Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಈ ವೀಕೆಂಡ್ ಸ್ಪೆಷೆಲ್ -ಚಿಕನ್ ಗೀ ರೋಸ್ಟ್

ಬೇಕಾಗುವ ಸಾಮಗ್ರಿಗಳು:
1. ಬೋನ್ ಲೆಸ್ ಚಿಕನ್ ಅರ್ಧ ಕೆಜಿ
2. ಒಣ ಕೆಂಪು ಮೆಣಸು 15-20 (ಖಾರ ಬೇಕಿದ್ದರೆ ಇನ್ನೊಂದು ನಾಲ್ಕು ಮೆಣಸು ಹಾಕಬಹುದು)
3. ಕರಿಮೆಣಸಿನ ಪುಡಿ ಅರ್ಧಚಮಚ
4. ಅರಶಿಣ ಪುಡಿ ಅರ್ಧ ಚಮಚ
5. ಬೆಳ್ಳುಳ್ಳಿ 2 ಎಸಳು ಮತ್ತು ಸ್ವಲ್ಪ ಕರಿಬೇವಿನ ಎಲೆ
6. ಚಿಕ್ಕ ಶುಂಠಿ ತುಂಡು
7. ರುಚಿಗೆ ತಕ್ಕ ಉಪ್ಪು
8. ಮೊಸರು ಅರ್ಧ ಕಪ್
9. ಒಂದು ನಿಂಬೆ ಗಾತ್ರದ ಹುಣಸೆ ಹಣ್ಣು
10. ಶುದ್ಧವಾದ ತುಪ್ಪ 200ಮಿಲೀ
ತಯಾರಿಸುವ ವಿಧಾನ:
1. ಹುಣಸೆ ಹಣ್ಣಿನ ರಸ ಮಾಡಿ ಅದರಲ್ಲಿ ಒಣ ಕೆಂಪು ಮೆಣಸನ್ನು ಒಂದು ರಾತ್ರಿ ನೆನೆಹಾಕಬೇಕು.
2. ನಂತರ ಹುಣಸೆ ಹಣ್ಣಿನ ಹಾಕಿದ ಒಣ ಕೆಂಪು ಮೆಣಸು, ಶುಂಠಿ, ಬೆಳ್ಳುಳ್ಳಿ, ಸ್ವಲ್ಪ ಕರಿಮೆಣಸು ಹಾಕಿ ಚೆನ್ನಾಗಿ ಪೇಸ್ಟ್ ಮಾಡಬೇಕು.
3. ನಂತರ 200 ಮಿಲೀ ತುಪ್ಪ ಹಾಕಿ ತುಪ್ಪ ಬಿಸಿಯಾದಾಗ ಸ್ವಲ್ಪ ಕರಿಬೇವಿನ ಎಲೆ ಮತ್ತು ಈ ಮೆಣಸಿನ ಪೇಸ್ಟ್ ಹಾಕಿ ಚೆನ್ನಾಗಿ ಹುರಿಯಬೇಕು.
4. ತುಪ್ಪ ಮಿಶ್ರಣದ ಮೇಲ್ಭಾಗದಲ್ಲಿ ತೇಲುವಂತೆ ಇರಬೇಕು. ನಂತರ ಅದಕ್ಕೆ ಚಿಕನ್ ಮತ್ತು ರುಚಿಗೆ ತಕ್ಕ ಉಪ್ಪು ಮತ್ತು ಸ್ವಲ್ಪ ಮೊಸರು ಹಾಕಿ ಬೇಯಿಸಬೇಕು. ಆಗಾಗ ಸೌಟ್ ನಿಂದ ಚಿಕನ್ ಅನ್ನು ತಿರುಗಿಸುತ್ತಾ ಇರಬೇಕು, ಮಿಶ್ರಣ ತುಂಬಾ ಗಟ್ಟಿಯಾಗಿದ್ದರೆ ಇನ್ನೂ ಸ್ವಲ್ಪ ಮೊಸರು ಹಾಕಿ ಚೆನ್ನಾಗಿ ಮಿಶ್ರಮಾಡಿ ಚಿಕನ್ ಬೇಯಿಸಬೇಕು. ಚಿಕನ್ ಬೆಂದ ತಕ್ಷಣ ಉರಿಯಿಂದ ತೆಗೆಯಬೇಕು. ಈ ಚಿಕನ್ ಗೀ ರೋಸ್ಟ್ ಡ್ರೈ ಇರಬೇಕು.
ಇದನ್ನು ಚಪಾತಿ ಜೊತೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.



Click it and Unblock the Notifications
