Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಹೂಕೋಸು ಮತ್ತು ಹಸಿ ಬಟಾಣಿ ಬಾತ್
ಅದೇ ಉಪ್ಪಿಟ್ಟು, ಚಿತ್ರಾನ್ನ, ರೈಸ್‌ಬಾತ್ ತಪ್ಪಿದರೆ ಇಡ್ಲಿ, ವಡೆ ಸಾಂಬಾರ್, ದೋಸೆ. ಸಾಕಪ್ಪ ಸಾಕು ಎನ್ನುವ ಮಂದಿಗೆ ಇಲ್ಲಿದೆ ಹೊಸ ಬಾತ್ ಐಟಂ. ನಿಮ್ಮ ನಾಲಗೆ ರುಚಿ ತಣಿಸಲು ಹಾಗೂ ನಿಮ್ಮ ವಾರದ ಉಪಹಾರ ಪಟ್ಟಿಗೆ ಇದನ್ನು ಹೊಸದಾಗಿ ಸೇರ್ಪಡಿಸಿಕೊಳ್ಳಬಹುದು. ಪಾಕಶಾಸ್ತ್ರದಲ್ಲಿ ಆಆಇಈ ಕಲಿಯುತ್ತಿರುವವರು ಸುಲಭವಾಗಿ ಮಾಡಬಹುದಾದ ಅಡುಗೆ. ಒಮ್ಮೆ ಪ್ರಯತ್ನಿಸಿ.
ಸುಲೋಚನಾ, ಬೆಂಗಳೂರು
ಬೇಕಾಗುವ ಪದಾರ್ಥಗಳು:
ಅಕ್ಕಿ : 1ಲೋಟ
ದೊಡ್ಡ ಗಾತ್ರದ ಈರುಳ್ಳಿ :2
ದೊಡ್ಡ ಗಾತ್ರದಟೊಮಾಟೋ: 3
ಹೂಕೋಸು:1
ಕೆಂಪು ಮೆಣಸಿನಕಾಯಿ ಪುಡಿ: ಅರ್ಧ ಚಮಚ
ಗರಂ ಮಸಾಲ ಪುಡಿ: ಅರ್ಧ ಚಮಚ
ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು: ಸ್ವಲ್ಪ
ಎಣ್ಣೆ : 2 ಚಮಚ
ನಿಂಬೆಹಣ್ಣು: 1
ಉಪ್ಪು:ರುಚಿಗೆ ತಕ್ಕಷ್ಟು
ಮಸಾಲೆ ತಯಾರಿಕೆ: ಸಣ್ಣ ಈರುಳ್ಳಿ- 7 ;ಹಸಿರು ಮೆಣಸಿನ ಕಾಯಿ- 4; ಹಸಿ ಶುಂಠಿಯ ಸಣ್ಣ ತುಂಡು. ಮೊದಲು ಈರುಳ್ಳಿ ಮತ್ತು ಮೆಣಸಿನಕಾಯಿಯನ್ನು ಅರ್ಧ ಚಮಚ ಎಣ್ಣೆಯಲ್ಲಿ ಹುರಿಯಿರಿ. ನಂತರ ಹಸಿ ಶುಂಠಿಯೊಂದಿಗೆ ಅದನ್ನು ರುಬ್ಬಿಕೊಳ್ಳಿರಿ.
ಮಾಡುವ ವಿಧಾನ:
ಈರುಳ್ಳಿಯನ್ನು ಮೊದಲು ಸಣ್ಣಗೆ ಹೆಚ್ಚಿಕೊಳ್ಳಿ. ಟೊಮಾಟೊವನ್ನು 10 ನಿಮಿಷ ಬಿಸಿನೀರಿನಲ್ಲಿ ನೆನೆಸಿ. ಅದರ ಸಿಪ್ಪೆ ತೆಗೆದು ರುಬ್ಬಿಟ್ಟುಕೊಳ್ಳಿ. ಈಗ ಶೋಧಿಸಿ, ತಿರುಳನ್ನು ಬೇರ್ಪಡಿಸಿರಿ. ಹೂಕೋಸನ್ನು ಸಣ್ಣ ತುಂಡುಗಳಾಗಿ ಹೆಚ್ಚಿ. ಅದನ್ನು ಉಪ್ಪು ಮತ್ತು ಅರಿಶಿನಪುಡಿ ಸೇರಿಸಿದ ನೀರಿನಲ್ಲಿ ನೆನೆಸಿ. ಕೆಲ ನಿಮಿಷಗಳ ನಂತರ ಹೂಕೋಸನ್ನು ಹೊರತೆಗೆದು ಗರಿಗರಿಯಾಗಿ ಎಣ್ಣೆಯಲ್ಲಿ ಹುರಿದಿಟ್ಟುಕೊಳ್ಳಿ.
ಹಸಿ ಬಟಾಣಿಯನ್ನು ಪ್ರತ್ಯೇಕವಾಗಿ ಬೇಯಿಸಿಕೊಳ್ಳಿ. ಎರಡು ಲೋಟ ನೀರಿನಲ್ಲಿ ಅಕ್ಕಿಯನ್ನು ನೆನೆಸಿ. ಕುಕ್ಕರಿನಲ್ಲಿ ಬೇಯಿಸಿರಿ. ಅದು ತಣ್ಣಗಾಗಲು ಮತ್ತು ಹುಡಿ ಹುಡಿಯಾಗಲು ಸ್ವಲ್ಪ ಕಾಲ ಅಗಲವಾದ ಪಾತ್ರೆಯಲ್ಲಿ ಹರಡಿ.
ಪಾತ್ರೆಯೊಂದರಲ್ಲಿ ಎಣ್ಣೆ ಬಿಸಿ ಮಾಡಿ. ಈರುಳ್ಳಿಯನ್ನು ಹೊಂಬಣ್ಣಕ್ಕೆ ಹುರಿದುಕೊಳ್ಳಿ. ಇದಕ್ಕೆ ರುಬ್ಬಿಟ್ಟುಕೊಂಡ ಟೊಮಾಟೊ ಹಾಗೂ ಈರುಳ್ಳಿ , ಹಸಿ ಶುಂಠಿಯ ಮಸಾಲೆ ಸೇರಿಸಿ. ನೀರಿನ ಅಂಶ ಇಂಗುವವರೆಗೆ ಹುರಿಯಿರಿ. ಈಗ ಉಪ್ಪು, ಕೆಂಪು ಮೆಣಸಿನಪುಡಿ, ಗರಂ ಮಸಾಲೆ ಮತ್ತು ಬೇಯಿಸಿದ ಬಟಾಣಿ ಸೇರಿಸಿ ಚೆನ್ನಾಗಿ ಕಲಸಿರಿ. ನಂತರ ಈ ಪಾತ್ರೆಗೆ ಮೊದಲೇ ತಯಾರಿಸಿಕೊಂಡ ಅನ್ನ ಮತ್ತು ಅರ್ಧದಷ್ಟು ಹುರಿದಿಟ್ಟ ಹೂಕೋಸನ್ನು ಸೇರಿಸಿ. ಕೆಲ ನಿಮಿಷಗಳಕಾಲ, ಅನ್ನ ಬಿಸಿಯಾಗುವವರೆಗೆ ಹುರಿಯಿರಿ. ನಂತರ ಒಲೆಯಿಂದ ಪಾತ್ರೆಯನ್ನು ಕೆಳಗಿಳಿಸಿ. ಅದಕ್ಕೆ ಹುರಿದ ಗೋಡಂಬಿ, ನಿಂಬೆ ಹಣ್ಣಿನ ರಸವನ್ನು ಸೇರಿಸಿ, ಚೆನ್ನಾಗಿ ಕಲಸಿ.
ಉಳಿದ ಹುರಿದ ಹೂಕೋಸು, ಸಣ್ಣಗೆ ಕತ್ತರಿಸಿದ ಕೊತ್ತಂಬರಿ ಸೊಪ್ಪು ಮತ್ತು ತಾಜಾ ತೆಂಗಿನಕಾಯಿ ತುರಿಯಿಂದ ಬಾತ್ ಅನ್ನು ಅಲಂಕರಿಸಿ ಸವಿಯಬಹುದು.



Click it and Unblock the Notifications
