Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಪನ್ನೀರ್ ಟೊಮೆಟೊ ಗ್ರೇವಿ -ಸೈಡ್ ಡಿಶ್ ರೆಸಿಪಿ
ಈ ಟೊಮೆಟೊ ಪನ್ನೀರ್ ತುಂಬಾ ಸ್ವಾದಿಷ್ಟಕರವಾಗಿದ್ದು ಚಪಾತಿ, ಪರೋಟ, ಅನ್ನ ಇವುಗಳಿಗೆ ಸೈಡ್ ಡಿಶ್ ಆಗಿ ಬಳಸಬಹುದು. ಈ ಸೈಡ್ ಡಿಶ್ ಅನ್ನು ಮಾಡಲು ಕೂಡ ಹೆಚ್ಚಿನ ಶ್ರಮವೇನು ಪಡಬೇಕಾಗಿಲ್ಲ, ಟೊಮೆಟೊ ಗೊಜ್ಜಿನಷ್ಟೇ ಸುಲಭವಾಗಿ ಇದನ್ನೂ ಮಾಡಬಹುದು.
ಬನ್ನಿ ಈ ಸೈಡ್ ಡಿಶ್ ಮಾಡುವುದು ಹೇಗೆ ಎಂದು ನೋಡೋಣ:

ಬೇಕಾಗುವ ಸಾಮಾಗ್ರಿಗಳು
ಪನ್ನೀರ್ 250 ಗ್ರಾಂ
ಟೊಮೆಟೊ 3-4
ಈರುಳ್ಳಿ 2
ಅರಿಶಿಣ ಅರ್ಧ ಚಮಚ
ಖಾರದ ಪುಡಿ (ನಿಮ್ಮ ರುಚಿಗೆ ತಕ್ಕಷ್ಟು)
ಗರಂ ಮಸಾಲ ಅರ್ಧ ಚಮಚ
ಹಸಿ ಮೆಣಸಿನಕಾಯಿ 3
ಟೊಮೆಟೊ ಸಾಸ್ 1 ಚಮಚ
ಸ್ವಲ್ಪ ಕರಿಬೇವಿನ ಎಲೆ
ಜೀರಿಗೆ ಅರ್ಧ ಚಮಚ
ರುಚಿಗೆ ತಕ್ಕ ಉಪ್ಪು
ಎಣ್ಣೆ 2 ಚಮಚ
ತಯಾರಿಸುವ ವಿಧಾನ:
* ಪ್ಯಾನ್ ನಲ್ಲಿ ಎಣ್ಣೆ ಹಾಕಿ ಬಿಸಿ ಮಾಡಿ, ನಂತರ ಅದರಲ್ಲಿ ಪನ್ನೀರ್ ತುಂಡುಗಳನ್ನು ಹಾಕಿ 5-10 ನಿಮಿಷ ಫ್ರೈ ಮಾಡಬೇಕು. ನಂತರ ಪನ್ನೀರ್ ಅನ್ನು ತೆಗೆದು ಒಂದು ಬದಿಯಲ್ಲಿಡಿ.
* ಈರುಳ್ಳಿ ಮತ್ತು ಹಸಿ ಮೆಣಸಿನಕಾಯಿಯ ಪೇಸ್ಟ್ ಮಾಡಿ ಇಡಿ.
* ಟೊಮೆಟೊವನ್ನು ಪೇಸ್ಟ್ ಮಾಡಿ ಬದಿಯಲ್ಲಿಡಿ.
* ಈಗ ಅದೇ ಎಣ್ಣೆಗೆ ಜೀರಿಗೆ ಮತ್ತು ಕರಿಬೇವಿನ ಎಲೆ ಹಾಕಿ. ಈಗ ರುಬ್ಬಿದ ಈರುಳ್ಳಿ ಮತ್ತು ಹಸಿ ಮೆಣಸಿನಕಾಯಿಯ ಪೇಸ್ಟ್ ಹಾಕಿ 3-4 ನಿಮಿಷ ಫ್ರೈ ಮಾಡಿ. ಈಗ ಟೊಮೆಟೊ ಹಾಕಿ ಸಾಧಾರಣ ಉರಿಯಲ್ಲಿ ಮತ್ತೆ 5 ನಿಮಿಷ ಫ್ರೈ ಮಾಡಿ.
* ಈಗ ಅರಿಶಿಣ ಪುಡಿ, ರುಚಿಗೆ ತಕ್ಕ ಉಪ್ಪು ಹಾಕಿ ಮತ್ತೆ 5 ನಿಮಿಷ ಫ್ರೈ ಮಾಡಿ, ಖಾರದ ಪುಡಿ, ಗರಂ ಮಸಾಲ ಪುಡಿ, ಟೊಮೆಟೊ ಸಾಸ್ ಸೇರಿಸಿ 2-3 ನಿಮಿಷ ಫ್ರೈ ಮಾಡಿ, ನಂತರ ಫ್ರೈ ಮಾಡಿಟ್ಟ ಪನ್ನೀರ್ ಹಾಕಿ ಸೌಟ್ ನಿಂದ ಆಡಿಸುತ್ತಾ 5 ನಿಮಿಷ ಬೇಯಿಸಿದರೆ ಸವಿರುಚಿಯ ಟೊಮೆಟೊ ಪನ್ನೀರ್ ಗ್ರೇವಿ ರೆಡಿ.



Click it and Unblock the Notifications
