Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಟು ಇನ್ ಒನ್ ರೆಸಿಪಿ- ಕ್ಯಾಪ್ಸಿಕಂ ಬುರ್ಜಿ
ಈ ಕ್ಯಾಪ್ಸಿಕಂ ಬುರ್ಜಿಯನ್ನು ತಯಾರಿಸುವುದು ತುಂಬಾ ಸುಲಭ. ಈ ಬುರ್ಜಿ ಚಪಾತಿ ಅಥವಾ ಅನ್ನದ ಜೊತೆ ತಿನ್ನಲು ತುಂಬಾ ರುಚಿಯಾಗಿರುತ್ತದೆ. ಇದರಿಂದ ಸ್ನ್ಯಾಕ್ಸ್ ಕೂಡ ತಯಾರಿಸಬಹುದು, ಹೇಗೆಂದರೆ ಈ ಬುರ್ಜಿ ತಯಾರಿಸಿ, ಚಪಾತಿ ಒಳಗೆ ತುಂಬಿ ರೋಲ್ ಮಾಡಿದರೆ ಸೂಪರ್ ಕ್ಯಾಪ್ಸಿಕಂ ರೋಲ್ ರೆಡಿ.
ಈ ಕ್ಯಾಪ್ಸಿಕಂ ಬುರ್ಜಿ ಸರಳ ರೆಸಿಪಿ ನೋಡಿ ಇಲ್ಲಿದೆ:

ಬೇಕಾಗುವ ಸಾಮಾಗ್ರಿಗಳು
ಕ್ಯಾಪ್ಸಿಕಂ2-3 (ಕತ್ತರಿಸಿ)
ಈರುಳ್ಳಿ1 (ಕತ್ತರಿಸಿ)
ಜೀರಿಗೆ ಅರ್ಧ ಚಮಚ
ಜೀರಿಗೆ ಪುಡಿ ಅರ್ಧ ಚಮಚ
ಖಾರದ ಪುಡಿ ಅರ್ಧ ಚಮಚ
ಕೊತ್ತಂಬರಿ ಪುಡಿ ಅರ್ಧ ಚಮಚ
ಕಡಲೆ ಹಿಟ್ಟು 1 ಚಮಚ
ಎಣ್ಣೆ 1 ಚಮಚ
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
* ಪ್ಯಾನ್ ಗೆ ಎಣ್ಣೆ ಹಾಕಿ ಉರಿ ಮೇಲೆ ಇಡಿ. ಎಣ್ಣೆ ಬಿಸಿಯಾದಾಗ ಜೀರಿಗೆ ಹಾಕಿ ನಂತರ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ.
* ನಂತರ ಕ್ಯಾಪ್ಸಿಕಂ, ಖಾರದ ಪುಡಿ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ರುಚಿಗೆ ತಕ್ಕ ಉಪ್ಪು ಹಾಕಿ ಸಾಧರಣ ಉರಿಯಲ್ಲಿ 2 ನಿಮಿಷ ಫ್ರೈ ಮಾಡಿ, ಹಾಗೇ ಬೇಯಲು ಬಿಟ್ಟು, ಮತ್ತೊಂದು ಕಪ್ ನಲ್ಲಿ ಸ್ವಲ್ಪ ನೀರು ಹಾಕಿ ಅದರಲ್ಲಿ ಕಡಲೆ ಹಿಟ್ಟು ಹಾಕಿ ಕಲೆಸಿ. ಪೇಸ್ಟ್ ಗಟ್ಟಿಯಾಗಿರಲಿ.
* ನಂತರ ಆ ಪೇಸ್ಟ್ ಅನ್ನು ಕ್ಯಾಪ್ಸಿಕಂ ಜೊತೆ ಹಾಕಿ ಮಿಕ್ಸ್ ಮಾಡಿ, ಕ್ಯಾಪ್ಸಿಕಂ ಬೇಯುವವರೆಗೆ ಫ್ರೈ ಮಾಡಿದರೆ ರುಚಿ-ರುಚಿಯಾದ ಕ್ಯಾಪ್ಸಿಕಂ ಬುರ್ಜಿ ರೆಡಿ.



Click it and Unblock the Notifications
