Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಸೋಯಾ ಮಸಾಲ ಗ್ರೇವಿ ರೆಸಿಪಿ
ಸೋಯಾ ಅಥವಾ ಮೀಲ್ ಮೇಕರ್ ಅನ್ನು ಸ್ವಲ್ಪ ಗ್ರೇವಿ ರೀತಿಯಲ್ಲಿ ಮಾಡಿದರೆ ಅನ್ನದ ಜೊತೆ ತಿನ್ನಲು ರುಚಿಕರವಾಗಿರುತ್ತದೆ. ಸೋಯಾದಿಂದ ಮಾಡುವಾಗ ಅದಕ್ಕೆ ಮಸಾಲೆ ಪದಾರ್ಥಗಳನ್ನು ಸ್ವಲ್ಪ ಇತರ ಅಡುಗೆಗೆ ಬಳಸುವುದಕ್ಕಿಂತ ಸ್ವಲ್ಪ ಜಾಸ್ತಿ ಹಾಕಬೇಕು, ಇಲ್ಲದಿದ್ದರೆ ಅಡುಗೆ ಸಪ್ಪೆ ಅನಿಸುವುದು.
ಇಲ್ಲಿ ನಾವು ಸೋಯಾ ಅಥವಾ ಮೀಲ್ ಮೇಕರ್ ನಿಂದ ರುಚಿಕರವಾದ ಗ್ರೇವಿ ಮಾಡುವ ವಿಧಾನವನ್ನು ತಿಳೀಸಿದ್ದೇವೆ ನೋಡಿ:

ಬೇಕಾಗುವ ಸಾಮಾಗ್ರಿಗಳು
ಸೋಯಾ(ಮೀಲ್ ಮೇಕರ್)
ಈರುಳ್ಳಿ1
ಶುಂಠಿ-ಬೆಳ್ಳುಳ್ಳಿ ಪೇಸ್ಟ್ 2 ಚಮಚ
ಟೊಮೆಟೊ 1
ಅರಿಶಿಣ ಪುಡಿ 1 ಚಮಚ
ಖಾರದ ಪುಡಿ ಅರ್ಧ ಚಮಚ
ಜೀರಿಗೆ ಪುಡಿ ಅರ್ಧ ಚಮಚ
ಕೊತ್ತಂಬರಿ ಪುಡಿ ಅರ್ಧ ಚಮಚ
ಗರಂ ಮಸಾಲ ಅರ್ಧ ಚಮಚ
ತೆಂಗಿನಕಾಯಿ ಹಾಲು 1/2 ಕಪ್
ರುಚಿಗೆ ತಕ್ಕ ಉಪ್ಪು
ಅರ್ಧ ಕಪ್ ನೀರು
ಸ್ವಲ್ಪ ಕೊತ್ತಂಬರಿ ಸೊಪ್ಪು
ತಯಾರಿಸುವ ವಿಧಾನ:
* ಮೀಲ್ ಮೇಕರ್ ಅನ್ನು 10 ನಿಮಿಷಗಳ ಕಾಲ ನೀರಿನಲ್ಲಿ ನೆನೆ ಹಾಕಿ, ನಂತರ ಅದರಿಂದ ನೀರನ್ನು ಹಿಂಡಿ ತೆಗೆದು ಒಂದು ಪಾತ್ರೆಯಲ್ಲಿ ಹಾಕಿಡಿ.
* ಪಾತ್ರೆಯನ್ನು ಬಿಸಿ ಮಾಡಿ ಅದರಲ್ಲಿ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಈರುಳ್ಳಿ ಹಾಕಿ 3-4 ನಿಮಿಷ ಹುರಿಯಿರಿ. ನಂತರ ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಫ್ರೈ ಮಾಡಿ.
* ನಂತರ ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಖಾರದ ಪುಡಿ, ಜೀರಿಗೆ ಪುರಿಡಿ, ಗರಂ ಮಸಾಲ, ಕೊತ್ತಂಬರಿ ಪುಡಿ ಹಾಕಿ ಮಿಕ್ಸ್ ಮಾಡಿ, ನಂತರ ಸೋಯಾವನ್ನು ಹಾಕಿ, ಈಗ ತೆಂಗಿನಕಾಯಿ ಹಾಲು, ಸ್ವಲ್ಪ ನೀರು ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರಣ ಗ್ರೇವಿ ರೀತಿ ಬರುವವರೆಗೆ ಕುದಿಸಿ. ಈ ರೀತಿ ಕುದಿಸುವಾಗ ತಳ ಹಿಡಿಯಲು ಬಿಡಬೇಡಿ.
* ಮಿಶ್ರಣ ಗ್ರೇವಿ ರೀತಿ ಬಂದ ಉಪ್ಪು ಸರಿಯಾಗಿದೆಯೇ ಎಂದು ನೋಡಿ ಕೊತ್ತಂಬರಿ ಸೊಪ್ಪನ್ನು ಉದುರಿಸಿದರೆ ಸೋಯಾ ಮಸಾಲ ಗ್ರೇವಿ ರೆಡಿ.



Click it and Unblock the Notifications