Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಮಂಗಳೂರಿನಲ್ಲಿ ರುಚಿ ಅಭಿರುಚಿ ಪಾಕ ಸ್ಪರ್ಧೆ

29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5 ಜನರನ್ನು ಆಯ್ಕೆ ಮಾಡಿ ಅವರ ನಡುವೆ ಸ್ಪರ್ಧೆ ಏರ್ಪಡಿಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು. ಈ ಬಾರಿ ಕರ್ನಾಟಕದ ಕರಾವಳಿ ಜಿಲ್ಲೆ ಎಂದೇ ಖ್ಯಾತಿಗಳಿಸಿರುವ ದಕ್ಷಿಣ ಕನ್ನಡ ಜಿಲ್ಲೆಗೆ ರುಚಿ ಅಭಿರುಚಿ ತಂಡ ಆಗಮಿಸಲಿದೆ.
ದಿನಾಂಕ 12 ಡಿಸೆಂಬರ್, ಶನಿವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ಗ್ಯಾಲರಿ ಹಾಲ್‌ನಲ್ಲಿ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಸ್ಥಳದಲ್ಲಿಯೇ ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು ಹಾಗೂ ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಅಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶವನ್ನು ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ಜೊತೆಗೆ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 97411 58120, 97411 58124 ಹಾಗೂ99001 49970 ಸಂಚಾರಿವಾಣಿಗಳನ್ನು ಅಥವಾ 080-2686 0292 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.
ಸೂಚನೆ:
ಮುಂದೆ ಆಯ್ಕೆ ಪ್ರಕ್ರಿಯೆ ನಡೆಯಬಹುದಾದ ತಾತ್ಕಾಲಿಕ ಪಟ್ಟಿ. (ಇನ್ನು ಸ್ಥಳ ನಿಗದಿಯಾಗಿಲ್ಲ)
ದಿನಾಂಕ 14 ಡಿಸೆಂಬರ್, ಸೋಮವಾರ ಉಡುಪಿ.
ದಿನಾಂಕ 19 ಡಿಸೆಂಬರ್, ಶನಿವಾರ ಮಡಿಕೇರಿ.
ದಿನಾಂಕ 04 ಜನೆವರಿ, ಸೋಮವಾರ ಹಾಸನ.
ಮಾಧ್ಯಮ ಸಂಪರ್ಕ : ಮಧುಸೂಧನ್.ವಿ, 99002 89844



Click it and Unblock the Notifications