Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮನೆಯಲ್ಲೇ ಮಾಡಬಹುದು ಶುಚಿರುಚಿ ಪಾನಿಪುರಿ

ಪಾನಿಪುರಿಯನ್ನು ಸುಲಭವಾಗಿ ತಯಾರಿಸಬಹುದಾಗಿದ್ದು ಅದರ ರೆಸಿಪಿ ನೋಡಿ ಇಲ್ಲಿದೆ.
ಬೇಕಾಗುವ ಸಾಮಗ್ರಿಗಳು:
ಪಾನಿತಯಾರಿಸಲು
ಕೊತ್ತಂಬರಿ ಸೊಪ್ಪು - 1 ಕಟ್ಟು
ಪುದೀನಾ ಸೊಪ್ಪು - 1 ಕಟ್ಟು
ಹಸಿಮೆಣಸಿನಕಾಯಿ - 2 ರಿಂದ 3
ಹುಣಸೆಹಣ್ಣು - ದೊಡ್ಡ ನಿಂಬೆಗಾತ್ರದಷ್ಟು
ನಿಂಬೆಹಣ್ಣು - 1
ಕಾಳುಮೆಣಸು - 2 ಟೀ ಚಮಚ
ಜೀರಿಗೆ - 2 ಟೀ ಚಮಚ
ಉಪ್ಪು - ರುಚಿಗೆ ತಕ್ಕಷ್ಟು
ಕುದಿಸಿ ಆರಿಸಿದ ನೀರು - ಸುಮಾರು ಒಂದೂವರೆ ಲೀಟರ್
ಆಲೂ ಪಲ್ಯ ತಯಾರಿಸಲು:
1 ದೊಡ್ಡ ಆಲೂಗಡ್ಡೆ
ಕೆಂಪು ಮೆಣಸಿನ ಪುಡಿ - 1 / 2 ಚಮಚ
ಕಾಳುಮೆಣಸಿನ ಪುಡಿ - 1 / 4 ಚಮಚ
ಉಪ್ಪು - ರುಚಿಗೆ ತಕ್ಕಷ್ಟು
ಮಾವಿನ ಹಣ್ಣಿನ ಪುಡಿ ( ಆಮ್ ಚ್ಯೂರ್) - 1 / 4 ಚಮಚ ಅಥವಾ ನಾಲ್ಕಾರು ಹನಿ ನಿಂಬೆರಸ
ಮಧ್ಯಮಗಾತ್ರದ ಈರುಳ್ಳಿ - 1
ಹೆಚ್ಚಿದ ಕೊತ್ತಂಬರಿ ಸೊಪ್ಪು - 2 ಚಮಚ
ತಯಾರಿಸುವ ವಿಧಾನ:
1. ಕರಿಮೆಣಸು, ಜೀರಿಗೆಯನ್ನು ಹುರಿದು ಪುಡಿಮಾಡಿಕೊಳ್ಳಿ. ಹರಳು ಉಪ್ಪನ್ನು ಸೇರಿಸುವುದಾದರೆ ಅದನ್ನೂ ಸ್ವಲ್ಪ ಹುರಿದುಕೊಳ್ಳಬೇಕು.
2. ಕೊತ್ತಂಬರಿ ಸೊಪ್ಪು, ಪುದೀನಾ ಸೊಪ್ಪು, ಹುಣಸೆಹಣ್ಣು, ಹಸಿಮೆಣಸು ಇಷ್ಟನ್ನೂ ಸ್ವಲ್ಪ ನೀರು ಸೇರಿಸಿ ರುಬ್ಬಿ, ಚೆನ್ನಾಗಿ ಸೋಸಿ ಇಟ್ಟುಕೊಳ್ಳಬೇಕು.
3. ಸೋಸಿಕೊಂಡ ರಸಕ್ಕೆ ಬೇಕಾದಷ್ಟು ನೀರನ್ನು ಸೇರಿಸಿ, ಪುಡಿಮಾಡಿದ ಜೀರಿಗೆ, ಕರಿಮೆಣಸನ್ನು ಸೇರಿಸಿ. ರುಚಿಗೆ ತಕ್ಕಂತೆ ಉಪ್ಪು ಮತ್ತು ನಿಂಬೆರಸವನ್ನು ಸೇರಿಸಿ ಕಲಸಬೇಕು. ಇದರ ರುಚಿ ಉಪ್ಪು, ಹುಳಿ, ಖಾರ ಹದವಾಗಿರಲಿ.
ಆಲೂ ಪಲ್ಯ
1.ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಬೇಕು.
2. ಆಲೂಗಡ್ಡೆಯನ್ನು ಬೇಯಿಸಿ, ಕೈಗಳಿಂದ ಹಿಸುಕಿ ಮೆತ್ತಗೆ ಹಿಟ್ಟಿನಂತೆ ಮಾಡಿಕೊಳ್ಳಬೇಕು.
3. ಇದಕ್ಕೆ ಹೆಚ್ಚಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಕೆಂಪು ಮೆಣಸಿನ ಪುಡಿ, ಪುಡಿಮಾಡಿದ ಕಾಳುಮೆಣಸು, ಉಪ್ಪು, ಹುಳಿ ಎಲ್ಲವನ್ನೂ ಸೇರಿಸಿ ಚೆನ್ನಾಗಿ ಮಿಶ್ರಮಾಡಬೇಕು.
ಈಗ ಗೋಲ್ ಗಪ್ಪಾ ಅಥವಾ ಪೂರಿಯನ್ನು ತೆಗೆದುಕೊಂಡು ಕೈಯಿಂದ ಒತ್ತಿ ಒಂದು ಮೇಲ್ಮೈಯಲ್ಲಿ ತೂತು ಮಾಡಿಕೊಂಡು ಪೂರಿಯ ಅರ್ಧಭಾಗದವರೆಗೆ ಪಲ್ಯವನ್ನು ತುಂಬಿ, ನಂತರ ಉಳಿದರ್ಧಕ್ಕೆ ಪಾನಿಯನ್ನು ತುಂಬಿಸಿದರೆ ರುಚಿಕರವಾದ ಪಾನಿಪುರಿ ರೆಡಿ.



Click it and Unblock the Notifications
