Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಮೆಂತೆ ಸೊಪ್ಪು ಮತ್ತು ಪನ್ನೀರ್ ಕರಿ ರೆಸಿಪಿ
ಮೆಂತೆ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಅದು ಕಹಿಯಾಗಿರುವುದರಿಂದ ಕೆಲವರು ಇದನ್ನು ತಿನ್ನಲು ಇಷ್ಟಪಡುವುದಿಲ್ಲ. ಇಲ್ಲಿ ಮೆಂತೆ ಸೊಪ್ಪು ಮತ್ತು ಪನ್ನೀರ್ ಹಾಕಿ ತಯಾರಿಸುವ ಮೆಂತೆ ಸೊಪ್ಪಿನ ಕರಿಯ ರೆಸಿಪಿ ನೀಡಲಾಗಿದೆ. ಈ ಅಡುಗೆಯಲ್ಲಿ ಹಾಲಿನ ಕೆನೆ ಸೇರಿಸುವುದರಿಂದ ಕಹಿ ಕಡಿಮೆಯಾಗಿ ಅಡುಗೆ ತುಂಬಾ ರುಚಿಕರವಾಗಿರುತ್ತದೆ.

ಬೇಕಾಗುವ ಸಾಮಾಗ್ರಿಗಳು:
ಪನ್ನೀರ್ 200 ಗ್ರಾಂ
ಹಸಿಮೆಣಸಿನಕಾಯಿ 1
ಈರುಳ್ಳಿ 1
ಶುಂಠಿ ಪೇಸ್ಟ್ 1 ಚಮಚ
ಟೊಮಟೊ 1 (ಕತ್ತರಿಸಿದ್ದು)
ಮೆಂತೆ ಸೊಪ್ಪು1-2 ಕಟ್ಟು
ಕೊತ್ತಂಬರಿ ಪುಡಿ 1 ಚಮಚ
ಕೆಂಪು ಮೆಣಸಿನ ಪುಡಿ ಅರ್ಧ ಚಮಚ
ಅರಿಶಿಣ ಪುಡಿ ಕಾಲು ಚಮಚ
ಹಾಲಿನ ಕೆನೆ 2 ಚಮಚ
ಕರಿ ಮೆಣಸಿನ ಪುಡಿ 1 ಚಮಚ
ತುಪ್ಪ 1 ಚಮಚ
ಎಣ್ಣೆ 1 ಚಮಚ
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
* ಮೆಂತೆ ಸೊಪ್ಪನ್ನು ಸ್ವಚ್ಛಗೊಳಿಸಿ ಮಿಕ್ಸಿಯಲ್ಲಿ ಹಾಕಿ ನುಣ್ಣಗೆ ರುಬ್ಬಿಟ್ಟುಕೊಳ್ಳಬೇಕು.
* ಬಾಣಲೆಯಲ್ಲಿ ತುಪ್ಪ ಹಾಕಿ ಬಿಸಿ ಮಾಡಬೇಕು. ನಂತರ ಪನ್ನೀರ್ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
* ನಂತರ ಅದರಲ್ಲಿ ಕರಿಮೆಣಸಿನ ಪುಡಿ ಹಾಕಿ ಬದಿಯಲ್ಲಿಡಬೇಕು.
* ಈಗ ಪಾತ್ರೆಯಲ್ಲಿ ಎಣ್ಣೆ ಹಾಕಿ ಬಿಸಿ ಮಾಡಿ ಅದರಲ್ಲಿ ಈರುಳ್ಳಿ ಮತ್ತು ಹಸಿ ಮೆಣಸಿನ ಕಾಯಿ ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಹುರಿಯಬೇಕು.
* ನಂತರ ರುಬ್ಬಿದ ಮೆಂತೆ ಸೊಪ್ಪು ಹಾಕಿ ಸ್ವಲ್ಪ ಹೊತ್ತು ಸೌಟ್ ನಿಂದ ಆಡಿಸುತ್ತಾ ಹುರಿಯಬೇಕು. ನಂತರ ಖಾರದ ಪುಡಿ, ಅರಿಶಿಣ ಪುಡಿ, ಕೊತ್ತಂಬರಿ ಪುಡಿ, ಗರಂ ಮಸಾಲ, ರುಚಿಗೆ ತಕ್ಕ ಉಪ್ಪು ಹಾಕಿ ಕುದಿಸಬೇಕು.
* ಮಿಶ್ರಣ ಚೆನ್ನಾಗಿ ಕುದಿ ಬಂದ ನಂತರ ಹಾಲಿನ ಕೆನೆ ಹಾಕಿ 2 ನಿಮಿಷ ಕುದಿಸಿ ನಂತರ ಪನ್ನೀರ್ ಹಾಕಿ ಮತ್ತೆ 2 ನಿಮಿಷ ಕುದಿಸಿ ಉರಿಯಿಂದ ತೆಗೆದರೆ ಮೆಂತೆ ಪನ್ನೀರ್ ಕರಿ ರೆಡಿ.



Click it and Unblock the Notifications
