Latest Updates
-
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಬರೀ 15 ನಿಮಿಷದಲ್ಲಿ ಟೊಮೇಟೊ ಚಟ್ನಿ ತಯಾರಿಸಿ..! ಇಲ್ಲಿದೆ ಹೊಸ ರೆಸಿಪಿ
ಇತ್ತೀಚಿನ ದಿನಗಳಲ್ಲಿ ಇನ್‌ಸ್ಟಂಟ್ ಫುಡ್ ಐಟಂಗಳೆಂದರೆ ಎಲ್ಲರಿಗೂ ಇಷ್ಟ. ಅಡುಗೆ ಮನೆಯಲ್ಲಿ ಗಂಟೆಗಳ ಹೊತ್ತು ಕಾಲ ಕಳೆಯಲು ಯಾರಿಗೂ ಇಷ್ಟವಾಗುವುದಿಲ್ಲ. ಅಲ್ಲದೆ ಅಷ್ಟು ಸಮಯವೂ ಅವರಿಗೆ ಇರುವುದಿಲ್ಲ. ಹೀಗಾಗಿ ಅವರು ಅತೀ ಕಡಿಮೆ ಸಮಯದಲ್ಲಿ ಮಾಡಬಹುದಾದ ಆಹಾರವನ್ನು ಮಾಡಲು ಇಷ್ಟ ಪಡುತ್ತಾರೆ. ಗಡಿಬಿಡಿಯ ಜೀವನದಲ್ಲಿ ಸರಳವಾಗಿ ತಯಾರಿಸಬಹುದಾದ ಮತ್ತು ದೀರ್ಘಕಾಲ ಬಾಳಿಕೆ ಬರುವ ಖಾದ್ಯವನ್ನು ಎಲ್ಲರೂ ಇಷ್ಟಪಡುತ್ತಾರೆ.
ರೆಡಿಮೇಡ್ ಆಹಾರ ಬಳಕೆಯನ್ನು ಆದಷ್ಟು ಕಡಿಮೆ ಮಾಡಿ ಸ್ವಾದಿಷ್ಟವಾಗಿ ನಿಮ್ಮ ಕೈಯಲ್ಲೇ ಮಾಡಿ ತಯಾರಿಸಬಹುದಾದ ಖಾದ್ಯಗಳು ನಿಮಗೂ ಖುಷಿಯನ್ನು ನೀಡುತ್ತದೆ ಜೊತೆಗೆ ನಿಮ್ಮ ಮನೆಯವರಿಗೂ ಆನಂದನ್ನು ಉಂಟುಮಾಡುತ್ತದೆ. ಇಂತಹ ಒಂದು ರೆಸಿಪಿ ಎಂದರೆ ಅದು ಟೊಮೇಟೋ ಚಟ್ನಿ.

ಟೊಮೇಟೊ ಚಟ್ನಿಯನ್ನು ಈರುಳ್ಳಿಯೊಂದಿಗೆ ಹುರಿದು ಬೇರೆ ಮಸಾಲಾ ಸಾಮಾಗ್ರಿಗಳೊಂದಿಗೆ ಅದನ್ನು ರುಬ್ಬಿ ನಂತರ ಬೇಯಿಸಿ ಮಾಡುವ ಚಟ್ನಿಯಿಂದ ಬಾಯಲ್ಲಿ ನೀರೂರುವುದು ಖಂಡಿತ. ನಿಮ್ಮೆಲ್ಲಾ ತಿಂಡಿಗೆ ಇದು ಉತ್ತಮ ಸಾಥ್ ಕೂಡ ನೀಡುತ್ತದೆ. ಹಾಗಿದ್ದರೆ ಈ ರೆಸಿಪಿ ಬಗ್ಗೆ ತಿಳಿದುಕೊಳ್ಳೋಣ.
ಸಾಮಾಗ್ರಿಗಳು
*ಟೊಮೇಟೊ - 1/2 ಕೆ.ಜಿ
*ಈರುಳ್ಳಿ - 2
*ಬೆಳ್ಳುಳ್ಳಿ - 10 ಎಸಳು
*ಒಣಮೆಣಸಿನಕಾಯಿ - 2- 3 (ಸಣ್ಣದಾಗಿ ಕತ್ತರಿಸಲಾಗಿರುವ)
*ಹುಣಸೆಹಣ್ಣು - ಸಣ್ಣ ತುಂಡು
*ಉಪ್ಪು -ರುಚಿಗೆ ತಕ್ಕಷ್ಟು
*ಕೊತ್ತಂಬರಿ ಸೊಪ್ಪು - ಸ್ವಲ್ಪ (ಸಣ್ಣದಾಗಿ ಕತ್ತರಿಸಲಾಗಿರುವ)
*ಕರಿಬೇವಿನ ಸೊಪ್ಪು- 4-5 ಎಸಳು
ಒಗ್ಗರಣೆಗೆ
*ಸಾಸಿವೆ - ಅರ್ಧ ಚಮಚ
*ಜೀರಿಗೆ - ಅರ್ಧ ಚಮಚ
*ಇಂಗು - ಚಿಟಿಕೆಯಷ್ಟು

*ಮೊದಲಿಗೆ ಬಾಣಲೆಯನ್ನು ಒಲೆ ಮೇಲಿಟ್ಟು ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ
ಈರುಳ್ಳಿ ಬೆಳ್ಳುಳ್ಳಿ ಟೊಮೇಟೋ ಮತ್ತು ಒಣಮೆಸಿನಕಾಯಿಯನ್ನು ಚೆನ್ನಾಗಿ
ಹುರಿದುಕೊಳ್ಳಿ
*ಚೆನ್ನಾಗಿ ಹುರಿದುಕೊಂಡ ನಂತರ ಕೊತ್ತಂಬರಿ ಸೊಪ್ಪು, ಕರಿಬೇವಿನೆಸಳು,
ಹುಣಸೆಹಣ್ಣು ಮತ್ತು ಉಪ್ಪು ಸೇರಿಸಿ ಮಿಕ್ಸಿಗೆ ಹಾಕಿ ಚೆನ್ನಾಗಿ
ರುಬ್ಬಿಕೊಳ್ಳಿ
*ಇನ್ನು ಸಾಸಿವೆ, ಇಂಗು, ಜೀರಿಗೆಯ ಒಗ್ಗರಣೆಯನ್ನು ರೆಡಿ ಮಾಡಿ ಈ ಚಟ್ನಿಗೆ
ಸೇರಿಸಿ. ನಂತರ ಈ ಟೊಮೇಟೊ ಚಟ್ನಿಯನ್ನು ಚೆನ್ನಾಗಿ ಕುದಿಸಿಕೊಳ್ಳಿ. ಈ ಮಿಶ್ರಣ
ಗಟ್ಟಿಯಾಗುವವರೆಗೆ ಬೇಯಿಸಿಕೊಳ್ಳಿ.
*ದೋಸೆ ಚಪಾತಿಗೆ ನೆಂಜಿಕೊಳ್ಳಲು ಇದು ಅತ್ಯುತ್ತಮ ಕಾಂಬಿನೇಶನ್ ಆಗಿದೆ.
ಇಷ್ಟೆಲ್ಲಾ ಮಾಡಲು ನಿಮಗೆ ತಗುಲುವುದು ಬರಿ ಅರ್ಧ ಗಂಟೆಯ ಕಾಲ ಅಷ್ಟೇ ಹೀಗಾಗಿ ಈ ಚಟ್ನಿಯನ್ನು ಹೆಚ್ಚಿನವರು ಇಷ್ಟಪಡುತ್ತಾರೆ. ಅತೀ ಕಡಿಮೆ ಸಮಯದಲ್ಲಿ ನೀವು ಇದನ್ನು ಮಾಡಿ ಮುಗಿಸಬಹುದು. ಇಷ್ಟೇ ಅಲ್ಲ ಅಡುಗೆಗೆ ಬೇರೆ ಯಾರಾದರು ಸಹಾಯ ಮಾಡುವವರಿದ್ದರೆ ಈ ಟೊಮೇಟೋ ಚಟ್ನಿಯನ್ನು ಕೇವಲ 15 ನಿಮಿಷದಲ್ಲಿ ಸವಿಯಲು ಟೇಬಲ್ ಮೇಲೆ ಇಡಬಹುದು.



Click it and Unblock the Notifications
