುದು ದೇಹದ ಜೀರ್ಣಕ್ರಿಯೆಗೆ ಸಹಾಯ ಮಾಡುವುದರ ಜೊತೆಗೆ ದೇಹವನ್ನು ಬೆಚ್ಚಗೆ ಇಡುತ್ತದೆ. ಈ ಬೆಳ್ಳುಳ್ಳಿಯನ್ನು ಟೊಮೆಟೊ ಜೊತೆ ಹಾಕಿ ಚಟ್ನಿ ಮಾಡಿ ಅದನ್ನು ದೋಸೆ, ವಡಾ ಪಾವ್ ಜೊತೆ ತಿನ್ನಲು ತುಂಬಾ ರುಚಿಕವಾಗಿರುತ್ತದೆ. ಈ ಬೆಳ್ಳುಳ್ಳಿ ಚಟ್ನಿಯನ್ನು ಸುಲಭವಾಗಿ ಮಾಡಬಹುದಾಗಿದ್ದು ಮಾಡುವ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ ಸಾಮಗ್ರಿಗಳು:
ಬೆಳ್ಳುಳ್ಳಿ 3-4
ಟೊಮೆಟೊ 2-3
ಒಣಮೆಣಸು 1 ಹೆಚ್ಚು ಖಾರ ಬೇಕೆಂದರೆ 2 ಹಾಕಬಹುದು
ಶುಂಠಿ ಒಂದು ಇಂಚಿನ ತುಂಡು
ಜೀರಿಗೆ 1 ಚಮಚ
1/2 ಅಥವಾ 1 ಚಮಚ ಮೆಣಸಿನ ಪುಡಿ
ಉಪ್ಪು
ತುಪ್ಪ
ಮಾಡುವ ವಿಧಾನ:
1. ತುಪ್ಪ ಮತ್ತು ಜೀರಿಗೆ ಬಿಟ್ಟು ಉಳಿದ ಸಾಮಾಗ್ರಿಗಳನ್ನು ಮಿಕ್ಸಿಯಲ್ಲಿ ಹಾಕಿ ರುಬ್ಬ ಬೇಕು.
2. ಬಾಣಲೆಗೆ 2 ಚಮಚ ತುಪ್ಪ ಹಾಕಿ ಅದಕ್ಕೆ ಜೀರಿಗೆಯನ್ನು ಹಾಕಿ 1 ನಿಮಿಷದ ಬಳಿಕ ಅರೆದ ಮಿಶ್ರಣವನ್ನು ಹಾಕಬೇಕು.
3. ಈಗ ಇದಕ್ಕೆ ರುಚಿಗೆ ತಕ್ಕ ಉಪ್ಪು ಹಾಕಿ 3-4 ನಿಮಿಷ ಬೇಯಿಸಬೇಕು, ಮಿಶ್ರಣವನ್ನು ಕೆಂಪು ಬಣ್ಣಕ್ಕೆ ಬಂದಾಗ ಒಲೆಯಿಂದ ಇಳಿಸಬೇಕು.
ಈಗ ರೆಡಿಯಾದ ಟೊಮೆಟೊ ಬೆಳ್ಳುಳ್ಳಿ ಚಟ್ನಿಯನ್ನು ದೋಸೆ, ಅನ್ನದ ಜೊತೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ. ಈ ಟೊಮೆಟೊ ಬೆಳ್ಳುಳ್ಳಿ ಚಟ್ನಿಯನ್ನು ಒಂದು ವಾರ ಕಾಲ ಫ್ರಿಜ್ ನಲ್ಲಿ ಸಂಗ್ರಿಹಿಸಿಟ್ಟು ಬಳಸಬಹುದಾಗಿದೆ.



Click it and Unblock the Notifications
