Latest Updates
-
ವಾಟ್ಸಾಪ್ನಲ್ಲಿ ದೀಪಾವಳಿ ಬೋನಸ್ ಲಿಂಕ್ ಬಂದಿದೆಯೇ? ಮೋಸ ಹೋಗುವ ಮುನ್ನ ಈ 30 ಸೆಕೆಂಡ್ ಕೆಲಸ ಮಾಡಿ! -
ದೆಹಲಿ ಮಾಲಿನ್ಯದ ಭೀತಿ: ₹150 ಬಜೆಟ್ನಲ್ಲಿ ನಿಮ್ಮ ಆರೋಗ್ಯ ರಕ್ಷಿಸುವ ಆಂಟಿ-ಸ್ಮಾಗ್ ಡಯಟ್ ಪ್ಲಾನ್ ಇಲ್ಲಿದೆ! -
ದೀಪಾವಳಿ 2026: ಬೆಂಗಳೂರು, ದೆಹಲಿ, ಮುಂಬೈನಲ್ಲಿ ಪಟಾಕಿ ಸಿಡಿಸಲು ಹೊಸ ನಿಯಮಗಳು, ಸಮಯದ ಮಿತಿ! -
ದಕ್ಷಿಣ ಭಾರತದಲ್ಲಿ ಮಳೆ ಅಲರ್ಟ್: ಮನೆಯಲ್ಲೇ ಫಿಟ್ ಆಗಿರಲು ಈ 10 ನಿಮಿಷದ ವರ್ಕೌಟ್ ಟ್ರೈ ಮಾಡಿ! -
ದೀಪಾವಳಿ ಹಬ್ಬದ ಡ್ರಾಮಾ ತಪ್ಪಿಸಿ: ದಂಪತಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಪ್ಲಾನ್ ಮತ್ತು ಮೆಸೇಜ್ ಟಿಪ್ಸ್ -
ದೀಪಾವಳಿ ಪಾರ್ಟಿ ಜೋರಾಗಿದೆಯಾ? ₹30ರೊಳಗೆ ಸಿಗುವ 12 ಆರೋಗ್ಯಕರ ಹೈ-ಪ್ರೋಟೀನ್ ಸ್ನ್ಯಾಕ್ಸ್ ಇಲ್ಲಿದೆ! -
ಧನ್ತೇರಸ್ ಮುನ್ನವೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ: ಇಂದೇ ಖರೀದಿಸಬೇಕಾ ಅಥವಾ ನಾಳೆ ಕಾಯಬೇಕಾ? -
IND vs NZ 2nd ODI: ಪಂದ್ಯದ ದಿನ ಬೆಳಿಗ್ಗೆ ಫ್ರೆಶ್ ಆಗಿರಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ! -
ಎನ್ಆರ್ಐಗಳೇ ಎಚ್ಚರ! ವಿದೇಶಿ ವಿಚ್ಛೇದನ ಭಾರತದಲ್ಲಿ ಸಿಂಧುವಲ್ಲ: ದ್ವಿವಿವಾಹದ ಅಪಾಯ ತಪ್ಪಿಸಿಕೊಳ್ಳುವುದು ಹೇಗೆ? -
ದೀಪಾವಳಿ ಸಿಹಿ ಕೊಳ್ಳುವ ಮುನ್ನ ಎಚ್ಚರ! ಕಲಬರಕೆ ಪತ್ತೆ ಹಚ್ಚುವುದು ಹೇಗೆ?
ಕೊಪ್ಪಳದಲ್ಲಿ ಜೀ ಕನ್ನಡದ ರುಚಿ ಅಭಿರುಚಿ

ಪ್ರತಿ ಜಿಲ್ಲೆಯ ವಿಶೇಷ ಅಡಿಗೆಗೆ ಸಂಬಂಧಿಸಿದ ಸ್ಪರ್ಧೆಗಳನ್ನು ಏರ್ಪಡಿಸಿ ಉತ್ತಮ ಹಾಗೂ ವಿಶೇಷ ಪ್ರಕಾರದ ತಿಂಡಿ ತಿನಿಸುಗಳ ತಯಾರಿಕೆಯ ಬಗ್ಗೆ ರಾಜ್ಯದ ಜನತೆಗೆ ಪರಿಚಿಯಿಸುವುದೇ ರುಚಿ ಅಭಿರುಚಿ, ಡಿಸ್ಟ್ರಿಕ್ಟ್ ಚಾಲೆಂಜ್ ಸರಣಿಯ ಉದ್ದೇಶ. 29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5 ಜನರನ್ನು ಆಯ್ಕೆ ಮಾಡಿ ಅವರ ನಡುವೆ ಸ್ಪರ್ಧೆ ಏರ್ಪಡಿಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು. ಈ ಬಾರಿ ಕೊಪ್ಪಳ ಜಿಲ್ಲೆಯಲ್ಲಿ ಸ್ಪರ್ಧೆ ನಡೆಯಲಿದ್ದು ಕೊಪ್ಪಳಕ್ಕೆ ರುಚಿ ಅಭಿರುಚಿ ತಂಡ ಆಗಮಿಸಲಿದೆ.
ಕೊಪ್ಪಳ ಜಿಲ್ಲೆಯ ಆಯ್ಕೆ ಪ್ರಕ್ರಿಯೆಯನ್ನು ದಿನಾಂಕ 02.03.2010ರ ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಕೊಪ್ಪಳದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಆವರಣದಲ್ಲಿರುವ ಬ್ಲಾಕ್ ರಿಸೋರ್ಸ್ ಸೆಂಟರ್ (ಬಿಆರ್ಸಿ) ನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು ಹಾಗೂ ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಆಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶವನ್ನು ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ಜೊತೆಗೆ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 97411 58120, 99001 49970 ಸಂಚಾರಿವಾಣಿಗಳನ್ನು ಅಥವಾ 080-2686 0292 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.



Click it and Unblock the Notifications
