Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಎಗ್ ಬುರ್ಜಿ ಈ ರೀತಿ ಟ್ರೈ ಮಾಡಿದ್ದೀರಾ?
ಎಗ್ ಬುರ್ಜಿಯನ್ನು ಅನೇಕ ರೀತಿಯಲ್ಲಿ ತಯಾರಿಸಬಹುದು. ಎಗ್ ಬುರ್ಜಿಯನ್ನು ಬರೀ ಮೊಟ್ಟೆಗೆ ಖಾರ ಹಾಗೂ ಉಪ್ಪು ಸೇರಿಸಿ ತಯಾರಿಸುವ ಬದಲು ಈ ರೀತಿಯಲ್ಲಿ ತಯಾರಿಸಿ.
ಈ ಎಗ್ ಬುರ್ಜಿ ಮಾಮೂಲಿ ಬುರ್ಜಿಗಿಂತ ತುಂಬಾ ರುಚಿಕರವಾಗಿರುತ್ತದೆ. ಇದನ್ನು ಸುಲಭವಾಗಿ ತಯಾರಿಸಬಹುದಾಗಿದ್ದು ರೆಸಿಪಿ ನೋಡಿ ಇಲ್ಲಿದೆ.

ಬೇಕಾಗುವ ಸಾಮಾಗ್ರಿಗಳು:
ಮೊಟ್ಟೆ 8
ಮೆಂತೆ 1 ಚಮಚ
ಈರುಳ್ಳಿ 2-3(ಚಿಕ್ಕದಾಗಿ ಕತ್ತರಿಸಿದ್ದು)
ಕರಿಬೇವಿನ ಎಲೆ ಸ್ವಲ್ಪ
ಟೊಮೆಟೊ 2 (ಕತ್ತರಿಸಿದ್ದು)
ಹಸಿಮೆಣಸಿನ ಕಾಯಿ 1 (ಚಿಕ್ಕದಾಗಿ ಕತ್ತರಿಸಿದ್ದು)
ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್ ಒಂದೊಂದು ಚಮಚ
ಅರಿಶಿಣ ಪುಡಿ 1 ಚಮಚ
ಕೆಂಪು ಮೆಣಸಿನ ಪುಡಿ 1 ಚಮಚ
ನಿಂಬೆ ರಸ ಅರ್ಧ ಚಮಚ
ಕರಿಮೆಣಸಿನ ಪುಡಿ 1 ಚಮಚ
ಎಣ್ಣೆ
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಮೊಟ್ಟೆಗಳನ್ನು ಒಡೆದು ಒಂದು ಪಾತ್ರೆಯಲ್ಲಿ ಹಾಕಿ ಚೆನ್ನಾಗಿ ಕದಡಬೇಕು.
2. ನಂತರ ಪಾತ್ರೆಯನ್ನು ಉರಿಯಲ್ಲಿಟ್ಟು ಇಟ್ಟು ಅದರಲ್ಲಿ ಎಣ್ಣೆ ಹಾಕಿ ಎಣ್ಣೆ ಬಿಸಿಯಾದಾಗ ಮೆಂತೆ, ಕರಿಬೇವಿನ ಎಲೆ ಹಾಕಿ ನಂತರ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ನಂತರ ಟೊಮಟೊ ಸೇರಿಸಿ ಮೆತ್ತಗಾಗುವವರೆಗೆ ಬಿಸಿ ಮಾಡಿ, ಅದಕ್ಕೆ ಅರಿಶಿಣ ಪುಡಿ, ಖಾರದ ಪುಡಿ, ಹಸಿ ಮೆಣಸಿನ ಕಾಯಿ, ಕರಿಮೆಣಸಿನ ಪುಡಿ, ಬೆಳ್ಳುಳ್ಳಿ ಪೇಸ್ಟ್, ಶುಂಠಿ ಪೇಸ್ಟ್, ಉಪ್ಪು ಹಾಕಿ ಈಗ ಚೆನ್ನಾಗಿ ಕದಡಿದ ಮೊಟ್ಟೆಯನ್ನು ಹಾಕಿ ಸೌಟ್ ನಿಂದ ಆಡಿಸುತ್ತಾ ಇರಬೇಕು. ಆಗ ಮೊಟ್ಟೆ ಬೆಂದು ಪುಡಿ-ಪುಡಿ ರೀತಿಯಲ್ಲಿ ಆಗುವುದು. ನಂತರ ಉರಿಯಿಂದ ತೆಗೆದು ಸ್ವಲ್ಪ ನಿಂಬೆ ರಸ ಹಿಂಡಿದರೆ ರುಚಿಕರವಾದ ಮೊಟ್ಟೆ ಬುರ್ಜಿ ರೆಡಿ.



Click it and Unblock the Notifications
