Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ರುಚಿಕರವಾದ ಚಿಕನ್ ಫ್ರೈ ರೆಸಿಪಿ

ಪದಾರ್ಥಗಳು:
* 1/2 ಕೆಜಿ ಕೋಳಿ ( ಬೋನ್ ಲೆಸ್ )
* 4 ಚಮದಷ್ಟು ಎಣ್ಣೆ
* 2 ಈರುಳ್ಳಿ
* 1 ಟೊಮೆಟೊ
* 1ಚಮಚ ಬೆಳ್ಳುಳ್ಳಿ
* 1 ಚಮಚ ಶುಂಠಿ ಪೇಸ್ಟ್
* ಸ್ವಲ್ಪ ಕರಿಬೇವಿನ ಎಲೆ
* 1/4 ಚಮಚ ಅರಿಶಿಣ ಪುಡಿ
* 2 ಚಮಚ ಖಾರದ ಪುಡಿ
* 2 ಚಮಚ ಮೆಣಸಿನ ಪುಡಿ
* ರುಚಿಗೆತಕ್ಕ ಉಪ್ಪು
ತಯಾರಿಸುವ ವಿಧಾನ:
1. ಚಿಕನ್ ಅನ್ನು ಸಾಧಾರಣ ತುಂಡುಗಳಾಗಿ ಕತ್ತರಿಸಿ ಚೆನ್ನಾಗಿ ತೊಳೆಯಬೇಕು.
2. ಈರುಳ್ಳಿಯನ್ನು ಉದ್ದುದ್ದವಾಗಿ, ಟೊಮೆಟೊವನ್ನು ಸಣ್ಣದಾಗಿ ಕತ್ತರಿಸಿಕೊಂಡಿರಬೇಕು.
3. ನಂತರ ಒಂದು ಪಾತ್ರೆಗೆ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಈರುಳ್ಳಿ, ಕರಿಬೇವಿನ ಎಲೆ, ಬೆಳ್ಳುಳ್ಳಿ - ಶುಂಠಿ ಪೇಸ್ಟ್ ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಟೊಮೆಟೊ, ಅರಿಶಿಣ ಮತ್ತು ಖಾರದ ಪುಡಿ, ರುಚಿಗೆ ತಕ್ಕ ಉಪ್ಪು ಹಾಕಿ ಟೊಮೆಟೊ ಮೆತ್ತಗಾಗುವವರೆಗೆ ಸೌಟ್ ನಿಂದ ಆಡಿಸುತ್ತಾ ಇರಬೇಕು.
4. ನಂತರ ಚಿಕನ್ ಹಾಕಿ 1/4 ಗ್ಲಾಸ್ ನೀರು ಸೇರಿಸಿ ಮಿಶ್ರ ಮಾಡಿ 10-15 ನಿಮಿಷ ಬೇಯಿಸಬೇಕು, ಹೀಗೆ ಬೇಯಿಸುವಾಗ ಸೌಟ್ ನಿಂದ ಆಗಾಗ ಆಡಿಸುತ್ತಾ ಇರಬೇಕು.
5. ಸಂಪೂರ್ಣ ಬೆಂದ ಮೇಲೆ ಉಪ್ಪು ನೋಡಿ ಉರಿಯಿಂದ ಇಳಿಸಿದರೆ ರುಚಿಕರವಾದ ಚಿಕನ್ ಫ್ರೈ ರೆಡಿ. ಇದನ್ನು ಬೇಕಾದರೆ ಕತ್ತರಿಸಿದ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಬಹುದು.



Click it and Unblock the Notifications
