Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಪೆಷಾವರಿ ಚಿಕನ್ -ಹೈದ್ರಾಬಾದ್ ಸ್ಪೆಷಲ್
ಈ ಪೆಷಾವರಿ ಚಿಕನ್ ಹೈದ್ರಾಬಾದ್ ಶೈಲಿಯ ಚಿಕನ್ ಅಡುಗೆಯಾಗಿದ್ದು, ಈ ಚಿಕನ್ ಅಡುಗೆಯ ಘಮ್ಮೆನ್ನುವ ವಾಸನೆ ಮತ್ತು ರುಚಿ ಚಿಕನ್ ಪ್ರಿಯರ ಬಾಯಲ್ಲಿ ನೀರೂರುವಂತೆ ಮಾಡುವುದು.
ಈ ಚಿಕನ್ ಅಡುಗೆ ಮಾಡುವ ವಿಧಾನ ಸರಳವಾಗಿದ್ದು, ರೆಸಿಪಿ ನೋಡಿ ಇಲ್ಲಿದೆ:

ಬೇಕಾಗುವ ಸಾಮಾಗ್ರಿಗಳು
ಚಿಕನ್ 1 ಕೆಜಿ
ಆಲೂಗಡ್ಡೆ2
ಟೊಮೆಟೊ 2
ಮೊಸರು ಅರ್ಧ ಕಪ್
ಕರಿ ಮೆಣಸಿನ ಪುಡಿ 2 ಚಮಚ
ಅರಿಶಿಣ ಪುಡಿ 1 ಚಮಚ
ಗರಂ ಮಸಾಲ ಪುಡಿ1 ಚಮಚ
ಶುಂಠಿ, ಬೆಳ್ಳುಳ್ಳಿ ಪೇಸ್ಟ್ 2 ಚಮಚ
ಹಸಿ ಮೆಣಸಿನಕಾಯಿ 2
ಚಿಟಿಕೆಯಷ್ಟು ಕೇಸರಿ
ರುಚಿಗೆ ತಕ್ಕ ಉಪ್ಪು
ಎಣ್ಣೆ 2 ಚಮಚ
ನೀರು 1 ಕಪ್
ತಯಾರಿಸುವ ವಿಧಾನ
* ಚಿಕನ್ ತುಂಡುಗಳನ್ನು ಚೆನ್ನಾಗಿ ತೊಳೆದು ಒಂದು ಬಟ್ಟಲಿನಲ್ಲಿ ಹಾಕಿ, ಆ ಬಟ್ಟಲಿಗೆ ಮೊಸರು, ಕೇಸರಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ರುಚಿಗೆ ತಕ್ಕ ಉಪ್ಪು ಹಾಕಿ ಮಿಕ್ಸ್ ಮಾಡಿ ಒಂದು ಗಂಟೆ ಕಾಲ ಇಡಿ.
* ನಂತರ ಆಲೂಗಡ್ಡೆ ಸಿಪ್ಪೆ ಸುಲಿದು ಚಿಕ್ಕದಾಗಿ ಕತ್ತರಿಸಿ.
* ಈಗ ಸಾರು ಪಾತ್ರೆಗೆ ಎಣ್ಣೆ ಹಾಕಿ ಬಿಸಿ ಮಾಡಿ, ಎಣ್ಣೆ ಬಿಸಿಯಾದಾಗ ಆಲೂಗಡ್ಡೆ ಹಾಕಿ 5 ನಿಮಿಷ ಫ್ರೈ ಮಾಡಿ. ಈಗ ಟೊಮೆಟೊ, ಕರಿ ಮೆಣಸಿನ ಪುಡಿ, ಅರಿಶಿಣ ಪುಡಿ, ಹಸಿ ಮೆಣಸಿನಕಾಯಿ ಹಾಕಿ 3-4 ನಿಮಿಷ ಫ್ರೈ ಮಾಡಿ, ಈಗ ಮಿಕ್ಸ್ ಮಾಡಿಟ್ಟ ಚಿಕನ್ ಸೇರಿಸಿ, ಬೇಕಿದ್ದರೆ ಸ್ವಲ್ಪ ಉಪ್ಪು ಹಾಕಿ 3-4 ನಿಮಿಷ ಸೌಟ್ ನಿಂದ ಆಡಿಸುತ್ತಾ ಫ್ರೈ ಮಾಡಿ , ಒಂದು ಕಪ್ ನೀರು ಹಾಕಿ ಕಡಿಮೆ ಉರಿಯಲ್ಲಿ ಅರ್ಧ ಗಂಟೆ ಬೇಯಿಸಿ.
* ಚಿಕನ್ ಬೆಂದ ನಂತರ ಗರಂ ಮಸಾಲ ಹಾಕಿ ಮಿಕ್ಸ್ ಮಾಡಿ ಮತ್ತೆ 5 ನಿಮಿಷ ಬೇಯಿಸಿ, ಉರಿಯಿಂದ ಇಳಿಸಿ.
ರೆಡಿಯಾದ ಪೆಷಾವರಿ ಚಿಕನ್ ಅನ್ನು ಅನ್ನದ ಜೊತೆ ತಿನ್ನಲು ರುಚಿಕರವಾಗಿರುತ್ತದೆ.



Click it and Unblock the Notifications
