Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಕಿಚಡಿ ರೆಸಿಪಿ: ಮಕ್ಕಳಿಗೆ ಆರೋಗ್ಯಕರ ಆಹಾರ
ಕಿಚಡಿ ಆರೊಗ್ಯಕರವಾದ ಆಹಾರವಾಗಿದೆ. ಇದನ್ನು ಬೆಳಗ್ಗೆ, ಸಂಜೆ ಯಾವ ಹೊತ್ತಿನಲ್ಲಿ ಬೇಕಾದರೂ ಸವಿಯಬಹುದು. ಭಾರತದ ಪ್ರಸಿದ್ಧ ಆಹಾರಗಳಲ್ಲಿ ಕಿಚಡಿಯೂ ಒಂದು. ಇದನ್ನು ಮಕ್ಕಳಿಗೆ ಸ್ವಲ್ಪ ಖಾರ ಕಡಿಮೆ ಮಾಡಿ ತಯಾರಿಸಿ ಕೊಟ್ಟರೆ ಅವರಿಗೆ ಪೌಷ್ಠಿಕಾಂಶದ ಆಹಾರ ನೀಡಿದಂತಾಗುವುದು. ಇದನ್ನು ತಿನ್ನಲು ರುಚಿಕರವಾಗಿರುವುದರಿಂದ ಮಕ್ಕಳಿಗೆ ತುಂಬಾನೇ ಇಷ್ಟವಾಗುವುದು.

ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ:
Recipe By: Reena TK
Recipe Type: breakfast
Serves: 2
-
ಬೇಕಾಗುವ ಸಾಮಗ್ರಿ
ಚಿಕ್ಕ ಲೋಟದಲ್ಲಿ 1/2 ಲೋಟ ಹೆಸರು ಬೇಳೆ
ಅದೇ ಲೋಟದಲ್ಲಿ 1/2 ಲೋಟ ಅಕ್ಕಿ
2 ಕಾಳು ಮೆಣಸು
1 ಈರುಳ್ಳಿ
1-2 ಟೊಮೆಟೊ
1-2 ಒಣ ಮೆಣಸು (ನಿಮ್ಮ ಮಗುವಿಗೆ ಖಾರ ಇಷ್ಟವಿಲ್ಲದಿದ್ದರೆ 1 ಮೆಣಸು ಹಾಕಿ)
1/2 ಚಮಚ ಬಾದಾಮಿ/ಪಿಸ್ತಾ ಪುಡಿ (optional)
1/4 ಚಮಚ ಜೀರಿಗೆ ಪುಡಿ
1/4 ಚಮಚ ಕೊತ್ತಂಬರಿ ಪುಡಿ
ಚಿಟಿಕೆಯಷ್ಟು ಅರಿಶಿಣ ಪುಡಿ
1 ಲವಂಗ
1 ಚಮಚ ತುಪ್ಪ
ಕರಿಬೇವು/ ಪಲಾವ್ ಎಲೆ
-
ಮಾಡುವ ವಿಧಾನ:
* ಕುಕ್ಕರ್ನಲ್ಲಿ ಹೆಸರು ಬೇಳೆ, ಅಕ್ಕಿ, ಟೊಮೆಟೊ, ಈರುಳ್ಳಿ, ಕಾಳು ಮೆಣಸು, ರುಚಿಗೆ ತಕ್ಕ ಉಪ್ಪು, ಅರಿಶಿಣ ಹಾಕಿ 4 ಲೋಟ ನೀರು ಹಾಕಿ ಬೇಯಿಸಿ. 4-5 ವಿಶಲ್ ಆಗುವಷ್ಟು ಹೊತ್ತು ಬೇಯಿಸಿ.
* ಈಗ ಪಾತ್ರೆಯಲ್ಲಿ ತುಪ್ಪ ಬಿಸಿ ಮಾಡಿ ಸ್ವಲ್ಪ ಜೀರಿಗೆ ಹಾಕಿ ಅದು ಚಟ್ಪಟ್ ಶಬ್ದ ಮಾಡುವಾಗ ಒಣ ಮೆನಸು ಮುರಿದು ಹಾಕಿ, ನಂತರ ಪಲಾವ್ ಎಲೆ ಅಥವಾ ಸ್ವಲ್ಪ ಕರಿಬೇವು ಹಾಕಿ ಲವಂಗ ಸೇರಿಸಿ.
* ನಂತರ ಬೇಯಿಸಿದ ಅಕ್ಕಿ- ಬೇಳೆ ಸೇರಿಸಿ, ಅದಕ್ಕೆ ಸ್ವಲ್ಪ ಖಾರ ಪುಡಿ (ಬೇಕಿದ್ದರೆ), ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಡ್ರೈಫ್ರೂಟ್ಸ್ ಪುಡಿ ಸೇರಿಸಿ2-3 ನಿಮಿಷ ಕುದಿಸಿದರೆ ಆರೊಗ್ಯಕರವಾದ ಕಿಚಡಿ ರೆಡಿ.
* ಇದನ್ನು ಮೊಸರು ಜೊತೆ ಸೇರಿಸಿ ಸವಿಯಲು ನೀಡಿ.
- ಸಲಹೆ: ಇದನ್ನು ನೀವು ಮಗುವಿಗೆ 8 ತಿಂಗಳು ಕಳೆದ ಮೇಲೆ ದಿನದಲ್ಲಿ ಒಂದು ಹೊತ್ತು ನೀಡಿದರೆ ಅವರಿಗೆ ಪೌಷ್ಠಿಕ ಆಹಾರ ಸಿಗುವುದು. ಒಂದು ವರ್ಷದ ಕೆಳಗಿನ ಮಕ್ಕಳಿಗೆ ಡ್ರೈಫ್ರೂಟ್ಸ್ ಪುಡಿ ಬಳಸಬೇಡಿ.
- ಸರ್ವ್ - 1 ಪ್ಲೇಟ್
- ಪ್ರೊಟೀನ್ - 6ಗ್ರಾಂ
- ಕಾರ್ಬ್ಸ್ - 22ಗ್ರಾಂ
- ನಾರಿನಂಶ - 3ಗ್ರಾಂ



Click it and Unblock the Notifications
