Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ರುಚಿಕರವಾದ ಚಿಕನ್ 65 ರೆಸಿಪಿ

ಬೇಕಾಗುವ ಸಾಮಗ್ರಿಗಳು:
* ಒಂದು ಕೆಜಿ ಚಿಕನ್ (ಸಾಧರಣ ಗಾತ್ರದಲ್ಲಿ ಕತ್ತರಿಸಿದ್ದು)
* 3-4 ಚಮಚ ಖಾರದ ಪುಡಿ,
* 3 ಚಮಚ ಗರಂ ಮಸಾಲಾ ಪುಡಿ
* 2 ದೊಡ್ಡ ಈರುಳ್ಳಿ ಅಥವಾ ಸಾಧಾರಣ ಗಾತ್ರದ 3 ಈರುಳ್ಳಿ
* 2 ಚಮಚ ಶುಂಠಿ ಪೇಸ್ಟ್
* 2 ಚಮಚ ಬೆಳ್ಳುಳ್ಳಿ ಪೇಸ್ಟ್
* 3 ಹಸಿ ಮೆಣಸಿನಕಾಯಿ
* 2 ಟೊಮೆಟೊ
* ಎಣ್ಣೆ
* ರುಚಿಗೆ ತಕ್ಕ ಉಪ್ಪು
* ಕರಿಬೇವಿನ ಎಲೆ
ತಯಾರಿಸುವ ವಿಧಾನ:
1. ಚಿಕನ್ ಅನ್ನು ತೊಳೆದು . ಕತ್ತರಿಸಿದ ಈರುಳ್ಳಿ (ಅರ್ಧದಷ್ಟು) ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಬೇಯಿಸಬೇಕು. ತುಂಬಾ ನೀರು ಹಾಕಬೇಡಿ. ಚಿಕನ್ ಬೆಂದಾಗ ನೀರಿನಂಶವಿರಬಾರದು, ಆದ್ದರಿಂದ ಬೇಯಲು ಅವಶ್ಯಕವಾದ ನೀರು ಮಾತ್ರ ಹಾಕಬೇಕು.
2. ಈಗ ಮತ್ತೊಂದು ಪಾತ್ರೆಯನ್ನು ಬಿಸಿ ಮಾಡಿ ನಂತರ ಎಣ್ಣೆ ಹಾಕಿ ಎಣ್ಣೆ ಬಿಸಿಯಾದಾಗ ಅದಕ್ಕೆ ಕರಿಬೇವು, ಮತ್ತು ಕತ್ತರಿಸಿದ ಉಳಿದ ಅರ್ಧ ಈರುಳ್ಳಿ ಹಾಕಿ, ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಶುಂಠಿ, ಬೆಳ್ಳುಳ್ಳಿ ಪೇಸ್ಟ್ ಹಾಕಬೇಕು.
3.ಈಗ ಕತ್ತರಿಸಿದ ಈರುಳ್ಳಿ, ಟೊಮೆಟೊ, ಹಸಿಮೆಣಸಿನಕಾಯಿ, ಖಾರದಪುಡಿ, ಅರಿಶಿನಪುಡಿ, ಗರಂ ಮಸಾಲದ ಪುಡಿ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ,ಮಿಶ್ರ ಮಾಡಿ 5 ನಿಮಿಷ ಬೇಯಿಸಬೇಕು. ನಂತರ ಈ ಮಿಶ್ರಣಕ್ಕೆ ಬೇಯಿಸಿದ ಚಿಕನ್ ಹಾಕಿ ಮಿಶ್ರ ಮಾಡಿ ಮತ್ತೆ 5 ನಿಮಿಷ ಬೇಯಿಸಬೇಕು. ಈಗ ತಯಾರಾಗಿರುವ ಚಿಕನ್ 65ಗೆ ಬೇಕಿದ್ದರೆ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಬಹುದು.
ಇದನ್ನು ಅನ್ನ, ರೊಟ್ಟಿ, ಚಪಾತಿ ಜೊತೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.



Click it and Unblock the Notifications
