Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಕರ್ನಾಟಕದ ಕಾಶ್ಮೀರದಲ್ಲಿ ರುಚಿ ಅಭಿರುಚಿ

ಪ್ರತಿ ಜಿಲ್ಲೆಯ ವಿಶೇಷ ಅಡುಗೆಗೆ ಸಂಬಂಧಿಸಿದ ಸ್ಪರ್ಧೆಗಳನ್ನು ಏರ್ಪಡಿಸಿ ಉತ್ತಮ ಹಾಗೂ ವಿಶೇಷ ಪ್ರಕಾರದ ತಿಂಡಿ ತಿನಿಸುಗಳ ತಯಾರಿಕೆಯ ಬಗ್ಗೆ ರಾಜ್ಯದ ಜನತೆಗೆ ಪರಿಚಯಿಸುವುದೇ ರುಚಿ ಅಭಿರುಚಿ-ಡಿಸ್ಟ್ರಿಕ್ಟ್ ಚಾಲೆಂಜ್ ಸರಣಿಯ ಉದ್ದೇಶ. 29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5 ಜನರನ್ನು ಆಯ್ಕೆ ಮಾಡಿ ಅವರ ನಡುವೆ ಸ್ಪರ್ಧೆ ಏರ್ಪಡಿಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು.
ಕೊಡಗು ಜಿಲ್ಲೆಯ ಆಯ್ಕೆ ಪ್ರಕ್ರಿಯೆಯನ್ನು ದಿನಾಂಕ ಡಿಸೆಂಬರ್ 19, ಶನಿವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿರುವ ರೋಟರಿ ಕ್ಲಬ್‌ನಲ್ಲಿ ಏರ್ಪಡಿಸಲಾಗಿದೆ.
ನಿಯಮ : ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ಕೊಡಗು ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು. ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಆಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶವನ್ನು ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ಜೊತೆಗೆ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ : 97411 58120, 97411 58124 ಹಾಗೂ 99001 49970 ಸಂಚಾರಿವಾಣಿಗಳನ್ನು ಅಥವಾ 080-2686 0292 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.
ಮಾಧ್ಯಮ ಸಂಪರ್ಕ: ಮಧುಸೂಧನ್.ವಿ 99002 89844



Click it and Unblock the Notifications
