Latest Updates
-
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ
ಚಿಲ್ಲಿ ಬೇಬಿ ಕೋರ್ನ್ ಮಾಡುವುದು ಬಲು ಸುಲಭ

ಬೇಕಾಗುವ ಸಾಮಾಗ್ರಿಗಳು:
1. ಒಂದು ಕಪ್ ಕತ್ತರಿಸಿದ ಬೇಬಿ ಕೋರ್ನ್
2. ಕತ್ತರಿಸಿದ ಈರುಳ್ಳಿ 2
3. ಕತ್ತರಿಸಿದ ದೊಡ್ಡ ಮೆಣಸು 1(ಕ್ಯಾಪ್ಸಿಕಂ)
4. ಕಡಲೆ ಪುಡಿ 1 ಕಪ್
5. ಬೆಳ್ಳುಳ್ಳಿ ಎಸಳು 3-4
6. ಅರಿಶಿಣ ಪುಡಿ 1/4 ಚಮಚ
7. ಕೆಂಪು ಮೆಣಸಿನ ಪುಡಿ (ಖಾರಕ್ಕೆ ತಕ್ಕಷ್ಟು)
8. 1/2 ಚಮಚ ಜೀರಿಗೆ
9. ರುಚಿಗೆ ತಕ್ಕ ಉಪ್ಪು
10. ಎಣ್ಣೆ
11. ನೀರು
ತಯಾರಿಸುವ ವಿಧಾನ:
1. ಒಂದು ಬಟ್ಟಲಿನಲ್ಲಿ ಅರಿಶಿಣ ಪುಡಿ, ಕೆಂಪು ಮೆಣಸಿನ ಪುಡಿ, ಕಡಲೆ ಹಿಟ್ಟು, ಚಿಟಿಕೆಯಷ್ಟು ಉಪ್ಪು ಹಾಕಿ ಅದಕ್ಕೆ ನೀರು ಹಾಕಿ ದ್ರಾವಣ ರೂಪದಲ್ಲಿರುವಂತೆ ಮಿಶ್ರ ಮಾಡಬೇಕು.
2. ಬಾಣಲೆಗೆ ಎಣ್ಣೆ ಹಾಕಿ ಬಿಸಿ ಮಾಡಬೇಕು.
3. ಈಗ ಬೇಬಿ ಕೋರ್ನ್ ಅನ್ನು ಅದರಲ್ಲಿ ಮುಳುಗಿಸಿ ಕುದಿಯುತ್ತಿರುವ ಎಣ್ಣೆಗೆ ಹಾಕಿ ಕಂದು ಬಣ್ಣ ಬರುವಾಗ ತೆಗೆಯಬೇಕು.
4. ಈಗ ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಜೀರಿಗೆ ಹಾಕಬೇಕು. ಈಗ ಅದರಲ್ಲಿ ಬೆಳ್ಳುಳ್ಳಿ, ದೊಡ್ಡ ಮೆಣಸಿನ ಕಾಯಿ ಮತ್ತು ಈರುಳ್ಳಿಯನ್ನು ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
5. ಬೇಬಿ ಕೋರ್ನ್ ಅನ್ನು ಹುರಿದ ಈರುಳ್ಳಿಯಲ್ಲಿ ಹಾಕಿ ಸ್ವಲ್ಪ ಉಪ್ಪು ಹಾಕಿ 4-5 ನಿಮಿಷ ಬಿಸಿ ಮಾಡಿದರೆ ರುಚಿಕರವಾದ ಬೇಬಿ ಕೋರ್ನ್ ರೆಡಿ.



Click it and Unblock the Notifications
