Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಬಾಯಿ ಚಪ್ಪರಿಸುವಂತೆ ಮಾಡುವ ಪಾಲಕ್ ರೈಸ್ ರೆಸಿಪಿ
ಆರೋಗ್ಯ ಮತ್ತು ರುಚಿ ವಿಷಯದಲ್ಲಿ ನಿಮ್ಮ ಮಕ್ಕಳಿಗೆ ಪಾಲಕ್ ಅನ್ನ ಯಾವತ್ತಿಗೂ ಚೆನ್ನ. ನೀವು ಮನೆಯಲ್ಲಿ ಸುಲಭವಾಗಿ ಮಾಡುವ ತಿಂಡಿಗಳಲ್ಲಿ ಪಾಲಕ್‌ಗೂ ಸ್ವಲ್ಪ ಸ್ಥಳ ಮೀಸಲಿಡಿ. ಪೌಷ್ಟಿಕಾಂಶಯುಕ್ತ ಪಾಲಾಕ್ ಅಂದ್ರೆ ಎಲ್ಲರಿಗೂ ಚಿರಪರಿಚಿತ. ಪಾಲಾಕ್ ಸೇವನೆ ಆರೋಗ್ಯಕ್ಕೆ ಮಾತ್ರವಲ್ಲ, ರುಚಿಯಲ್ಲೂ ಎತ್ತಿದ ಕೈ.
ಈ ಪಾಲಾಕನ್ನು ಉಪಯೋಗಿಸಿಕೊಂಡು ಅನೇಕ ಖಾದ್ಯಗಳನ್ನ ಮಾಡಬಹುದು. ವಿಟಮಿನ್ ಮತ್ತು ಕಬ್ಬಿಣಾಂಶ ಹೇರಳವಾಗಿರುವ ಪಾಲಾಕ್ ಸೊಪ್ಪು ಮಕ್ಕಳಿಗೆ ತುಂಬಾ ಅವಶ್ಯಕ. ಹಾಗಾದರೆ ಇನ್ನೇಕೆ ತಡ ? ಬನ್ನಿ ಪಾಲಕ್ ರೈಸ್ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳುವ

ಬೇಕಾಗುವ ಪದಾರ್ಥಗಳು:
* 2 ಕಪ್ ಅನ್ನ
* 1 ಕಪ್ ತೊಳೆದು ಕತ್ತರಿಸಿದ ಪಾಲಾಕ್ ಸೊಪ್ಪು
* 1 ದೊಡ್ಡ ಈರುಳ್ಳಿ
* 3-4 ಹಸಿರು ಮೆಣಸಿನಕಾಯಿ
* 1/2 ಚಕ್ಕೆ, 3 ಕರಿಮೆಣಸು
* 1 ಚಮಚ ಸಾಸಿವೆ, 1 ಚಮಚ ಜೀರಿಗೆ, ಲವಂಗ
* 1/2 ಕಪ್ ಗೋಡಂಬಿ
* ಉಪ್ಪು, ಎಣ್ಣೆ, ಒಂದು ನಿಂಬೆಹಣ್ಣು
ಪಾಲಾಕ್ ರೈಸ್ ಮಾಡುವ ವಿಧಾನ:
1. ಬಾಣಲೆಯಲ್ಲಿ ಎಣ್ಣೆ ಹಾಕಿ ಕಾಯಿಸಿ ಅದಕ್ಕೆ ಸಾಸಿವೆ, ಜೀರಿಗೆ, ಮೆಣಸಿನ ಕಾಯಿ, ಕತ್ತರಿಸಿದ ಈರುಳ್ಳಿ ಹಾಕಿ ಕೆಲವು ನಿಮಿಷ ಹುರಿಯಬೇಕು. ನಂತರ ಕತ್ತರಿಸಿಕೊಂಡ ಪಾಲಾಕ್ ಸೊಪ್ಪನ್ನು ಹಾಕಿ ಹುರಿಯಬೇಕು.
2. ಇದಕ್ಕೆ 1/2 ಕಪ್ ನೀರು ಹಾಕಿ ಕುದಿಯುವವರೆಗೂ ಸಣ್ಣ ಉರಿಯಲ್ಲಿಡಬೇಕು.
3. ನಂತರ ಲವಂಗ, ಚಕ್ಕೆ, ಕರಿಮೆಣಸು ಮತ್ತು ಗೋಡಂಬಿಯನ್ನು ನುಣ್ಣಗೆ ರುಬ್ಬಿಕೊಂಡು ಪ್ರತ್ಯೇಕ ಬಾಣಲೆಯಲ್ಲಿ ಎಣ್ಣೆಗೆ ಹಾಕಿ ಹುರಿಯಬೇಕು.
4. ಪಾಲಾಕ್ ಮಿಶ್ರಣದೊಂದಿಗೆ ರುಬ್ಬಿದ ಮಿಶ್ರಣವನ್ನು ಬೆರೆಸಿ ಅಗತ್ಯವಿದ್ದರೆ ಉಪ್ಪು ಬೆರೆಸಿ ಚೆನ್ನಾಗಿ ತಿರುಗಿಸಿ ತಣ್ಣಗಾಗಲು ಬಿಡಬೇಕು. (ಅನ್ನಕ್ಕೂ ಉಪ್ಪು ಹಾಕಿದ್ದರೆ ಎಚ್ಚರಿಕೆಯಿಂದ ಉಪ್ಪನ್ನು ಬೆರೆಸಿಕೊಳ್ಳಬೇಕು)
5. ಈ ಪಾಲಾಕ್ ಮಸಾಲೆಯೊಂದಿಗೆ ಅನ್ನ ಬೆರೆಸಿ ನಿಂಬೆ ರಸವನ್ನು ಇದರ ಮೇಲೆ ಹಿಂಡಿ ಚೆನ್ನಾಗಿ ಕಲೆಸಬೇಕು. ಈಗ ಟೇಸ್ಟಿ ಪಾಲಾಕ್ ರೈಸ್ ತಿನ್ನಲು ರೆಡಿಯಾಗಿರುತ್ತೆ.



Click it and Unblock the Notifications
