Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಬಾಯಿ ರುಚಿಯನ್ನು ಹೆಚ್ಚಿಸುತ್ತೆ ಈ ಬಸ್ಸಾರು
ಬಸ್ಸಾರು ಕರ್ನಾಟಕದ ಪ್ರಸಿದ್ಧ ಅಡುಗೆಯಾಗಿದೆ. ಈ ಬಸ್ಸಾರು ರುಚಿಯ ಜೊತೆಗೆ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. 3-4 ಬಗೆಯ ಸೊಪ್ಪನ್ನು ಬಳಸಿ ಈ ಬಸ್ಸಾರನ್ನು ಮಾಡಲಾಗುವುದು. ರುಬ್ಬಿ ಮಾಡುವ ಈ ಬಸ್ಸಾರನ್ನು ಮುದ್ದೆ ಅಥವಾ ಅನ್ನದ ಜೊತೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.
ಬಸ್ಸಾರಿನಲ್ಲಿ ಸೊಪ್ನನ್ನು ಬೇಳೆಯ ಜೊತೆ ಬೇಯಿಸಿ ಆ ನೀರಿನಿಂದ ತಯಾರಿಸಲಾಗುವುದು, ನಂತರ ಬೇಯಿಸಿ ಸೊಪ್ಪನಿಂದ ರಚಿಕರವಾದ ಪಲ್ಯವನ್ನು ತಯಾರಿಸಬಹುದು. ಬಸ್ಸಾರಿನ ರೆಸಿಪಿಯನ್ನು ಈ ಕೆಳಗೆ ನೀಡಲಾಗಿದೆ ನೋಡಿ:

ಸಾರಿಗೆ ಬೇಕಾಗುವ ಸಾಮಾಗ್ರಿಗಳು:
ತೊಗರಿಬೇಳೆ - ಒಂದು ಕಪ್
ಸಬ್ಬಸ್ಸಿಗೆ ಸೊಪ್ಪು, ಬೆರೆಕೆಸೊಪ್ಪು, ದಂಟಿನಸೊಪ್ಪು(ಎಲ್ಲಾ ಒಂದೊಂದು ಕಟ್ಟು)
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಖಾರದ ಪುಡಿ (ಖಾರಕ್ಕೆ ತಕ್ಕಷ್ಟು)
ಸಾಂಬಾರ್ ಪುಡಿ - ಅರ್ಧ ಚಮಚ
ಕೊತ್ತಂಬರಿಸೊಪ್ಪು
ಕರಿಬೇವಿನ ಸೊಪ್ಪು
ಉಪ್ಪು
ಎಣ್ಣೆ
ತಯಾರಿಸುವವಿಧಾನ:
* ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ.
* ಈಗ ಪಾತ್ರೆಯಲ್ಲಿ ನೀರು ಹಾಕಿ, ಅದಕ್ಕೆ ತೊಳೆದ ತೊಗರಿಬೇಳೆ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ, ಬೇಳೆ ಬೇಯಲು ಬಿಡಿ. ಬೇಳೆಯನ್ನು ತುಂಬಾ ಬೇಯಿಸಬೇಡಿ.
* ಬೇಳೆ ಸ್ವಲ್ಪ ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ , ರುಚಿಗೆ ತಕ್ಕ ಉಪ್ಪು ಹಾಕಿ,ಸೊಪ್ಪು ಬೇಯುವವರೆಗೂ ಬೇಯಿಸಿ, ಬೇಳೆ ಕರಗದಂತೆ ಬೇಯಿಸಿಕೊಳ್ಳಿ.
* ನಂತರ ಬೇಳೆ ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು ಸೊಪ್ಪಿನ ನೀರನ್ನು ಮತ್ತು ಸೊಪ್ಪನ್ನು ಬೇರೆ ಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಈಗ ಮಸಾಲೆಗೆ:
* ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಎಣ್ಣೆಯಲ್ಲಿ ಸ್ವಲ್ಪ ಹುರಿದುಕೊಂಡು,ಅದಕ್ಕೆ ಸ್ವಲ್ಪ ಬೇಯಿಸಿದ ಬೇಳೆ ಮತ್ತು ಸೊಪ್ಪಿನ ಮಿಶ್ರಣವನ್ನು,ಎರಡು ಚಮಚ ಕಾಯಿತುರಿ ಜೀರಿಗೆ, ಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತುಂಬರಿಸೊಪ್ಪು ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಬೇಕು.
* ನಂತರ ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು , ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಸ್ವಲ್ಪ ಹೊತ್ತು ಉರಿದು ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸ್ವಲ್ಪ ಸೊಪ್ಪನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಬಸ್ಸಾರು ತಯಾರು.
ಸಲಹೆ: ಬಸ್ಸಾರಿಗೆ ಕೊತ್ತಂಬರಿ ಸೊಪ್ಪು ಮತ್ತು ಸ್ವಲ್ಪ ಅಧಿಕ ಹಾಕಿದರೆ ರುಚಿ ಜಾಸ್ತಿ.
ಇದನ್ನು ರಾತ್ರಿ ಮಾಡಿ ಬೆಳಗ್ಗೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.
ರಾಗಿ ಮುದ್ದೆಗೆ ಬಸ್ಸಾರು ಬೆಸ್ಟ್ ಕಾಂಬೀನೇಷನ್.
ಬೇಯಿಸಿದ ಉಳಿದ ಸೊಪ್ಪಿನಿಂದ ಪಲ್ಯ ಮಾಡಿರಿ.



Click it and Unblock the Notifications
