Latest Updates
-
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ರುಚಿಯಾದ ಪನ್ನಿರ್ ಪಲಾವ್ ರೆಸಿಪಿ

ಬೇಕಾಗುವ ಸಾಮಾಗ್ರಿಗಳು:
* ಬಾಸುಮತಿ ಅಕ್ಕಿ 2 ಕಪ್
* ಚಕ್ಕೆ 2
* ಏಲಕ್ಕಿ 1
* ಬೆಳ್ಳುಳ್ಳಿ ಎಸಳು 2-4
* ಕಾಳುಮೆಣಸು 5-6
* ಈರುಳ್ಳಿ 1
* ಶುಂಠಿ ಪೇಸ್ಟ್ 2 ಚಮಚ
* ಹಸಿಮೆಣಸಿನ ಕಾಯಿ ಪೇಸ್ಟ್ ಒಂದೂವರೆ ಚಮಚ
* ಎಣ್ಣೆ
* ಪನ್ನೀರ್ 2 ಕಪ್
* ಟೊಮೆಟೊ 3
* ರುಚಿಗೆ ತಕ್ಕ ಉಪ್ಪು
* ಸ್ವಲ್ಪ ಕೊತ್ತಂಬರಿ ಸೊಪ್ಪು
ತಯಾರಿಸುವ ವಿಧಾನ :
1. 2 ಕಪ್ ಅಕ್ಕಿಗೆ 4 ಕಪ್ ನೀರು ಹಾಕಿ ಬೇಯಿಸಬೇಕು. ನಂತರ ಬೆಂದ ಅನ್ನವನ್ನು ಒಂದು ಪಾತ್ರೆಯಲ್ಲಿ ಹಾಕಿಡಬೇಕು.
2. ನಂತರ ಸ್ವಲ್ಪ ದೊಡ್ಡ ಪಾತ್ರೆಯನ್ನು ತೆಗೆದು ಅದರಲ್ಲಿ 2-3 ಚಮಚ ಅಡುಗೆ ಎಣ್ಣೆ ಹಾಕಿ , ಎಣ್ಣೆ ಬಿಸಿ ಮಾಡಬೇಕು. ನಂತರ ಚಕ್ಕೆ, ಏಲಕ್ಕಿ, ಬೆಳ್ಳುಳ್ಳಿ ಎಸಳು, ಸ್ವಲ್ಪ ಕಾಳು ಮೆಣಸಿನ ಪುಡಿ ಹಾಕಿ ಸ್ವಲ್ಪ ಹೊತ್ತು ಹುರಿಯಬೇಕು. ನಂತರ ಕತ್ತರಿಸಿದ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹರಿಯಬೇಕು.
3.ನಂತರ ಟೊಮೆಟೊ ಹಾಕಿ ಟೊಮೆಟೊ ಮೆತ್ತಗಾಗುವವರೆಗೆ ಸೌಟ್ ನಿಂದ ಆಡಿಸಿ, ಶುಂಠಿ ಪೇಸ್ಟ್, ಹಸಿ ಮೆಣಸಿನ ಕಾಯಿ ಪೇಸ್ಟ್ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ 1 ನಿಮಿಷ ಕಾಲ ಬಿಸಿ ಮಾಡಬೇಕು.
5. ಈಗ ಉರಿಯನ್ನು ಕಡಿಮೆ ಮಾಡಿ ಪನ್ನೀರ್ ಹಾಕಿ ಸ್ವಲ್ಪ ಹೊತ್ತು ಬಿಸಿ ಮಾಡಬೇಕು.
6. ನಂತರ ಬೇಯಿಸಿದ ಅನ್ನವನ್ನು ಈ ಮಿಶ್ರಣದಲ್ಲಿ ಹಾಕಿ 2-3 ನಿಮಿಷ ಸೌಟ್ ನಿಂದ ಆಡಿಸುತ್ತಾ ಬಿಸಿಮಾಡಬೇಕು. ನಂತರ ಪಾತ್ರೆಯನ್ನು ಉರಿಯಿಂದ ತೆಗೆದು ಕತ್ತರಿಸಿದ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಯಾದ ಪನ್ನೀರ್ ಪಲಾವ್ ರೆಡಿ.



Click it and Unblock the Notifications
