Latest Updates
-
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ! -
ಯುಸಿಸಿ ಸಮಿತಿಯಲ್ಲಿ ಭಿನ್ನಮತ: ನಿಮ್ಮ ಮದುವೆ, ಆಸ್ತಿ ಹಕ್ಕಿನ ಮೇಲೆ ಪರಿಣಾಮವೇನು? -
15 ನಿಮಿಷದ ಡೆಂಗ್ಯೂ ಹೋಮ್ ಆಡಿಟ್: ನಿಮ್ಮ ಮನೆಯೇ ಸೊಳ್ಳೆಗಳ ತಾಣವಾಗದಿರಲಿ, ಈ ಸರಳ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ನಕಲಿ ಪ್ರೋಟೀನ್ ಸಪ್ಲಿಮೆಂಟ್ಸ್ ಎಚ್ಚರಿಕೆ: ನಿಮ್ಮ ಆರೋಗ್ಯಕ್ಕೆ ಕಂಟಕವಾಗುವ ಮುನ್ನ ಈ ಲೇಬಲ್ ಚೆಕ್ ಮಾಡಿ! -
ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ 'ಡೀಪ್ ಡಿಪ್ರೆಷನ್': ನಿಮ್ಮ ಸುರಕ್ಷತೆಗಾಗಿ ಈ 15 ನಿಮಿಷಗಳ ಮುನ್ನೆಚ್ಚರಿಕೆ ಮರೆಯದಿರಿ!
ಅಜ್ಜಿ ಅಜ್ಜಿ ಮಾಡಿಕೊಡು ಬದನೆಕಾಯಿ ಬಜ್ಜಿ

ಎಕ್ಸಾಕ್ಟಲಿ ಇಂಥದೇ ಸಮಯದಲ್ಲಿ ಬಿಸಿಬಿಸಿಯಾದ ಬಜ್ಜಿಯನ್ನು ಕಾಫಿಯ ಜೊತೆಗೆ ತಿನ್ನಲು ಮನಸಾಗುವುದು. ಹೊರಗಡೆ ತಿಂದರೆ ಕೆಮ್ಮು ಕಸಾರಿಕೆ ಗ್ಯಾರಂಟಿ ಎಂದು ಅಂದುಕೊಳ್ಳುವವರು ಅಜ್ಜಿಗೆ ಡಿಮ್ಯಾಂಡ್ ಮಾಡಿ ಬಜ್ಜಿ ಮಾಡಿ ತಿನ್ನಿರಿ. ಬೇಸಿಗೆ ರಜಕ್ಕೆಂದು ಅಜ್ಜಿ ಮನೆಗೆ ಹೋಗಿದ್ದರೆ, ಅಜ್ಜಿ ಅಜ್ಜಿ ಮಾಡಿಕೊಡು ಬದನೆಕಾಯಿ ಬಜ್ಜಿ ಅಂತ ಕಾಡಿಸಿ ಪೀಡಿಸಿ ಮಾಡಿಸಿ ತಿನ್ನಿರಿ. ಅಜ್ಜಿ ಇಲ್ಲಂತ ಖಂಡಿತ ಹೇಳಲ್ಲ.
ಬೇಕಾಗುವ ಸಾಮಗ್ರಿಗಳು:
ಬದನೆಕಾಯಿ
ಕಡ್ಲೆಹಿಟ್ಟು - ಒಂದು ಬಟ್ಟಲು
ಅಕ್ಕಿಹಿಟ್ಟು - ಎರಡು ಚಮಚ
ಅಚ್ಚಖಾರದ ಪುಡಿ
ಉಪ್ಪು
ಓಮ್ ಕಾಳು
ಕಾದ ಎಣ್ಣೆ - ಒಂದು ಚಮಚ
ಚಿಟಿಕೆ ಸೋಡ
ಕಲೆಸಲು ಬೇಕಾಗುವಷ್ಟು ನೀರು
ಕರಿಯಲು ಎಣ್ಣೆ
ತಯಾರಿಸುವ ವಿಧಾನ:
ಬದನೆಕಾಯಿಯನ್ನು ತೆಳುವಾಗಿ ಹೆಚ್ಚಿಕೊಂಡು ಸ್ವಲ್ಪ ಉಪ್ಪು ಹಾಕಿದ ನೀರಿನಲ್ಲಿ ಹಾಕಿಡಿ.
ಕಡ್ಲೆಹಿಟ್ಟು, ಅಕ್ಕಿಹಿಟ್ಟು, ಓಮ್ ಕಾಳು, ಉಪ್ಪು, ಅಚ್ಚಖಾರದ ಪುಡಿ ಮತ್ತು ಸೋಡ ಹಾಕಿ ಚೆನ್ನಾಗಿ ಬೆರೆಸಿ, ಅದಕ್ಕೆ ಕಾದಿರುವ ಎಣ್ಣೆ ಹಾಕಿ, ಜೊತೆಯಲ್ಲಿ ನೀರು ಹಾಕಿ, ಕಲೆಸಿಕೊಳ್ಳಿ. ಎಲ್ಲವನ್ನು ಚೆನ್ನಾಗಿ ಬೆರೆಸಿ ದೋಸೆ ಹಿಟ್ಟಿನ/ಬಜ್ಜಿಹಿಟ್ಟಿನ ಹದಕ್ಕೆ ಕಲೆಸಿಕೊಳ್ಳಿ.
ಎಣ್ಣೆಯನ್ನು ಕಾಯಲು ಇಟ್ಟು, ಅದು ಕಾದ ನಂತರ, ಹೆಚ್ಚಿರುವ ಬದನೆಕಾಯಿಯನ್ನು ಕಲೆಸಿರುವ ಹಿಟ್ಟಿನಲ್ಲಿ ಅದ್ದಿ, ಕಾದಿರುವ ಎಣ್ಣೆಯಲ್ಲಿ ಅದನ್ನು ತೇಲಿಬಿಡಿ. ಅದು ಮೇಲೆ ಬಂದಾಗ ತಿರುವಿ ಹಾಕಿ, ಎರಡು ಬದಿಯೂ ಚೆನ್ನಾಗಿ ಬೇಯಿಸಿ.
ಎಣ್ಣೆಯಿಂದ ತೆಗೆದು ಪೇಪರ್ ಟವಲ್ ಮೇಲೆ ಹಾಕಿ. ರುಚಿರುಚಿಯಾದ ಬದನೆಕಾಯಿ ಬಜ್ಜಿ ತಯಾರ್. ಇದನ್ನು ಬಿಸಿಯಾಗಿ ತಿಂದರೆ ತುಂಬಾ ಚೆನ್ನಾಗಿ ಇರುತ್ತದೆ. ಬೇಕಾದರೆ ಚಟ್ನಿಯೊಂದಿಗೆ ಸರ್ವ್ ಮಾಡಬಹುದು. [ಕೃಪೆ : ಅಡುಗೆ ಸವಿರುಚಿ]



Click it and Unblock the Notifications
