Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಹೊಸರುಚಿ : ಹೋಳಿಗೆ ಸಾರು ಅಥವಾ ಒಬ್ಬಟ್ಟು ಸಾರು

ಬೇಳೆಕಟ್ಟು : ಬೇಳೆಯನ್ನು ತುಂಬಾ ನೀರು ಹಾಕಿ ಬೇಯಿಸಿಕೊಳ್ಳಬೇಕು. ಬೇಳೆಯೂ ಕರಗದಂತೆ ಬೇಯಿಸಿ, ಗಟ್ಟಿಯಿರುವಾಗಲೆ ಅದನ್ನು ಇಳಿಸಿ ನೀರು ಸೋಸಿ ಬಸಿದುಕೊಳ್ಳಿ. ಅದರಿಂದ ಬರುವ ನೀರನ್ನೆ "ಬೇಳೆ ಕಟ್ಟು" ಎನ್ನುತ್ತೇವೆ. ಬಸಿದಾಗ ಬಂದಿರುವ ಬೇಳೆಗೆ ಬೆಲ್ಲ ಮತ್ತು ಏಲಕ್ಕಿ ಹಾಕಿ, ಒಲೆ ಮೇಲಿಟ್ಟು ಕುದಿಸಿ, ರುಬ್ಬಿಕೊಳ್ಳುವ ಮಿಶ್ರಣವೇ "ಹೂರಣ".
ಬೇಕಾಗುವ ಸಾಮಗ್ರಿಗಳು:
ತೊಗರಿಬೇಳೆ ಬೇಯಿಸಿ ಬಸಿದು ತೆಗೆದ ಬೇಳೆಕಟ್ಟು
ಕರಿಬೇವು ಎಸಳು - ಎರಡು
ಹೂರಣ (ಬೇಳೆ-ಬೆಲ್ಲದ ರುಬ್ಬಿದ ಮಿಶ್ರಣ)- ಎರಡು ಚಮಚ
ಈರುಳ್ಳಿ - ಒಂದು
ಬೆಳ್ಳುಳ್ಳಿ ಐದಾರು ಎಸಳು
ತೆಂಗಿನಕಾಯಿ ತುರಿ ಸ್ವಲ್ಪ
ಹುಣಸೇಹಣ್ಣು / ಹುಣಸೇರಸ(ಪಲ್ಪ್)
ಕೊತ್ತಂಬರಿ ಸೊಪ್ಪು ಸ್ವಲ್ಪ
ಎಣ್ಣೆ / ತುಪ್ಪ
ಸಾಸಿವೆ, ಕರಿಬೇವು
ಇಂಗು, ಜೀರಿಗೆ
ಉಪ್ಪು
ಹುರಿದು ಮಸಾಲೆಪುಡಿ ಮಾಡಿಕೊಳ್ಳಿ
ಒಣಮೆಣಸಿನಕಾಯಿ ರುಚಿಗೆ
ಧನಿಯಾ - ಎರಡು ದೊಡ್ಡ ಚಮಚಗಳು
ಜೀರಿಗೆ - ಒಂದು ದೊಡ್ಡ ಚಮಚ
ಮೆಣಸು - ಕಾಲು ಚಮಚ
ಮೆಂತ್ಯ - ಕಾಲು ಚಮಚ
ಸಾಸಿವೆ - ಕಾಲು ಚಮಚ
ಚೆಕ್ಕೆ - ಚಿಕ್ಕ ಚೂರು,ಲವಂಗ -ಒಂದು
ತಯಾರಿಸುವ ರೀತಿ:
ಬೇಳೆ ಬಸಿದುಕೊಂಡ ಕಟ್ಟು ನೀರಿಗೆ ಅದು ಬಿಸಿಯಾಗಿರುವಾಗಲೆ ಒಂದೆರಡು ಎಸಳು ತೊಳೆದಿರುವ ಕರಿಬೇವಿನಸೊಪ್ಪು ಹಾಕಿಡಿ. ಮೊದಲು ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಚೂರು ಎಣ್ಣೆ ಹಾಕಿ ಹುರಿದುಕೊಳ್ಳಿ. ಹುರಿದುಕೊಂಡು ಪುಡಿ ಮಾಡಲು ಹೇಳಿರುವ ಸಾಮಾನುಗಳನ್ನೆಲ್ಲಾ ಹುರಿದು ಪುಡಿಮಾಡಿಕೊಳ್ಳಿ.
ತೆಂಗಿನಕಾಯಿ ತುರಿಗೆ, ಹುರಿದಿರುವ ಈರುಳ್ಳಿ, ಬೆಳ್ಳುಳ್ಳಿ, ಮಸಾಲೆಪುಡಿ, ಹುಣಸೇಹಣ್ಣು, ಬೇಳೆ ಹೂರಣ, ಕೊತ್ತಂಬರಿಸೊಪ್ಪು ಮತ್ತು ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.
ಈಗ ಒಂದು ಪಾತ್ರೆಗೆ ಸ್ವಲ್ಪ ಎಣ್ಣೆ ಮತ್ತು ಒಂದು ಚಮಚ ತುಪ್ಪ ಹಾಕಿ ಸಾಸಿವೆ, ಜೀರಿಗೆ, ಕರಿಬೇವು, ಇಂಗು ಮತ್ತು ಒಂದು ಜಜ್ಜಿದ ಬೆಳ್ಳುಳ್ಳಿ ಹಾಕಿ ಒಗ್ಗರಣೆ ಮಾಡಿಕೊಂಡು, ಅದಕ್ಕೆ ರುಬ್ಬಿದ ಮಸಾಲೆ ಹಾಕಿ ಮತ್ತು ಬೇಳೆ ಕಟ್ಟು ಕೂಡ ಸೇರಿಸಿ. ಎರಡನ್ನು ಚೆನ್ನಾಗಿ ಬೆರೆಸಿ ಕುದಿಯಲು ಬಿಡಿ. ರುಚಿಗೆ ತಕ್ಕ ಉಪ್ಪು ಮತ್ತು ಕಾರ ಸೇರಿಸಿಕೊಳ್ಳಿ. ಒಂದು ಕುದಿ ಮಾತ್ರ ಕುದಿಸಿ ಇಳಿಸಿ. ಹೋಳಿಗೆ ಸಾರು ತಯಾರಾಗುತ್ತದೆ.
ಈ ಹೋಳಿಗೆ ಸಾರನ್ನು ಮೊದಲ ಸಾರಿ ಮಾತ್ರ ಒಂದು ಸಾರಿ ಕುದಿಸಿದರೆ ಸಾಕು. ಈ ಸಾರು ಮಾರನೇದಿನ ತುಂಬಾ ರುಚಿಯಾಗಿರುತ್ತದೆ. ಕುದಿಸಿ ಕುದಿಸಿ ಸ್ವಲ್ಪ ಗಟ್ಟಿ ಬಂದಾಗ ಇನ್ನೂ ರುಚಿ ಜಾಸ್ತಿಯಾಗುತ್ತದೆ. [ಕೃಪೆ : ಅಡಿಗೆ ಸವಿರುಚಿ]



Click it and Unblock the Notifications
