Latest Updates
-
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI!
ಸೋಯಾ ಬೀನ್ಸ್ ಪಲ್ಯದ ರೆಸಿಪಿ
ಸೋಯಾ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಸಾರು ಹಾಗೂ ಪಲ್ಯ ಮಾಡಬಹುದು. ಸಾರಿಗಿಂತ ಪಲ್ಯ ಹೆಚ್ಚು ರುಚಿಕರವಾಗಿರುತ್ತದೆ. ಇಲ್ಲಿ ನಾವು ಸೋಯಾ ಕಾಳಿನ ಪಲ್ಯದ ರೆಸಿಪಿ ನೀಡಿದ್ದೇವೆ. ಇದನ್ನು ಮಾಡುವ ವಿಧಾನ ಕೂಡ ಸರಳವಾಗಿದೆ.
ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ:

ಬೇಕಾಗುವ ಸಾಮಾಗ್ರಿಗಳು
ಸೋಯಾ 2 ಕಪ್
ತೆಂಗಿನ ತುರಿ ಅರ್ಧ ಕಪ್
ಈರುಳ್ಳಿ2
ಟೊಮೆಟೊ 2
ಸಾಸಿವೆ ಅರ್ಧ ಚಮಚ
ಜೀರಿಗೆ 1 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಗರಂ ಮಸಾಲ 1 ಚಮಚ
ಸ್ವಲ್ಪ ಕರಿ ಬೇವಿನ ಎಲೆ
ರುಚಿಗೆ ತಕ್ಕ ಉಪ್ಪು
1 ಚಮಚ ಎಣ್ಣೆ
ಸ್ವಲ್ಪ ಕೊತ್ತಂಬರಿ ಸೊಪ್ಪು
ಮಾಡುವ ವಿಧಾನ:
* ಸೋಯಾವನ್ನು 10 ನಿಮಿಷ ಬಿಸಿ ನೀರಿನಲ್ಲಿ ನೆನೆ ಹಾಕಿ.
* ನಂತರ ಪ್ಯಾನ್ ನಲ್ಲಿ ಎಣ್ಣೆ ಹಾಕಿ ಬಿಸಿ ಮಾಡಿ, ಸಾಸಿವೆ ಹಾಕಿ, ಸಾಸಿವೆ ಚಟಾಪಟಾ ಶಬ್ದ ಮಾಡುವಾಗ ಕರಿ ಬೇವಿನ ಎಲೆ ಜೀರಿಗೆ ಹಾಕಿ ನಂತರ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ, ನಂತರ ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಫ್ರೈ ಮಾಡಿ.
* ನಂತರ ನೆನೆ ಹಾಕಿದ ಸೋಯಾವನ್ನು ಹಾಕಿ, ಅರಿಶಿಣ ಪುಡಿ, ಖಾರದ ಪುಡಿ, ಗರಂ ಮಸಾಲ ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ನೀರು ಹಾಕಿ ಪಾತ್ರೆಯ ಬಾಯಿ ಮುಚ್ಚಿ ಬೇಯಿಸಿ. ಅಡುಗೆ ತಳ ಹಿಡಿಯದಿರಲು ಆಗಾಗ ಸೌಟ್ ನಿಂದ ಆಡಿಸುತ್ತಾ ಬೇಯಿಸಿ, ಬೇಯಲು ಇನ್ನು ಸ್ವಲ್ಪ ನೀರು ಬೇಕಿದ್ದರೆ ಹಾಕಿ, ಸೋಯಾ ಬೆಂದ ನಂತರ ತೆಂಗಿನ ತುರಿ ಹಾಕಿ ಮಿಕ್ಸ್ ಮಾಡಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಸೋಯಾ ಬೀನ್ಸ್ ಪಲ್ಯ ರೆಡಿ.



Click it and Unblock the Notifications
