Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮಸಾಲೆ ಮಿರ್ಚಿ: ಸೈಡ್ ಡಿಶ್ ರೆಸಿಪಿ
ಬಜ್ಜಿ ಮೆಣಸಿನಿಂದ ಬಜ್ಜಿ ಮಾಡಿದರೆ ಮಾತ್ರವಲ್ಲ, ಸೈಡ್ ಡಿಶ್ ಮಾಡಿದರೂ ತುಂಬಾ ರುಚಿಕರವಾಗಿರುತ್ತದೆ. ಬಿಸಿ ಬಿಸಿ ಅನ್ನದ ಜೊತೆ ಕಲೆಸಿಕೊಂಡು ತಿನ್ನುತ್ತಿದ್ದರೆ ಎರಡು ತುತ್ತು ಅನ್ನ ಹೆಚ್ಚೇ ಹೊಟ್ಟೆಯನ್ನು ಸೇರುತ್ತದೆ. ಇದನ್ನು ಮಾಡುವ ವಿಧಾನ ತುಂಬಾ ಸರಳವಾಗಿದೆ.
ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ:

ಬೇಕಾಗುವ ಸಾಮಾಗ್ರಿಗಳು
ಬಜ್ಜಿ ಮೆಣಸು 5-6
ಅರಿಶಿಣ ಪುಡಿ 1 ಚಮಚ
ಖಾರದ ಪುಡಿ 1 ಚಮಚ
ಕೊತ್ತಂಬರಿ ಪುಡಿ ಒಂದೂವರೆ ಚಮಚ
ಹಸಿ ಮೆಣಸಿನಕಾಯಿ 2
ಒಣ ಮಾವಿನಕಾಯಿ 1 ಚಮಚ
ಸಾಸಿವೆ ಅರ್ಧ ಚಮಚ
ರುಚಿಗೆ ತಕ್ಕ ಉಪ್ಪು
ನಿಂಬೆ ರಸ 1 ಚಮಚ
ಎಣ್ಣೆ 2 ಚಮಚ
ತಯಾರಿಸುವ ವಿಧಾನ:
* ಬಜ್ಜಿ ಮೆಣಸನ್ನು ಉದ್ದುದ್ದವಾಗಿ ಕತ್ತರಿಸಿ.
* ಪ್ಯಾನ್ ನಲ್ಲಿ ಎಣ್ಣೆ ಹಾಕಿ ಬಿಸಿ ಮಾಡಿ ಅದರಲ್ಲಿ ಸಾಸಿವೆ ಹಾಕಿ, ಸಾಸಿವೆ ಚಟಪಟಾ ಶಬ್ದ ಮಾಡುವಾಗ ಹಸಿ ಮೆಣಸಿನಕಾಯಿ ಮತ್ತು ಬಜ್ಜಿ ಮೆಣಸಿನಕಾಯಿ ಹಾಕಿ, ರುಚಿಗೆ ತಕ್ಕ ಉಪ್ಪು ಮತ್ತು ಅರಿಶಿಣ ಪುಡಿ ಹಾಕಿ ಮೆಣಸಿನಕಾಯಿ ಬೆಂದು ಮೆತ್ತಗಾಗುವವರೆಗೆ ಫ್ರೈ ಮಾಡಿ.
* ನಂತರ ಖಾರದ ಪುಡಿ, ಕೊತ್ತಂಬರಿ ಪುಡಿ, ಒಣ ಮಾವಿನಕಾಯಿ ಚೂರು ಹಾಕಿ ಮಿಕ್ಸ್ ಮಾಡಿ, 3-4 ನಿಮಿಷ ಫ್ರೈ ಮಾಡಿ.
* ನಂತರ ನಿಂಬೆರಸ ಹಾಕಿ ಮಿಕ್ಸ್ ಮಾಡಿ ಉರಿಯಿಂದ ಇಳಿಸಿದದರೆ ಬಿಸಿ-ಬಿಸಿ ಅನ್ನದ ಜೊತೆ ಕಲೆಸಿಕೊಂಡು ತಿನ್ನಲು ಮಸಾಲೆ ಮಿರ್ಚಿ ರೆಡಿ.



Click it and Unblock the Notifications
