Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಚೆನ್ನಾ ಮಸಾಲ ಡ್ರೈ ರೆಸಿಪಿ
ಚೆನ್ನಾ ಮಸಾಲವನ್ನು ಸಾರು, ಗ್ರೇವಿ, ಡ್ರೈ ಇವುಗಳನ್ನು ನಿಮಗೆ ಹೇಗೆ ಬೇಕೋ ಹಾಗೆ ತಯಾರಿಸಬಹುದು. ಗ್ರೇವಿಯಾದರೆ ರೊಟ್ಟಿ, ಚಪಾತಿ ಜೊತೆ ತಿನ್ನಲು ರುಚಿಕರವಾಗಿರುತ್ತದೆ. ಸಾರು ಮತ್ತು ಡ್ರೈ ಅನ್ನದ ಜೊತೆ ತಿನ್ನಲು ರುಚಿಕರವಾಗಿರುತ್ತದೆ. ಚೆನ್ನಾ ಮಸಾಲ ಡ್ರೈಯನ್ನು ಸಂಜೆ ಸ್ನ್ಯಾಕ್ಸ್ ಆಗಿಯೂ ತಿನ್ನಬಹುದು.
ಇಲ್ಲಿ ನಾವು ಚೆನ್ನಾ ಮಸಾಲ ಡ್ರೈ ತಯಾರಿಸುವ ವಿಧಾನದ ಬಗ್ಗೆ ಹೇಳಿದ್ದೇವೆ ನೋಡಿ:

ಬೇಕಾಗುವ ಸಾಮಾಗ್ರಿಗಳು
ಚೆನ್ನಾ 2 ಕಪ್
ಈರುಳ್ಳಿ 2
ಟೊಮೆಟೊ 2
ಹಸಿಮೆಣಸಿನಕಾಯಿ 2-3
ಒಂದು ಇಂಚಿನಷ್ಟು ದೊಡ್ಡದಿರುವ ಶುಂಠಿ
ಬೆಳ್ಳುಳ್ಳಿ ಎಸಳು 7-8
ಸ್ವಲ್ಪ ಅರಿಶಿಣ ಪುಡಿ
ಖಾರದ ಪುಡಿ(ಖಾರಕ್ಕೆ ತಕ್ಕಷ್ಟು)
ಕೊತ್ತಂಬರಿ ಪುಡಿ ಅರ್ಧ ಚಮಚ
ಗರಂ ಮಸಾಲ ಅರ್ಧ ಚಮಚ
ಚೆನ್ನಾ ಮಸಾಲ ಅರ್ಧ ಚಮಚ
ಜೀರಿಗೆ 1 ಚಮಚ
ಸ್ವಲ್ಪ ಕರಿಬೇವಿನ ಎಲೆ
ಎಣ್ಣೆ
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
* ಚೆನ್ನಾವನ್ನು ಒಂದು ಗಂಟೆಗಳ ಕಾಲ ನೀರಿನಲ್ಲಿ ನೆನೆ ಹಾಕಬೇಕು. ಚೆನ್ನಾವನ್ನು ತೊಳೆದು ಫ್ರೆಶರ್ ಕುಕ್ಕರ್ ನಲ್ಲಿ ಹಾಕಿ ಸ್ವಲ್ಪ ನೀರು ಹಾಗೂ ಉಪ್ಪು ಹಾಕಿ 2-3 ವಿಷಲ್ ಬರುವವರೆಗೆ ಬೇಯಿಸಿ. ಕುಕ್ಕರ್ ತಣ್ಣಗಾದ ಮೇಲೆ ಚೆನ್ನಾವನ್ನು ತೆಗೆದು ಒಂದು ಪಾತ್ರೆಯಲ್ಲಿ ಹಾಕಿಡಿ.
* ಈರುಳ್ಳಿಯನ್ನು ಕತ್ತರಿಸಿ.
* ಈಗ ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಕಾಯಿಸಿ. ಎಣ್ಣೆ ಬಿಸಿಯಾದಾಗ ಜೀರಿಗೆ ಹಾಗೂ ಕರಿಬೇವಿನ ಎಲೆ ಹಾಕಿ. ಜೀರಿಗೆ ಶಬ್ದ ಮಾಡುವಾಗ ಕತ್ತರಿಸಿದ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಹಸಿ ಮೆಣಸಿನಕಾಯಿ ಹಾಕಿ, ಈಗ ಶುಂಠಿ ಮತ್ತು ಬೆಳ್ಳುಳ್ಳಿಯನ್ನು ಜಜ್ಜಿ ಹಾಕಿ.
*ನಂತರ ಟೊಮೆಟೊ ಹಾಕಿ ಅರಿಶಿಣ ಪುಡಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ 2 ನಿಮಿಷ ಸೌಟ್ ನಿಂದ ಉರಿದು, ಈಗ ಚೆನ್ನಾವನ್ನು ಹಾಕಿ, ಖಾರದ ಪುಡಿ, ಗರಂ ಮಸಾಲ, ಚೆನ್ನಾ ಮಸಾಲ, ಕೊತ್ತಂಬರಿ ಪುಡಿ ಹಾಕಿ ಮಿಕ್ಸ್ ಮಾಡಿ, ಸೌಟ್ ನಿಂದ ಆಡಿಸುತ್ತಾ 2-3 ನಿಮಿಷ ಹುರಿಯಿರಿ.
* ನಂತರ ಉಪ್ಪು ಸರಿಯಾಗಿದೆಯೇ ಎಂದು ನೋಡಿ ಉರಿಯಿಂದ ಇಳಿಸಿದರೆ ಚೆನ್ನಾ ಮಸಾಲ ಡ್ರೈ ರೆಡಿ.



Click it and Unblock the Notifications
