Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಆಲೂಗಡ್ಡೆ ಕಟ್ಲೇಟ್ ನನಗೆ ಇನ್ನೊಂದು ಪ್ಲೇಟ್
ಬೇಕಾಗುವ ಸಾಮಗ್ರಿಗಳು :
ಮಧ್ಯಮ ಗಾತ್ರದ 2 ಆಲೂಗಡ್ಡೆ
ಈರುಳ್ಳಿ 1
ಸ್ವಲ್ಪ ತುರಿದ ಶುಂಠಿ, ಬೆಳ್ಳುಳ್ಳಿ
ಗರಮ್ ಮಸಲಾ 1/2 ಚಮಚ
ಜೋಳದ ಹಿಟ್ಟು 4 ಟೀ ಚಮಚ
ರವೆ ಹಿಟ್ಟು 3ಟೀ ಚಮಚ
ಕೊತ್ತಂಬರಿ ಸೊಪ್ಪು 8-10 ಎಸಳು,
ಒಗ್ಗರಣೆಗೆ ಸಾಸಿವೆ, ಉದ್ದಿನ ಬೆಳೆ, ಕಡಲೆ ಬೆಳೆ, ಕರಿಬೇವು
ಮಾಡುವ ವಿಧಾನ :
ಆಲೂಗಡ್ಡೆಗಳನ್ನು ಚೆನ್ನಾಗಿ ಕುದಿಸಿ, ಅವು ಚೆನ್ನಾಗಿ ಬೆಂದ ನಂತರ ಕಿವುಚಿ ಒಂದೆಡೆ ತೆಗೆದಿಡಿ. ಸ್ಟೋವ್ ಮೇಲೆ ಒಂದು ಬಾಣಲೆಯನ್ನಿಟ್ಟು ಸ್ವಲ್ಪ ಎಣ್ಣೆ ಹಾಕಿ. ಅದರಲ್ಲಿ ಹೆಚ್ಚಿದ ಈರುಳ್ಳಿಯನ್ನು ಹಾಕಿ ಚೆನ್ನಾಗಿ ಹುರಿಯಿರಿ.
ಈರುಳ್ಳಿ ಕಂದು ಬಣ್ಣಕ್ಕೆ ತಿರುಗಿದ ಬಳಿಕ ಶುಂಠಿ, ಗರಮ್ ಮಸಾಲೆ, ಹಸಿಮೆಣಸಿನ ಕಾಯಿ ಹಾಕಿ. ಅನಂತರ ಕಿವುಚಿಟ್ಟ ಆಲೂಗಡ್ಡೆಯನ್ನು ಅದರೊಳಗೆ ಸೇರಿಸಿ. ಆಮೇಲೆ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಚೆನ್ನಾಗಿ ಕಲಕಿ ಸ್ಟೋವ್‌ನಿಂದ ಕೆಳಗೆ ಇಳಿಸಿ. 5 ನಿಮಿಷಗಳ ಕಾಲ ತಣ್ಣಗಾಗಲು ಬಿಡಿ.
ಇನ್ನೊಂದೆಡೆ ಜೋಳದ ಹಿಟ್ಟು ಮತ್ತು ರವೆಯನ್ನು ಸೇರಿಸಿ. ಅದಕ್ಕೆ ಸ್ವಲ್ಪ ಬಿಸಿ ನೀರನ್ನು ಹಾಕಿ ಚೆನ್ನಾಗಿ ನಾದಿಕೊಳ್ಳಿ. ಆಲೂಗಡ್ಡೆ ಮಿಶ್ರಣವನ್ನು ಕಟ್ಲೇಟ್ ಆಕಾರಕ್ಕೆ ತಟ್ಟಿಕೊಳ್ಳಿ. ತಟ್ಟಿಕೊಂಡ ಆಲೂಗಡ್ಡೆ ಮಿಶ್ರಣದ ಎರಡು ಬದಿ ರವೆ ಹಿಟ್ಟು, ಜೋಳದ ಹಿಟ್ಟು ಹಚ್ಚಿ. ನಂತರ ಸ್ಟೋವ್ ಮೇಲಿನ ಕಾಯ್ದ ಎಣ್ಣೆಯಲ್ಲಿ ಒಂದೊಂದೆ ಕಟ್ಲೇಟ್ ತೇಲಿ ಬಿಡಿ. ಕಟ್ಲೇಟ್ ಕೆಂಪಾದ ಬಳಿಕ ಹೊರ ತೆಗೆಯಿರಿ. ರುಚಿಯಾದ ಕಟ್ಲೇಟ್ ಈಗ ತಿನ್ನಲು ರೆಡಿ.



Click it and Unblock the Notifications
