Latest Updates
-
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ!
ದಕ್ಷಿಣಕನ್ನಡ ಶೈಲಿಯ ತೊಂಡೆಕಾಯಿ ಪಲ್ಯ
ಅರ್ಚನಾ ಹೆಬ್ಬಾರ್, ಬೆಂಗಳೂರು.
ಬೇಕಾಗುವ ಸಾಮಗ್ರಿಗಳು:
ತೊಂಡೆಕಾಯಿ : ಅರ್ಧ ಕಿಲೋ
ತೆಂಗಿನಕಾಯಿ : ಅರ್ಧ
ಗೋಡಂಬಿ :ಎರಡು ಹಿಡಿ
ಬೆಲ್ಲ : ಒಂದು ಸಣ್ಣ ಚೂರು
ಉಪ್ಪು:ರುಚಿಗೆ
ಸಾಸಿವೆ : ಒಂದು ಚಮಚ
ಕೆಂಪು ಮೆಣಸು : ನಾಲ್ಕು
ಒಗ್ಗರಣೆಗೆ :ಎಣ್ಣೆ, ಉದ್ದು,ಅರಿಸಿನ,ಸಾಸಿವೆ ,ಜೀರಿಗೆ ತಲಾ ಒಂದು ಚಮಚ
ವಿಧಾನ :
*ಒಂದು ಸಣ್ಣ ಕಡಾಯಿಯಲ್ಲಿ ಎಣ್ಣೆ,ಮೆಣಸು, ಉದ್ದು,ಅರಿಸಿನ,ಸಾಸಿವೆ ,ಜೀರಿಗೆ ಇವುಗಳನ್ನು ಹಾಕಿ ,ಒಲೆಯ ಮೇಲೆ ಇಡಿ.ಸಾಸಿವೆ ಚಟ ಪಟ ಅನ್ನುತಿದ್ದಂತೆ ಒಲೆ ಆರಿಸಿ.
*ತೆಂಗಿನಕಾಯಿ,ಮೆಣಸು,ಸಾಸಿವೆ ಇವನ್ನು ಒಟ್ಟಿಗೆ ತರಿ ತರಿಯಾಗಿ ರುಬ್ಬಿ.
*ತೊಂಡೆಕಾಯಿ ಹಾಗೂ ಗೋಡಂಬಿಯನ್ನು ಕುಕ್ಕರಿನಲ್ಲಿ 3 ಸೀಟಿ ಬರುವ ತನಕ ಬೇಯಿಸಿ.
*ಈಗ ಒಲೆ ಉರಿಸಿ, ಈಗಾಗಲೇ ಮಾಡಿಟ್ಟ ಒಗ್ಗರಣೆ ಯ ಪಾತ್ರೆಗೆ ತೆಂಗಿನಕಾಯಿಯ ಮಿಶ್ರಣ ಹಾಗೂ ಬೇಯಿಸಿದ ತೊಂಡೆಕಾಯಿ,
ಗೋಡಂಬಿಯನ್ನು ಸೇರಿಸಿ.
*ಮಂದ ಉರಿಯಲ್ಲಿ ಸ್ವಲ್ಪ ಹೊತ್ತು ಹಾಗೆ ಬೇಯಿಸಿ.
*ಈಗ ಬೆಲ್ಲ ಹಾಗೂ ಉಪ್ಪು ಸೇರಿಸಿ.ಮತ್ತೂ ಎರಡು ನಿಮಿಷ ಬೇಯಿಸಿ.
ಘಮಘಮಿಸುವ ಪಲ್ಯ ತಯಾರು!! ಇದು ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಖಾದ್ಯ.



Click it and Unblock the Notifications
