Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಬ್ಯಾಚುಲರ್ ಕಿಚನ್ ನಲ್ಲಿ ಬೆಳ್ಳುಳ್ಳಿ ಅನ್ನ

ಬೇಕಾಗುವ ಪದಾರ್ಥಗಳು
ಎರಡು ಗೆಡ್ಡೆ ಬೆಳ್ಳುಳ್ಳಿ
ಸ್ವಲ್ಪ ಕರಿಬೇವಿನ ಎಲೆ
ಸಾಸಿವೆ
ಉದ್ದಿನಬೇಳೆ
ಕಡ್ಲೆಬೇಳೆ
ಹಸಿಮೆಣಸು
ಒಣಮೆಣಸು
ಉಪ್ಪು
ಮಾಡುವ ವಿಧಾನ
ಮೊದಲು ಮಾಡಿದ ಅನ್ನವನ್ನು ಬಟ್ಟಲಿಗೆ ಹಾಕಿ ತಣ್ಣಗಾಗಲು ಬಿಡಿ. ಬೆಳ್ಳುಳ್ಳಿಯ ಸಿಪ್ಪೆ ತೆಗೆದು ಸಿದ್ಧಪಡಿಸಿಟ್ಟುಕೊಳ್ಳಿ. ನಾಲ್ಕು ಹಸಿ ಮೆಣಸು ಸೀಳಿಕೊಳ್ಳಿ.
ಒಗ್ಗರಣೆಗೆ ಎರಡು ಒಣಮೆಣಸು ತುಂಡು ಮಾಡಿಕೊಂಡು, ಒಲೆ ಹಚ್ಚಿ ಬಾಣಲಿ ಇಡಿ (ಪಾತ್ರೆಯೂ ಆದೀತು). ಕಾವು ಸಣ್ಣಗಿರಲಿ. ಸ್ವಲ್ಪ ಎಣ್ಣೆ ಹಾಕಿ. ಎಣ್ಣೆ ಕಾದ ಕೂಡಲೇ ಅರ್ಧ ಟೀ ಸ್ಪೂನ್ ಸಾಸಿವೆ ಹಾಕಿ, ಪಟ್ ಪಟ್ ಎಂಬ ಸದ್ದು ಕೇಳುತ್ತಿದ್ದಂತೆ ಬೆಳ್ಳುಳ್ಳಿ ಹಾಕಿ. ಬಂಗಾರದ ಬಣ್ಣಕ್ಕೆ ಬರುತ್ತಿದ್ದಂತೆ ಸ್ವಲ್ಪ ಉದ್ದಿನಬೇಳೆ, ಕಡ್ಲೆಬೇಳೆ, ಒಣಮೆಣಸು ಹಾಕಿ. ಕೆಂಪಗಾಗುವಷ್ಟು ಹುರಿಯಿರಿ. ಕೆಂಪಗಾಗುತ್ತಿದ್ದಂತೆ ಹಸಿಮೆಣಸು, ಕರಿಬೇವಿನ ಎಲೆ ಹಾಕಿ ಹುರಿಯಿರಿ. ಆಮೇಲೆ ಉಪ್ಪು ಹಾಕಿ ಅನ್ನವನ್ನು ಹಾಕಿ ಕಲಸಿ. ಅಲ್ಲಿಗೆ ಬೆಳ್ಳುಳ್ಳಿ ಅನ್ನ ಸಿದ್ಧ.
ಇದಕ್ಕೆ ಬೇಕಾದವರು ಲಿಂಬೆಹಣ್ಣಿನ ರಸ ಬೆರೆಸಬಹುದು, ತೆಂಗಿನಕಾಯಿಯ ತುರಿ ಹಾಕಬಹುದು. ಕೊತ್ತಂಬರಿ ಸೊಪ್ಪು ಹಾಕಿ ಅಲಂಕರಿಸಬಹುದು.
ಮತ್ತೊಂದು ಪ್ರಮುಖ ಸಂಗತಿಯೆಂದರೆ, ಬ್ರಹ್ಮಚಾರಿಗಳ ಮನೆಯಲ್ಲಿ ಅನ್ನ ಉಳಿಯುವುದು ಹೆಚ್ಚು. ಇಂದಿನ ಅನ್ನ ನಾಳೆಗೆ ಉಳಿದಾಗ ತಂಗಳನ್ನ ತಿನ್ನಬೇಕು ಎಂದು ಬೇಸರವಿರುತ್ತದೆ. ಆ ದುಃಖವನ್ನು ಇದು ಹೋಗಲಾಡಿಸುತ್ತದೆ. ಅದಕ್ಕೆ ಅನ್ನ ಉಳಿದರೆ, ಅದಕ್ಕೆ ನೀರು ಹಾಕಿಡಿ. ಅದು ಕೆಟ್ಟು ಹೋಗುವುದಿಲ್ಲ. ಅದೇ ಅನ್ನವನ್ನು ಹಿಂಡಿ ಹಿಂಡಿ ನೀರಿನಾಂಶ ತೆಗೆದು ಬೆಳ್ಳುಳ್ಳಿ ಅನ್ನ ಮಾಡಬಹುದು. ಅದೇ ಹೆಚ್ಚು ರುಚಿ.
ಗಮನವಿಡಬೇಕಾದ ಅಂಶ
* ಅನ್ನ ಬಟ್ಟಲಿಗೆ ಹಾಕಿ ತಣ್ಣಗೆ ಮಾಡಿದರೆ ಬೆಳ್ಳುಳ್ಳಿ ಅನ್ನ ಮುದ್ದೆಯಾಗುವುದಿಲ್ಲ.
* ಇದಕ್ಕೆ ಶುಂಠಿ ಇತ್ಯಾದಿ ಹಾಕಬೇಡಿ. ಬೆಳ್ಳುಳ್ಳಿ ಮತ್ತು ಶುಂಠಿ ಎರಡರ ಘಾಟು ರುಚಿಯನ್ನೇ ಕೆಡಿಸುತ್ತದೆ.
* ತಂಗಳನ್ನ ಎಂದು ಹೀಗಳೆಯಬೇಡಿ, ಬೆಳ್ಳುಳ್ಳಿ ಅನ್ನ ಮಾಡಿ.
* ಬಹಳ ಸುಲಭ ಮತ್ತು ಕಡಿಮೆ ಸಮಯ ಹಿಡಿಯುವ ತಿಂಡಿ.
(ಕೃಪೆ : ಅವಧಿ)



Click it and Unblock the Notifications
