Latest Updates
-
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ
ಎಗ್ ಲವರ್ಸ್ಗೆ ಫೇವರಿಟ್! ಕೇವಲ 10 ನಿಮಿಷ ಸಾಕು.. ಪಕ್ಕಾ ರೆಸ್ಟೋರೆಂಟ್ ಸ್ಟೈಲ್ 'ಎಗ್ 65' ರೆಸಿಪಿ
ನೀವು ಚಿಕನ್ 65, ಮಟನ್ 65, ಫಿಶ್ 65 ಕೇಳಿರುತ್ತೀರಿ. ಆದರೆ, 'ಎಗ್ 65' ಬಗ್ಗೆ ಕೇಳಿದ್ದೀರಾ? ಅಥವಾ ಎಂದಾದರೂ 'ಎಗ್ 65' (Egg 65) ತಿಂದಿದ್ದೀರಾ? ಇಲ್ಲದಿದ್ದರೆ, ಇಂದು ಮನೆಯಲ್ಲಿಯೇ ಮಾಡಿ. ಇದನ್ನು ಮಾಡಲು ಕೇವಲ 10 ನಿಮಿಷ ಸಾಕು. ಹೌದು, ಇದು ಮಾಂಸಾಹಾರಿಗಳು, ಮಕ್ಕಳು ಮತ್ತು ಮೊಟ್ಟೆ ತಿನ್ನುವವರಿಗೆ ಬಹಳ ಇಷ್ಟವಾಗುತ್ತದೆ. ಇದು ಎಷ್ಟು ರುಚಿಕರವೋ, ಆರೋಗ್ಯಕ್ಕೂ ಅಷ್ಟೇ ಒಳ್ಳೆಯದು. ಸಂಜೆ ಮಕ್ಕಳು ಶಾಲೆಯಿಂದ ಬಂದ ಬಳಿಕ ಇದನ್ನು ತಯಾರಿಸಿ. ಖಂಡಿತ ಅವರು ಖುಷಿಪಡುತ್ತಾರೆ. ಬನ್ನಿ, ರೆಸ್ಟೋರೆಂಟ್ ಶೈಲಿಯಲ್ಲಿ ಎಗ್ 65 (Restaurant Style Egg 65) ಮಾಡುವುದು ಹೇಗೆ ಎಂಬುದನ್ನು ತಿಳಿಯೋಣ.
ಒಂದು ಮೊಟ್ಟೆಯಲ್ಲಿ ಸಾಕಷ್ಟು ಪ್ರೋಟೀನ್ ಅಂಶವಿದೆ. ಮೂಳೆಗಳ ಬಲವನ್ನು ಹೆಚ್ಚಿಸುತ್ತದೆ. ಇದು ಹಲವರಿಗೆ ಗೊತ್ತೇ ಇಲ್ಲ. ಮೊಟ್ಟೆಯಲ್ಲಿ ಪ್ರೋಟೀನ್ ರೈಬೋಫ್ಲಾವಿನ್, ಫೋಲೇಟ್, ಕಬ್ಬಿಣ, ರಂಜಕ, ಸೆಲೆನಿಯಮ್, ಮೆಗ್ನೀಸಿಯಮ್, ವಿಟಮಿನ್ ಎ, ಇ ಮತ್ತು ಬಿ6, ವಿಟಮಿನ್ ಡಿ ಮತ್ತು ಮೂಳೆಗಳ ಆರೋಗ್ಯಕ್ಕಾಗಿ ಕ್ಯಾಲ್ಸಿಯಂ ಹೇರಳವಾಗಿದೆ. ಹೀಗಾಗಿ, ಇದನ್ನು ನಿತ್ಯ ಸೇವಿಸುವುದರಿಂದ ನಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತದೆ.

ಎಗ್ 65 ತಯಾರಿಸಲು ಬೇಕಾಗುವ ಸಾಮಾಗ್ರಿಗಳು
• 4 ಬೇಯಿಸಿದ ಮೊಟ್ಟೆ
• ಕಡಲೆ ಹಿಟ್ಟು
• ಮೈದಾ
• ಕಾರ್ನ್ಸ್ಟಾರ್ಚ್
• ರುಚಿಗೆ ತಕ್ಕಷ್ಟು ಉಪ್ಪು
• ನೀರು(ಅಗತ್ಯಕ್ಕೆ ತಕ್ಕಷ್ಟು)
• ಎಣ್ಣೆ
• ಮೊಸರು
• ಕೆಂಪು ಮೆಣಸಿನ ಪುಡಿ
• ಗರಂ ಮಸಾಲಾ ಪುಡಿ
• ಅರಿಶಿನ ಪುಡಿ
• ಇಂಗು
• ಸಾಸಿವೆ
• ಒಣ ಮೆಣಸಿನಕಾಯಿ
• ಶುಂಠಿ
• ಬೆಳ್ಳುಳ್ಳಿ
• ಹಸಿ ಮೆಣಸಿನಕಾಯಿ
• ಕರಿಬೇವಿನ ಎಲೆ
• ಕೊತ್ತಂಬರಿ ಸೊಪ್ಪು
ಎಗ್ 65 ಮಾಡುವ ವಿಧಾನ
ಮೊದಲು, ಒಂದು ಪಾತ್ರೆಯಲ್ಲಿ ಕಡಲೆ ಹಿಟ್ಟು, ಮೈದಾ, ಕಾರ್ನ್ಸ್ಟಾರ್ಚ್, ಉಪ್ಪು ಮತ್ತು ನೀರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ದೋಸೆ ಹಿಟ್ಟಿನ ಹದಕ್ಕೆ ಕಲೆಸಿಕೊಳ್ಳಿ. ಬಳಿಕ ಅದನ್ನು ಒಂದು ಕಡೆ ಇಡಿ. ಈಗ 4 ಬೇಯಿಸಿದ ಮೊಟ್ಟೆಗಳನ್ನು ತೆಗೆದುಕೊಂಡು ಒಂದೊಂದಾಗಿ 4 ತುಂಡುಗಳಾಗಿ ಕತ್ತರಿಸಿ. ಬಳಿಕ ಮೊಟ್ಟೆಯ ತುಂಡುಗಳಿಗೆ ಕೆಂಪು ಮೆಣಸಿನ ಪುಡಿ, ಗರಂ ಮಸಾಲಾ ಪುಡಿ ಮತ್ತು ಉಪ್ಪನ್ನು ಹಾಕಿ ಚೆನ್ನಾಗಿ ಲೇಪಿಸಿ. ಬಳಿಕ ಮೊಟ್ಟೆಯ ತುಂಡುಗಳನ್ನು ಕಡಲೆ ಹಿಟ್ಟಿನ ಮಿಶ್ರಣದಲ್ಲಿ ಅದ್ದಿ ಬಿಸಿ ಎಣ್ಣೆಯಲ್ಲಿ ಕರಿಯಿರಿ. ಅರ್ಧ ಬೆಂದ ನಂತರ ಮೊಟ್ಟೆಯನ್ನು ತೆಗೆದು ಎಣ್ಣೆಯನ್ನು ಮತ್ತೆ ಬಿಸಿ ಮಾಡಿ.

ಈ ಮಧ್ಯೆ ಇನ್ನೊಂದು ಬಟ್ಟಲಿನಲ್ಲಿ ಮೊಸರು, ಮೈದಾ, ಕೆಂಪು ಮೆಣಸಿನ ಪುಡಿ, ಅರಿಶಿನ ಪುಡಿ, ಕೊತ್ತಂಬರಿ ಪುಡಿ, ಗರಂ ಮಸಾಲಾ ಮತ್ತು ನೀರನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಎಣ್ಣೆ ಬಿಸಿಯಾದ ನಂತರ ಮೊಟ್ಟೆಗಳನ್ನು ಹಾಕಿ ಗರಿಗರಿಯಾಗುವವರೆಗೆ ಕರಿಯಿರಿ. ಬಳಿಕ ಒಂದು ಬಾಣಲೆಯಲ್ಲಿ ಎಣ್ಣೆ, ಇಂಗು, ಸಾಸಿವೆ, ಒಣ ಮೆಣಸಿನಕಾಯಿ, ಶುಂಠಿ, ಬೆಳ್ಳುಳ್ಳಿ ಮತ್ತು ಹಸಿ ಮೆಣಸಿನಕಾಯಿ ಹಾಕಿ ಒಂದು ನಿಮಿಷ ಹುರಿಯಿರಿ. ಮೊಸರಿನ ಮಿಶ್ರಣಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಕಲಸಿ.
ಈಗ ಮೊಸರಿನ ಮಿಶ್ರಣವನ್ನು ಬಾಣಲೆಗೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬಳಿಕ ಕರಿದ ಮೊಟ್ಟೆ ಮತ್ತು ಕರಿಬೇವಿನ ಎಲೆಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕೊನೆಯಲ್ಲಿ ಕೊತ್ತಂಬರಿ ಸೊಪ್ಪನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಇಷ್ಟು ಮಾಡಿದರೆ, ರೆಸ್ಟೋರೆಂಟ್ ಶೈಲಿಯಲ್ಲಿ ಎಗ್ 65 ಸಿದ್ಧ. ಇದನ್ನು ಬಿಸಿ ಇರುವಾಗಲೇ ಮಕ್ಕಳಿಗೆ ಬಡಿಸಿ. ಹೀಗೆ ಸುಲಭವಾಗಿ ಮತ್ತು ತ್ವರಿತವಾಗಿ ತಯಾರಿಸಬಹುದಾದ ಎಗ್ 65 ಎಲ್ಲರಿಗೂ ಇಷ್ಟವಾಗುತ್ತದೆ. ಇದನ್ನು ಮನೆಯಲ್ಲಿ ಒಮ್ಮೆ ಟ್ರೈ ಮಾಡಿ.



Click it and Unblock the Notifications