Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಮೊಳಕೆ ಹುರುಳಿಕಾಳು ಮತ್ತು ದಂಟಿನಸೊಪ್ಪಿನ ಬಸ್ಸಾರು

ಬೇಕಾಗುವ ಸಾಮಾಗ್ರಿಗಳು:
ಮೊಳಕೆ ಹುರುಳಿಕಾಳು - ಒಂದು ಬಟ್ಟಲು
ಹಸಿರು / ಕೆಂಪು ದಂಟಿನಸೊಪ್ಪು
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಅಚ್ಚಖಾರದ ಪುಡಿ
ಸಾಂಬಾರ್/ಸಾರಿನ ಪುಡಿ - ಅರ್ಧ ಚಮಚ
ಕೊತ್ತಂಬರಿ ಸೊಪ್ಪು
ಕರಿಬೇವಿನ ಸೊಪ್ಪು
ಹಸಿಮೆಣಸಿನಕಾಯಿ
ಉಪ್ಪು
ಎಣ್ಣೆ
ತಯಾರಿಸುವ ವಿಧಾನ :
ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ. ಕುಕ್ಕರ್ ನಲ್ಲಿ ನೀರು ಹಾಕಿ, ಅದಕ್ಕೆ ಮೊಳಕೆ ಹುರುಳಿಕಾಳುಗಳನ್ನು ಹಾಕಿ ಚೆನ್ನಾಗಿ ಬೇಯಿಸಿ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ, ಕಾಳು ಬೇಯಲು ಬಿಡಿ. ಹುರುಳಿಕಾಳು ಬೇಯುವುದು ನಿಧಾನ. ಅದಕ್ಕೆ ಅದನ್ನು ಒಂದು ಕೂಗು ಕುಕ್ಕರ್ ನಲ್ಲಿ ಬೇಯಿಸಿಕೊಳ್ಳಿ, ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ ಜೊತೆಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ, ಸೊಪ್ಪು ಬೇಯುವವರೆಗೂ ಬೇಯಿಸಿ, ಕಾಳು ಕರಗದಂತೆ ಬೇಯಿಸಿಕೊಳ್ಳಿ. ನಂತರ ಹುರುಳಿಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು, ಸೊಪ್ಪು-ಕಾಳಿನ ಕಟ್ಟು ಮತ್ತು ಸೊಪ್ಪುಕಾಳನ್ನು ಬೇರೆಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಸಾರಿಗೆ ರುಬ್ಬಿಕೊಳ್ಳಲು :
ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಒಂದೆರಡು ನಿಮಿಷ ಹುರಿದುಕೊಂಡು, ಅದಕ್ಕೆ ಒಂದೆರಡು ಚಮಚ ಬೇಯಿಸಿದ ಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು, ಎರಡು ಚಮಚ ಕಾಯಿತುರಿ/ಕೊಬ್ರಿ, ಜೀರಿಗೆ, ಅಚ್ಚಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತಂಬರಿ ಸೊಪ್ಪು ಎಲ್ಲವನ್ನೂ ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ.
ಸಾರಿನ ಒಗ್ಗರಣೆಗೆ :
ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು ಮತ್ತು ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಅದರ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸೊಪ್ಪುಕಾಳಿನಕಟ್ಟನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಹುರುಳಿಕಾಳುಸೊಪ್ಪಿನ ಬಸ್ಸಾರು ತಯಾರು. [ಅಡುಗೆ ಸವಿರುಚಿ]



Click it and Unblock the Notifications
