Latest Updates
-
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್
ಟ್ಯಾಂಗ್ರಿ ಗ್ರಿಲ್ಡ್ ಚಿಕನ್ ರೆಸಿಪಿ
ಗ್ರಿಲ್ಡ್ ಚಿಕನ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಹಾಗೂ ತಿನ್ನಲು ಸ್ವಾದಿಷ್ಟವಾಗಿರುತ್ತದೆ. ಈ ಗ್ರಿಲ್ಡ್ ಚಿಕನ್ ಅನ್ನು ವಿಭಿನ್ನ ರುಚಿಯಲ್ಲಿ ತಯಾರಿಸಲಾಗುವುದು. ಇಲ್ಲಿ ನಾವು ಮನೆಯಲ್ಲಿಯೇ ಮಾಡಬಹುದಾದ ಟ್ಯಾಂಗ್ರಿ ಗ್ರಿಲ್ಡ್ ಚಿಕನ್ ನ ರೆಸಿಪಿ ನೀಡಿದ್ದೇವೆ.
ಈ ರೆಸಿಪಿಯಲ್ಲಿ ಚಿಕನ್ ಅನ್ನು ಮೊಸರಿನಲ್ಲಿ ಮಿಶ್ರಣ ಮಾಡಿ ತಯಾರಿಸುವುದರಿಂದ ಚಿಕನ್ ನ ರುಚಿ ಹೆಚ್ಚುವುದು.

ಬೇಕಾಗುವ ಸಾಮಾಗ್ರಿಗಳು:
ಚಿಕನ್ ನ ತೊಡೆ ಪೀಸ್ 4
ಮೊಸರು 1 ಕಪ್
ಶುಂಠಿ ಪೇಸ್ಟ್ 1 ಚಮಚ
ಬೆಳ್ಳುಳ್ಳಿ ಪೇಸ್ಟ್ 1 ಚಮಚ
ನಿಂಬೆ ರಸ 1 ಚಮಚ
ಗರಂ ಮಸಾಲ 1 ಚಮಚ
ಖಾರದ ಪುಡಿ (ಖಾರಕ್ಕೆ ತಕ್ಕಷ್ಟು)
ಗರಂ ಮಸಾಲ 1 ಚಮಚ
ಕರಿಮೆಣಸಿನ ಪುಡಿ 1 ಚಮಚ
ಚಾಟ್ ಮಸಾಲ 1 ಚಮಚ
ರುಚಿಗೆ ತಕ್ಕ ಉಪ್ಪು
ಸ್ವಲ್ಪ ಕೊತ್ತಂಬರಿ ಸೊಪ್ಪು
ತಯಾರಿಸುವ ವಿಧಾನ:
1. ಚಿಕನ್ ತುಂಡುಗಳನ್ನು ಸ್ವಲ್ಪ ದಪ್ಪದ ತುಂಡುಗಳಾಗಿ ಕತ್ತರಿಸಿ ಶುಚಿ ಮಾಡಿಡಿ.
2. ಮೊಸರಿಗೆ ಖಾರದ ಪುಡಿ, ಗರಂ ಮಸಾಲ, ಬೆಳ್ಳುಳ್ಳಿ ಮತ್ತು ಶುಂಠಿ ಪೇಸ್ಟ್, ಕರಿ ಮೆಣಸಿನ ಪುಡಿ ಹಾಕಿ ಚೆನ್ನಾಗಿ ಕಲೆಸಿ. ನಂತರ ಚಿಕನ್ ತುಂಡುಗಳನ್ನು ಇದರಲ್ಲಿ ಹಾಕಿ ಅರ್ಧ ಗಂಟೆ ಕಾಲ ಇಡಬೇಕು.
3. ನಂತರ ಚಿಕನ್ ಅನ್ನು ಗ್ರಿಲ್ಡ್ ಮಾಡಬೇಕು.
4. ಈಗ ಗ್ರಿಲ್ಡ್ ಮಾಡಿದ ಚಿಕನ್ ಗೆ ಚಾಟ್ ಮಸಾಲ ಉದುರಿಸಿ, ನಿಂಬೆ ರಸ ಸೇರಿಸಿ, ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಕರವಾದ ಟ್ಯಾಂಗ್ರಿ ಗ್ರಿಲ್ಡ್ ಚಿಕನ್ ರೆಡಿ.



Click it and Unblock the Notifications
