Latest Updates
-
ಭಾರತ vs ಪಾಕಿಸ್ತಾನ ಏಷ್ಯನ್ ಗೇಮ್ಸ್ ಫೈನಲ್: ಹೈ-ವೋಲ್ಟೇಜ್ ಕದನಕ್ಕೆ ಸಜ್ಜಾಗಿ, ಲೈವ್ ವೀಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಮುಂಬೈನಲ್ಲಿ ಕಲುಷಿತ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಎಚ್ಚರಿಕೆ ವಹಿಸಿ, ಇಲ್ಲದಿದ್ದರೆ ಆರೋಗ್ಯಕ್ಕೆ ಕುತ್ತು! -
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ
ಕೆನಡಾದಲ್ಲಿ ಸದಾನಂದ ಮಯ್ಯ ಪ್ರಬಂಧ ಮಂಡನೆ

ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿ ಎಂ.ಟಿ.ಆರ್ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಗೊಳಿಸಿದವರು ಕನ್ನಡಿಗ ಸದಾನಂದ ಮಯ್ಯ. ಈ ವಿಚಾರ ಸಂಕಿರಣದಲ್ಲಿ ಅವರು 'ಫುಡ್ ಪ್ಯಾಕೇಜಿಂಗ್ ನಲ್ಲಿ ನ್ಯಾನೋ ತಂತ್ರಜ್ಞಾನದ ಬಳಕೆ'ಯ ಕುರಿತಾಗಿ ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದಲ್ಲಿ ಮಾಡಿರುವ ಸಂಚಲನ ಹಾಗೂ ಆಹಾರದ ಸುರಕ್ಷತೆಯ ದೃಷ್ಟಿಯಿಂದ ಈ ತಂತ್ರಜ್ಞಾನದ ಉಪಯುಕ್ತತೆ ಕುರಿತಂತೆ ಅವರು ತಮ್ಮ ಪ್ರಬಂಧದಲ್ಲಿ ಚರ್ಚಿಸಲಿದ್ದಾರೆ.
ಆಹಾರ ಉದ್ಯಮ ವಿಶ್ವದ ಅತ್ಯಂತ ಪ್ರಮುಖ ಉತ್ಪಾದನಾ ಉದ್ಯಮವಾಗಿದ್ದು, ವಾರ್ಷಿಕ 4 ಟ್ರಿಲಿಯನ್ ಯು.ಎಸ್. ಡಾಲರ್‌ಗಳ ವಹಿವಾಟು ನಡೆಸುತ್ತಿದೆ. ಆಹಾರ ಸಂಸ್ಕರಣೆ ಹಾಗೂ ಸಂರಕ್ಷಣೆ ಆಹಾರ ಉದ್ಯಮದ ಪ್ರಮುಖ ಭಾಗಗಳಾಗಿದ್ದು, ಇವುಗಳ ಸರಿಯಾದ ನಿರ್ವಹಣೆ ಅತ್ಯಂತ ಅಗತ್ಯವಾಗಿದೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದ ಕ್ಷಮತೆಯನ್ನು ವೃದ್ಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಬಲ್ಲದು.
ಕೆಲವು ಜೈವಿಕವಾಗಿ ಕ್ರಿಯಾಶೀಲವಾಗಿರುವ ಆಹಾರ ಪದಾರ್ಥಗಳನ್ನು ನಮ್ಮ ದೇಹ ಸುಲಭವಾಗಿ ಹೀರಿಕೊಳ್ಳಲು ಆಗುವುದಿಲ್ಲ. ನ್ಯಾನೋ ವಸ್ತುಗಳನ್ನು ಅಳವಡಿಸಿದಾಗ, ಹೀರುವಿಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಬಹುದು. ಪ್ರಪಂಚದ ಪ್ರತಿಷ್ಠಿತ ಸಂಶೋಧನ ಕೇಂದ್ರಗಳು ಈ ನಿಟ್ಟಿನಲ್ಲಿ ವ್ಯಾಪಕವಾಗಿ ಸಂಶೋಧನೆಯನ್ನು ನಡೆಸುತ್ತಿವೆ. ಆಹಾರ ಸಂರಕ್ಷಣೆ ಅತ್ಯಂತ ಅವಶ್ಯಕವಾಗಿರುವ ಈ ದಿನಗಳಲ್ಲಿ ಆ ಕುರಿತ ಸಂಶೋಧನೆ ಪ್ರತಿ ಹಂತದಲ್ಲಿಯೂ ಸ್ವಾಗತಾರ್ಹ. ಭಾರತದ ಅನೇಕ ಪ್ರತಿಷ್ಠಿತ ಉದ್ಯಮಿಗಳು ಈ ದಿಶೆಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಅಭಿನಂದನೆಗೆ ಭಾಜನರಾಗಿದ್ದಾರೆ. ಡಾ|| ಪಿ. ಸದಾನಂದ ಮಯ್ಯರವರು ಈ ಉದ್ಯಮಿಗಳ ಸಾಲಿನಲ್ಲಿ ಅಗ್ರ ಗಣ್ಯರಾಗಿದ್ದಾರೆ. [ ಸದಾನಂದ ಮಯ್ಯ ]



Click it and Unblock the Notifications
