Latest Updates
-
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ! -
ಯುಸಿಸಿ ಸಮಿತಿಯಲ್ಲಿ ಭಿನ್ನಮತ: ನಿಮ್ಮ ಮದುವೆ, ಆಸ್ತಿ ಹಕ್ಕಿನ ಮೇಲೆ ಪರಿಣಾಮವೇನು? -
15 ನಿಮಿಷದ ಡೆಂಗ್ಯೂ ಹೋಮ್ ಆಡಿಟ್: ನಿಮ್ಮ ಮನೆಯೇ ಸೊಳ್ಳೆಗಳ ತಾಣವಾಗದಿರಲಿ, ಈ ಸರಳ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ನಕಲಿ ಪ್ರೋಟೀನ್ ಸಪ್ಲಿಮೆಂಟ್ಸ್ ಎಚ್ಚರಿಕೆ: ನಿಮ್ಮ ಆರೋಗ್ಯಕ್ಕೆ ಕಂಟಕವಾಗುವ ಮುನ್ನ ಈ ಲೇಬಲ್ ಚೆಕ್ ಮಾಡಿ! -
ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ 'ಡೀಪ್ ಡಿಪ್ರೆಷನ್': ನಿಮ್ಮ ಸುರಕ್ಷತೆಗಾಗಿ ಈ 15 ನಿಮಿಷಗಳ ಮುನ್ನೆಚ್ಚರಿಕೆ ಮರೆಯದಿರಿ!
ರುಚಿಕರವಾದ ರೈಸ್ ಕಿಚಡಿ ರೆಸಿಪಿ

ಬೇಕಾಗುವ ಸಾಮಾಗ್ರಿಗಳು:
* 2 ಕಪ್ ಅಕ್ಕಿ
* 1 ಕಪ್ ತೊಗರಿ ಬೇಳೆ
* 5-6 ಬೆಳ್ಳುಳ್ಳಿ ಎಸಳು
* ಕತ್ತರಿಸಿದ ಬೆಳ್ಳುಳ್ಳಿ 2
* 6-8 ಸ್ವಲ್ಪ ಚಿಕ್ಕ ಗಾತ್ರದ ಟೊಮೆಟೊ
* ಹಸಿಮೆಣಸಿನ ಕಾಯಿ 4 (ಉದ್ದವಾಗಿ ಕತ್ತರಿಸಿರಬೇಕು)
* ಸ್ವಲ್ಪ ಮೆಂತೆ ಸೊಪ್ಪು ಮತ್ತು ಸ್ವಲ್ಪ ಕೊತ್ತಂಬರಿ ಸೊಪ್ಪು
* ಒಂದೂವರೆ ಚಮಚ ಶುಂಠಿ ಪೇಸ್ಟ್
* ರುಚಿಗೆ ತಕ್ಕ ಉಪ್ಪು
* ಎಣ್ಣೆ
* 3 ಕಪ್ ನೀರು
* 1/4 ಚಮಚ ಅರಿಶಿಣ ಪುಡಿ
ತಯಾರಿಸುವ ವಿಧಾನ:
1. ತೊಗರಿಬೇಳೆಯನ್ನು ಚೆನ್ನಾಗಿ ತೊಳೆದು ಅದಕ್ಕೆ ಅರಿಶಿಣ ಪುಡಿ ಹಾಕಿ ಬೇಯಿಸಿ ಒಂದು ಪಾತ್ರೆಯಲ್ಲಿ ಹಾಕಿಡಬೇಕು. ತೊಗರಿ ಬೇಳೆ ಬೇಯಿಸಿದ ನೀರು ಬಿಸಾಡಬೇಡಿ.
2. ನಂತರ ಒಂದು ಪಾತ್ರೆಗೆ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಈರುಳ್ಳಿ, ಬೆಳ್ಳುಳ್ಳಿ, ಚಕ್ಕೆ ಮತ್ತು ಏಲಕ್ಕಿ ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಸ್ವಲ್ಪ ಮೆಂತೆ ಸೊಪ್ಪು ಮತ್ತು ಸ್ವಲ್ಪ ಕೊತ್ತಂಬರಿ ಸೊಪ್ಪು ಹಾಕಬೇಕು.
3. ನಂತರ ರುಚಿಗೆ ತಕ್ಕ ಉಪ್ಪು, ಶುಂಠಿ ಪೇಸ್ಟ್ ಹಾಕಿ 2 ನಿಮಿಷ ಕಾಲ ಹುರಿಯಬೇಕು. ನಂತರ ಟೊಮೆಟೊ ಹಾಕಿ ಟೊಮೆಟೊ ಮೆತ್ತಗಾಗುವವರೆಗೆ ಹುರಿದು ನಂತರ ತೊಳೆದ ಅಕ್ಕಿಯನ್ನು ಹಾಕಿ 2 ನಿಮಿಷ ಹುರಿಯಬೇಕು.
4. ನಂತರ ಬೇಯಿಸಿದ ತೊಗರಿ ಬೇಳೆ ಹಾಕಿ 3 ಕಪ್ ನೀರು ಹಾಕಿ ಬೇಯಿಸಬೇಕು. ತೊಗರಿ ಬೇಳೆ ನೀರು ಸೇರಿಸಿ ಬೇಯಿಸಿ. ಈಗ ಕಿಚಡಿ ರೆಡಿ. ಇದನ್ನು ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಕರವಾದ ಕಿಚಡಿ ತಿನ್ನಲು ರೆಡಿ.



Click it and Unblock the Notifications
