Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಚಾಮರಾಜನಗರದ ವನಿತೆಯರೇ ಸೌಟು ಕೈಗೆತ್ತಿಕೊಳ್ಳಿ

ಪ್ರತಿ ಜಿಲ್ಲೆಯ ವಿಶೇಷ ಅಡುಗೆಗೆ ಸಂಬಂಧಿಸಿದ ಸ್ಪರ್ಧೆಗಳನ್ನು ಏರ್ಪಡಿಸಿ ಉತ್ತಮ ಹಾಗೂ ವಿಶೇಷ ಪ್ರಕಾರದ ತಿಂಡಿ ತಿನಿಸುಗಳ ತಯಾರಿಕೆಯ ಬಗ್ಗೆ ರಾಜ್ಯದ ಜನತೆಗೆ ಪರಿಚಯಿಸುವುದೇ ರುಚಿ ಅಭಿರುಚಿ-ಡಿಸ್ಟ್ರಿಕ್ಟ್ ಚಾಲೆಂಜ್ ಸರಣಿಯ ಉದ್ದೇಶ. 30 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ ಅತ್ಯುತ್ತಮ ಎನಿಸಿದ 5 ಜನರನ್ನು ಆಯ್ಕೆ ಮಾಡಿ ಅವರ ನಡುವೆ ಸ್ಪರ್ಧೆ ಏರ್ಪಡಿಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು. ಪ್ರಸ್ತುತ ಚಾಮರಾಜನಗರದಲ್ಲಿ ಸ್ಪರ್ಧೆ ನಡೆಯಲಿದೆ.
ಚಾಮರಾಜನಗರದಲ್ಲಿ ದಿನಾಂಕ 3.5.2010ರ ಸೋಮವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದೆ. ಆಡಿಷನ್ ನಡೆಯುವ ವಿಳಾಸ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಆವರಣ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ, ಚಾಮರಾಜನಗರ.
ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಫಟಾಫಟ್ ಅಂತ ಐದು ನಿಮಿಷದೊಳಗೆ ತಯಾರಿಸುವ ಚಾಕಚಕ್ಯತೆ ಹೊಂದಿರಬೇಕು. ಗಮನದಲ್ಲಿಡಿ, ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಆಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 97421 91586, 99001 49970, 97411 58120 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ಮಾಧ್ಯಮ ಸಂಪರ್ಕ : ಮಧುಸೂಧನ್.ವಿ
9900289844



Click it and Unblock the Notifications
